ಕ್ರಿಯಾಶೀಲರಾದಾಗ ಉನ್ನತ ಸಾಧನೆ ಸಾಧ್ಯ: ಪ್ರೊ. ಕಾಳೇಗೌಡ ನಾಗವಾರ

KannadaprabhaNewsNetwork |  
Published : Nov 19, 2024, 12:52 AM IST
36 | Kannada Prabha

ಸಾರಾಂಶ

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಿತ್ತು. ಹಾಗೆಯೆ ದೀಪಾ ಸಂತೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.

ಕನ್ನಡಪ್ರಭ ವಾರ್ತೆ ಮೈಸೂರು

ತೊಂದರೆಗಳ ನಡುವೆಯೂ ಕ್ರಿಯಾಶೀಲರಾದಾಗ ಉನ್ನತ ಸಾಧನೆ ಸಾಧ್ಯವಾಗುತ್ತದೆ ಎಂದು ಕರ್ನಾಟಕ ಜಾನಪದ ಮತ್ತು ಯಕ್ಷಗಾನ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ. ಕಾಳೇಗೌಡ ನಾಗವಾರ ಅಭಿಪ್ರಾಯಪಟ್ಟರು.

ದೀಪಾ ಶಾಲೆಯಲ್ಲಿ ಸೋಮವಾರ ನಡೆದ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಹಾಗೂ ಕನಕದಾಸ ಜಯಂತಿ ಉದ್ಘಾಟಿಸಿ ಅವರು ಮಾತನಾಡಿದರು.

ಮುಖ್ಯಅತಿಥಿಯಾಗಿದ್ದ ಕಾವೇರಿ ಜಲಾನಯನ ಯೋಜನೆ, ಅಚ್ಚುಕಟ್ಟು ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪಿ. ಮರಿಸ್ವಾಮಿ ಮಾತನಾಡಿ, ಕನ್ನಡಾಭಿಮಾನವನ್ನು ಬೆಳೆಸಿಕೊಳ್ಳುವಂತೆ ಕರೆ ನೀಡಿದರು. ಅಧ್ಯಕ್ಷತೆಯನ್ನು ದೀಪಾ ಸಂಸ್ಥೆಯ ಅಧ್ಯಕ್ಷ ಎಂ. ರಾಮಪ್ಪ ವಹಿಸಿದ್ದರು.

ಉಪಾಧ್ಯಕ್ಷ ಸದಾಶಿವ ಪೂಜಾರಿ, ನಿರ್ದೇಶಕರಾದ ಬಾಲಕೃಷ್ಣ, ಪ್ರಾಂಶುಪಾಲೆ ಪ್ರಣಿತ ಎರ್ಮಾಳ್, ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಶಿಲ್ಪ ಜಗದೀಶ್, ದೀಪಾ ಕಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರಾದ ಎ.ಕೆ. ಬಾಬು, ಸಹ ಮುಖ್ಯೋಪಾಧ್ಯಾಯ ತುಳಸಿ, ಸಂಯೋಜಕರಾದ ರವಿಶಂಕರ್, ವಾರುಣಿ, ನಿರೂಪಕರಾದ ಕುಸುಮ, ರವಿಜಾ ಹೆಗಡೆ ಹಾಗೂ ಎಲ್ಲ ಉಪನ್ಯಾಸ, ಶಿಕ್ಷಕ, ಶಿಕ್ಷಕೇತರ ವೃಂದದವರು ಹಾಗೂ ವಿದ್ಯಾರ್ಥಿಗಳು ಅತ್ಯುತ್ಸಾಹದಿಂದ ಭಾಗವಹಿಸಿ ಕಾರ್ಯಕ್ರಮ ಯಶಸ್ವಿಗೊಳಿಸಿದರು.

ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರವನ್ನು ಏರ್ಪಡಿಸಿತ್ತು. ಹಾಗೆಯೆ ದೀಪಾ ಸಂತೆಯಲ್ಲಿ ವಿದ್ಯಾರ್ಥಿಗಳು ಮತ್ತು ಪೋಷಕರು ಭಾಗವಹಿಸಿ ಕಾರ್ಯಕ್ರಮಕ್ಕೆ ಮೆರಗು ನೀಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬಿಪಿಎಲ್‌ ಮಾನದಂಡ ಬದಲಿಗೆ ಮುಂದಾದ ರಾಜ್ಯ
ಸರ್ಕಾರಿ ಶಾಲೆಗೆ ಶೀಘ್ರ 11000 ಶಿಕ್ಷಕರ ನೇಮಕ : ಮಧು