ಅಧಿಕಾರ ಹಂಚಿಕೆ ಬಗ್ಗೆ ಹೈಕಮಾಂಡ್‌ ನಿರ್ಧಾರ : ಎಂ.ಬಿ.ಪಾಟೀಲ

KannadaprabhaNewsNetwork |  
Published : Oct 04, 2025, 01:00 AM IST
ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ: ಸಚಿವ ಎಂಬಿಪಾ | Kannada Prabha

ಸಾರಾಂಶ

ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧಾರ ಮಾಡುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದರು.

 ವಿಜಯಪುರ :  ಅಧಿಕಾರ ಹಂಚಿಕೆ ಕುರಿತು ಹೈಕಮಾಂಡ್ ನಿರ್ಧಾರವೇ ಅಂತಿಮ. ನಮ್ಮ ಪಕ್ಷದಲ್ಲಿ ಎಲ್ಲಾ ವಿಚಾರಗಳ ಬಗ್ಗೆ ಹೈಕಮಾಂಡ್ ಅಂತಿಮವಾಗಿ ನಿರ್ಧಾರ ಮಾಡುತ್ತದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಎಂ.ಬಿ.ಪಾಟೀಲ ಹೇಳಿದರು.

ಮುಂದಿನ ಅವಧಿಗೂ ನಾನೇ ಸಿಎಂ ಎಂದು ಮೈಸೂರಲ್ಲಿ ಸಿಎಂ ಸಿದ್ದರಾಮಯ್ಯ ಹೇಳಿಕೆ ವಿಚಾರದ ಕುರಿತು ನಗರದಲ್ಲಿ ಶುಕ್ರವಾರ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷರೇ ಹೇಳಿದ್ದಾರೆ. ಅಧಿಕಾರ ಹಂಚಿಕೆ ಕುರಿತು ಮಾತನಾಡುವ ಅಧಿಕಾರ ಯಾರಿಗೂ ಇಲ್ಲ. ಎಲ್ಲ ನಿರ್ಧಾರಗಳು ಹೈಕಮಾಂಡ್ ಮಟ್ಟದಲ್ಲಿ ಆಗುತ್ತವೆ ಎಂದರು.ಮುಂದಿನ ಎರಡೂವರೆ ವರ್ಷ ನಾನೇ ಸಿಎಂ ಆಗಿರುವೆ, ಮುಂದಿನ ದಸರಾ ಆಚರಣೆ ನೇತೃತ್ವವನ್ನು ನಾನೇ ಮಾಡಬಹುದು ಎಂಬ ಸಿಎಂ ಹೇಳಿಕೆ ವಿಚಾರದ ಬಗ್ಗೆ ಮಾತನಾಡಿ, ಅವರು ಸಿಎಂ ಇದ್ದಾರೆ. ಜನರು‌ ಕೇಳಿದಾಗ ಹಾಗೇ ಹೇಳಬೇಕಾಗುತ್ತದೆ. ಜನರು‌ ಕೇಳಿದಾಗ ನಾನು ಬಿಡುತ್ತೇನೆ ಎಂದು‌ ಹೇಳುತ್ತಾರೆಯೇ? ಅಕ್ಟೋಬರ್‌ ಕ್ರಾಂತಿ ಅಂದರು, ಈಗ ನವೆಂಬರ್‌ ಕ್ರಾಂತಿ ಎನ್ನುತ್ತಾರೆ. ಮುಂದೆ ಡಿಸೆಂಬರ್‌ ಬರುತ್ತದೆ. ಪವರ್‌ ಶೇರಿಂಗ್ ಬಗ್ಗೆ ನನಗೇನೂ ಗೊತ್ತಿಲ್ಲ. ಅದೇನಿದ್ದರೂ ಹೈಕಮಾಂಡ್‌ಗೆ ಗೊತ್ತು. ಒಂದು ವೇಳೆ ಪವರ್‌ ಶೇರಿಂಗ್ ಆಗಿದ್ದರೆ ಸಿಎಂ ಹಾಗೂ ಡಿಸಿಎಂ ಅವರಿಗೆ ಗೊತ್ತು. ನನಗೆ ಯಾವುದೇ ವಿಷಯ ಗೊತ್ತಿಲ್ಲ ಎಂದು ಹೇಳಿದರು.

ಭೀಮಾನದಿ ಪ್ರವಾಹ ಪೀಡಿತ ಪ್ರದೇಶಗಳಿಗೆ ಬಿಜೆಪಿ ನಿಯೋಗ ಭೇಟಿ ನೀಡಿರುವ ಕುರಿತು ಮಾತನಾಡಿ, ಪ್ರವಾಹ ಕುರಿತು ಸಿಎಂ ಹಾಗೂ ನಾವು ವೈಮಾನಿಕ ಸಮೀಕ್ಷೆ ಮಾಡಿದ ಬಳಿಕ ತುರ್ತಾಗಿ ಪರಿಹಾರ ಘೋಷಣೆ ಮಾಡಿದ್ದೇವೆ. ಪ್ರತಿ ಹೆಕ್ಟೇರ್‌ಗೆ ₹17,000 ಘೋಷಣೆ ಮಾಡಿದ್ದೇವೆ. ಕೇಂದ್ರದ 14ನೇ ಫೈನಾನ್ಸ್ ಕಮೀಷನ್ ₹60 ರಿದ 70 ಸಾವಿರ ಕೋಟಿ ನಮ್ಮ ರಾಜ್ಯಕ್ಕೆ ಬರುವಂಥದ್ದು ಬಂದಿಲ್ಲ. ಇದು ನಮ್ಮ ರಾಜ್ಯಕ್ಕೆ ಅನ್ಯಾಯವಾಗಿದೆ. ಭದ್ರಾ ಮೇಲ್ದಂಡೆ ಯೋಜನೆಗೆ ₹5800 ಕೋಟಿ ಕೇಂದ್ರದ ಕ್ಯಾಬಿನೆಟ್‌ನಲ್ಲಿ ಘೋಷಣೆ ಮಾಡಲಾಗಿತ್ತು. ಆದರೆ, ಇಲ್ಲಿವರೆಗೆ ಒಂದು ರೂಪಾಯಿಯೂ ಬಂದಿಲ್ಲ. ಮೊದಲು ಬಿಜೆಪಿಯವರು ಆ ಕೆಲಸ ಮಾಡಿಸಲಿ. ಎನ್‌ಡಿಆರ್‌ಎಫ್ ನಾರ್ಮ್ಸ್ ರಿವೈಸ್ ಮಾಡಲು ಹೇಳಲಿ. ₹8500 ಇರೋದನ್ನು ₹20,000 ಮಾಡಿಸಲಿ. ಈ ಬಗ್ಗೆ ದೆಹಲಿಗೆ ಹೋಗಿ ಕೇಳಲಿ ಎಂದು ತಿರುಗೇಟು ನೀಡಿದರು.

ರಾಜ್ಯದ ಬಿಜೆಪಿಯವರಿಗೆ ದೆಹಲಿಗೆ ಹೋಗುವ ತಾಕತ್ತು ಇಲ್ಲ, ಧೈರ್ಯವೂ ಇಲ್ಲ. ದೆಹಲಿಗೆ ಹೋದರೆ ಬೈಯ್ಯುತ್ತಾರೆ ಎಂಬ ಭಯವಿದೆ. ಇಲ್ಲೇ ಸುಮ್ಮನೆ ಸುತ್ತಾಡುತ್ತಾರೆ. ರಾಜ್ಯ‌ ಬಿಜೆಪಿಯಲ್ಲಿ ವಿಜಯೇಂದ್ರ, ಆರ್‌.ಅಶೋಕ, ಜೋಶಿ, ಸೋಮಣ್ಣ ಸೇರಿ ಇಪ್ಪತ್ತು ಟೀಂಗಳಿವೆ. ಬಿಜೆಪಿಯಲ್ಲಿ ಬಾಗಿಲು ಒಂದಲ್ಲ, ನೂರು ಇವೆ. ಅವರು ಪ್ರವಾಹ ತಗ್ಗಿದ ಮೇಲೆ ಬರುತ್ತಿದ್ದಾರೆ. ಈಗ ಬಂದು ಏನು ಮಾಡುತ್ತಾರೆ?. ನಾವು ಪ್ರವಾಹ ಪರಿಸ್ಥಿತಿ ವೀಕ್ಷಣೆ ಮಾಡಿ ಪರಿಹಾರ‌ ಕೊಡುತ್ತಿದ್ದೇವೆ. ಬಿಜೆಪಿಯವರು ಟ್ರೇನ್ ಹೋದ ಮೇಲೆ ಟಿಕೆಟ್ ತೆಗೆಸುತ್ತಿದ್ದಾರೆ.

- ಎಂ.ಬಿ.ಪಾಟೀಲ, ಜಿಲ್ಲಾ ಉಸ್ತುವಾರಿ ಸಚಿವ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

‘ಕನ್ನಡಪ್ರಭ, ಏಷ್ಯಾನೆಟ್‌ ಸುವರ್ಣ ನ್ಯೂಸ್‌’ನ ಸಹಯೋಗದಲ್ಲಿ ಆಯೋಜಿಸಿದ್ದ ‘ಕೆಂಗೇರಿ ಸಂಭ್ರಮ’ಕ್ಕೆ ವಿದ್ಯುಕ್ತ ತೆರೆ
ಸರ್ವಾಧ್ಯಕ್ಷರಾಗಿ ಸೋಮಲಿಂಗ ಗೆಣ್ಣೂರ ಆಯ್ಕೆ