)
ಕನ್ನಡಪ್ರಭ ವಾರ್ತೆ ಬೆಂಗಳೂರು
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ನಡೆದಿರುವ ಸ್ಟಿಂಗ್ ಆಪರೇಷನ್‌ನಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರೇ ಭಾಗಿಯಾಗಿರುವ ಕುರಿತು ಸಚಿವ ಯತೀಂದ್ರ ಅವರ ಬಳಿ ಏನಾದರೂ ಮಾಹಿತಿ ಇರಬಹುದು. ಹಾಗಾಗಿ ಅವರು ಕಾಂಗ್ರೆಸ್ ಮುಖಂಡರು ಭಾಗಿಯಾಗಿದ್ದಾರೆ ಎಂದಿರಬಹುದು ಎಂದರು.
ಈಗಾಗಲೇ ಕೃಪಾ ಆಳ್ವಾ ಅವರಿಗೂ ಪಕ್ಷದಿಂದ ನೋಟಿಸ್ ನೀಡಲಾಗಿದೆ. ಕೆಪಿಸಿಸಿ ಅಧ್ಯಕ್ಷರು ಈ ವಿಚಾರವನ್ನು ಹೈಕಮಾಂಡ್ ಗಮನಕ್ಕೂ ತಂದಿರಬಹುದು ಎಂದ ಅವರು, ಪ್ರತಿದಿನ ಬೆಳಗ್ಗೆ ಎದ್ದರೆ ಇದೇ ವಿಷಯ ಚರ್ಚೆಗೆ ಬರುತ್ತಿರುವುದು ದುರದೃಷ್ಟಕರ. ಇದರಿಂದ ಜನರ ನಿರೀಕ್ಷೆಯಂತೆ ಕೆಲಸಗಳು ಆಗುತ್ತಿಲ್ಲ ಎಂಬ ಭಾವನೆ ಮೂಡುತ್ತಿದೆ. ರಾಜ್ಯದಲ್ಲಿ ಶೇ. 80ರಷ್ಟು ಬೆಳೆ ನಾಶವಾಗಿದ್ದು, ಮುಂದಿನ ದಿನಗಳಲ್ಲಿ ಆಹಾರ ಧಾನ್ಯಗಳ ಕೊರತೆ ಎದುರಾಗುವ ಆತಂಕವಿದೆ. ಇಂತಹ ಗಂಭೀರ ಬರ ಪರಿಸ್ಥಿತಿಯನ್ನು ಬದಿಗೊತ್ತಿ ಇಂಥ ವಿಷಯಗಳ ಚರ್ಚೆಯಾಗುತ್ತಿರುವುದು ಸರಿಯಲ್ಲ ಎಂದರು.ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹಾಗೂ ರಾಜ್ಯದ ಸಂಸದರು ಕೇಂದ್ರದಿಂದ ಬರ ಪರಿಹಾರ ತರಲು ನೆರವಾಗಬೇಕು.ರಾಜ್ಯದಲ್ಲಿ ಬರ ಪರಿಸ್ಥಿತಿ ಕುರಿತು ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದೊಯ್ಯಲು ಅನುಮತಿ ಕೋರಲಾಗಿದ್ದು, ಕೇಂದ್ರದಿಂದ ಇನ್ನೂ ಅನುಮತಿ ಸಿಕ್ಕಿಲ್ಲ ಎಂದು ಹೇಳಿದರು.
ಬರದ ಹಿನ್ನೆಲೆಯಲ್ಲಿ ರೈತರಿಗೆ ಘೋಷಿಸಲಾಗಿದ್ದ 2,500 ರು. ಪರಿಹಾರ ಇನ್ನೂ ತಲುಪದಿರುವ ಕುರಿತು ಅಸಮಾಧಾನ ವ್ಯಕ್ತಪಡಿಸಿದ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್, ನಾವು ಪರಿಹಾರ ಘೋಷಣೆ ಮಾಡಿದ್ದೇವೆ, ಆರ್ಥಿಕ ಇಲಾಖೆಯ ಅನುಮತಿಯೂ ಸಿಕ್ಕಿದೆ. ಆದರೂ ಸರ್ಕಾರ ಇನ್ನೂ ಹಣ ಬಿಡುಗಡೆ ಮಾಡಿಲ್ಲ. ಆದಷ್ಟು ಬೇಗ ರೈತರಿಗೆ ಬರ ಪರಿಹಾರದ ಹಣ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.