ರಾಮನಗರ: ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಚರ್ಚಿಸಲು ಪಕ್ಷದ ವರಿಷ್ಠರಿಂದ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಬುಲಾವ್ ಬಂದಿದ್ದು, ಫೆ.22 ಅಥವಾ 26ರಂದು ಅವರು ದೆಹಲಿಗೆ ತೆರಳಿದ ಬಳಿಕ ಸಿಹಿ ಸುದ್ಧಿ ಸಿಗುವ ವಿಶ್ವಾಸವಿದೆ ಎಂದು ಶಾಸಕ ಇಕ್ಬಾಲ್ ಹುಸೇನ್ ಪ್ರತಿಕ್ರಿಯಿಸಿದರು.
ರಾಜ್ಯದಲ್ಲಿ ಅವರಿಗೆ ವಿಶೇಷ ಗೌರವ ಇದೆ. ಅಷ್ಟೇ ಅಲ್ಲ, ಎಲ್ಲ ರಾಜಕೀಯ ಪಕ್ಷಗಳು ಸಿದ್ದರಾಮಯ್ಯವವರ ಬಗ್ಗೆ ಅಪಾರವಾದ ಗೌರವ ಇಟ್ಟುಕೊಂಡಿದ್ದಾರೆ ಎಂದು ಹೇಳಿದರು.
ಮುಖ್ಯಮಂತ್ರಿ ಬದಲಾವಣೆ ವಿಚಾರವಾಗಿ ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆಯಾಗಲಿ ಅಥವಾ ಪಟ್ಟಭದ್ರಹಿತಾಸಕ್ತಿ ಉಳ್ಳವರಾಗಲಿ ಏನೂ ಇಲ್ಲ. ಶಾಸಕರು ಬದಲಾವಣೆ ಬಯಸಿದ್ದು, ಬೇರೆಯವರಿಗೆ ಅವಕಾಶ ನೀಡುವಂತೆ ಮನವಿ ಮಾಡುತ್ತಿದ್ದಾರೆ. ಇದರಿಂದ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ಒಳ್ಳೆಯದಾಗಲಿದ್ದು, 2028ರ ಚುನಾವಣೆಗೆ ಮತ್ತಷ್ಟು ಬಲ ಸಿಗುತ್ತದೆ ಎಂಬುದನ್ನು ಮನವರಿಕೆ ಮಾಡಿಕೊಡುತ್ತಿದ್ದೇವೆ ಅಷ್ಟೇ. ಇದರಲ್ಲಿ ಗುಂಪುಗಾರಿಕೆ ಏನು ಇಲ್ಲ ಎಂದು ಹೇಳಿದರು.ಸಚಿವರು ಮತ್ತು ಕಾಂಗ್ರೆಸ್ ಶಾಸಕರ ಹೇಳಿಕೆ ಪ್ರತಿ ಹೇಳಿಕೆಗಳಿಂದ ರಾಜ್ಯ ಸರ್ಕಾರಕ್ಕೆ ಡ್ಯಾಮೇಜ್ ಆಗುತ್ತಿದ್ದು, ಅದನ್ನು ಸರಿಪಡಿಸಬೇಕೆಂಬುದೇ ಎಲ್ಲರ ಬೇಡಿಕೆಯಾಗಿದೆ. ಇದಕ್ಕೆ ಹಿರಿಯ ನಾಯಕರಾದ ಸಚಿವ ಸತೀಶ್ ಜಾರಕಿಹೊಳಿ ಧ್ವನಿಗೂಡಿಸಿದ್ದಾರೆ. ಆದಷ್ಟು ಬೇಗ ಗೊಂದಲ ನಿವಾರಣೆಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.
ಬಾಕ್ಸ್.............
ರಾಮನಗರ: ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯ ಸುವರ್ಣ ಮಹೋತ್ಸವದ ಅಂಗವಾಗಿ 200 ಫಲಾನುಭವಿಗಳಿಗೆ ಶಾಸಕ ಇಕ್ಬಾಲ್ ಹುಸೇನ್ ಹಕ್ಕುಪತ್ರ ವಿತರಿಸಿದರು.
2016 ರಿಂದ 2026ರವರೆಗೆ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಹಕ್ಕು ಪತ್ರ ವಿತರಣೆ ಮಾಡದ ಕಾರಣ ಬಡವರು ವಂಚಿತರಾಗಿದ್ದರು. ಈ ವಿಚಾರವನ್ನು ಮುಖ್ಯಮಂತ್ರಿ , ಉಪಮುಖ್ಯಮಂತ್ರಿ ಹಾಗೂ ವಸತಿ ಸಚಿವರ ಗಮನಕ್ಕೆ ತಂದು 1500 ಜನರಿಗೆ ಹಕ್ಕುಪತ್ರ ವಿತರಿಸಲು ಉದ್ದೇಶಿಸಲಾಗಿದ್ದು, ಇದರಲ್ಲಿ 2 ಸಾವಿರ ಶುಲ್ಕ ಪಾವತಿಸಿದ 200 ಮಂದಿಗೆ ಹಕ್ಕು ಪತ್ರ ನೀಡಲಾಗುತ್ತಿದೆ ಎಂದು ಹೇಳಿದರು.
ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಸಿಎನ್ಆರ್ ವೆಂಕಟೇಶ್, ನಗರಸಭೆ ಉಪಾಧ್ಯಕ್ಷೆ ಗಿರಿಜಮ್ಮ, ಸದಸ್ಯರಾದ ಆಯಿಷಾ ಬಾನು, ಗೋವಿಂದ ರಾಜು, ಮುಖಂಡರಾದ ರೈಡ್ ನಾಗರಾಜು, ಗುಡ್ಡೆ ವೆಂಕಟೇಶ್ ಕರ್ನಾಟಕ ಕೊಳಗೇರಿ ಅಭಿವೃದ್ದಿ ಮಂಡಳಿಯ ಉಪ ನಿರ್ದೇಶಕ ಶಶಿಕುಮಾರ್, ನಗರಸಭೆ ಪೌರಾಯುಕ್ತ ಡಾ.ಜಯಣ್ಣ ಮತ್ತಿತರರು ಹಾಜರಿದ್ದರು.
ರಾಮನಗರದ ಶಾಸಕರ ಕಚೇರಿ ಮುಂಭಾಗದಲ್ಲಿ ಶನಿವಾರ ಆಯೋಜಿಸಿದ್ದ ಸಮಾರಂಭದಲ್ಲಿ ಶಾಸಕ ಎಚ್.ಎ.ಇಕ್ಬಾಲ್ ಹುಸೇನ್ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡಿದರು.