ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ

KannadaprabhaNewsNetwork |  
Published : Oct 31, 2026, 03:45 AM ISTUpdated : Oct 31, 2026, 04:35 AM IST
Karnataka High Court

ಸಾರಾಂಶ

ಕ್ರಿಮಿನಲ್‌ ಪ್ರಕರಣಗಳಲ್ಲಿ ತನಿಖೆಗೆ ತಡೆಯಾಜ್ಞೆ ನೀಡಿದ್ದರೂ ದೋಷಾರೋಪ ಪಟ್ಟಿ ಸಲ್ಲಿಸುತ್ತಿರುವ ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.ಕ್ರಿಮಿನಲ್ ಪ್ರಕರಣವೊಂದನ್ನು ರದ್ದುಪಡಿಸುವಂತೆ ಕೋರಿ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ

ಬೆಂಗಳೂರು : ಕ್ರಿಮಿನಲ್‌ ಪ್ರಕರಣಗಳಲ್ಲಿ ತನಿಖೆಗೆ ತಡೆಯಾಜ್ಞೆ ನೀಡಿದ್ದರೂ ದೋಷಾರೋಪ ಪಟ್ಟಿ ಸಲ್ಲಿಸುತ್ತಿರುವ ಪೊಲೀಸರ ಕಾರ್ಯ ವೈಖರಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಪ್ರಕರಣವೊಂದನ್ನು ರದ್ದುಪಡಿಸುವಂತೆ ಕೋರಿ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ,

ಕ್ರಿಮಿನಲ್ ಪ್ರಕರಣವೊಂದನ್ನು ರದ್ದುಪಡಿಸುವಂತೆ ಕೋರಿ ಆರೋಪಿಯೊಬ್ಬ ಸಲ್ಲಿಸಿದ್ದ ಅರ್ಜಿ ವಿಚಾರಣೆ, ನ್ಯಾಯಮೂರ್ತಿ ವಿ. ಶ್ರೀಶಾನಂದ ಅವರ ಪೀಠದ ಮುಂದೆ ಬಂದಿತ್ತು.

ಆರೋಪಿ ಪರ ವಕೀಲರು, ಅರ್ಜಿದಾರರ ವಿರುದ್ಧದ ಕ್ರಿಮಿನಲ್‌ ಪ್ರಕರಣದಲ್ಲಿನ ತನಿಖೆಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದೆ. ಆದರೆ, ಪೊಲೀಸರು ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ತಡೆಯಾಜ್ಞೆ ಸಲ್ಲಿಸಿದ್ದಾರೆ ಎಂದು ನ್ಯಾಯಮೂರ್ತಿಗಳ ಗಮನಕ್ಕೆ ತಂದರು.

ಪ್ರಕರಣದ ಕುರಿತು ಅಗತ್ಯ ಮಾಹಿತಿ ಪಡೆದು ತಿಳಿಸಲಾಗುವುದು

ಈ ಮಾತಿಗೆ ಸರ್ಕಾರಿ ಅಭಿಯೋಜಕರನ್ನು ಉದ್ದೇಶಿಸಿ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ತನಿಖೆಗೆ ತಡೆಯಾಜ್ಞೆ ನೀಡಿದ್ದರೂ ಹೇಗೆ ತನಿಖೆ ನಡೆಸಿ ವಿಚಾರಣಾ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. ಏಕೆ ಹೀಗೆಲ್ಲಾ ಮಾಡುತ್ತಿದ್ದಾರೆ ಎಂದಾಗ ಸರ್ಕಾರಿ ವಕೀಲರು, ಪ್ರಕರಣದ ಕುರಿತು ಅಗತ್ಯ ಮಾಹಿತಿ ಪಡೆದು ತಿಳಿಸಲಾಗುವುದು ಎಂದು ತಿಳಿಸಿದರು.

ಆಗ ನ್ಯಾಯಮೂರ್ತಿಗಳು, ಇದೊಂದೇ ಪ್ರಕರಣವಲ್ಲ. ಹಲವು ಪ್ರಕರಣಗಳಲ್ಲಿ ಇದೇ ರೀತಿ ಪೊಲೀಸರು ನಡೆದುಕೊಂಡಿದ್ದಾರೆ. ಅವರಿಗೆ ಮೈ ಮೇಲೆ ಪ್ರಜ್ಞೆ ಇದೆಯೋ? ಅಥವಾ ಇಲ್ಲವೋ? ದುರಂಹಕಾರ ತಲೆಗೇರಿದರೆ ಪೊಲೀಸರು ಈ ರೀತಿ ನಡೆದುಕೊಳ್ಳುತ್ತಾರೆ. ಮೇಲಾಧಿಕಾರಿಗಳು ಏನು ಮಾಡುತ್ತಿದ್ದಾರೆ? ತನಿಖಾಧಿಕಾರಿಗಳು ನ್ಯಾಯಾಲಯದ ಆದೇಶದ ವಿರುದ್ಧ ನಡೆದುಕೊಳ್ಳುತ್ತಿದ್ದರೂ, ಅದನ್ನು ನೋಡಿಕೊಂಡು ಸುಮ್ಮನಿದ್ದಾರೆ. ತನಿಖಾಧಿಕಾರಿಯನ್ನು ಸೇವೆಯಿಂದ ಅಮಾನತು ಮಾಡಿದರೆ ಸರಿ ಹೋಗುತ್ತದೆ. ಕೇವಲ ತನಿಖಾಧಿಕಾರಿಯನ್ನು ಅಮಾನತು ಮಾಡಿದರೆ ಸಾಲದು. ಅವರ ಮೇಲಾಧಿಕಾರಿಯ ವಿರುದ್ಧ ಕ್ರಮ ಜರುಗಿಸಲು ಸರ್ಕಾರಕ್ಕೆ ಆದೇಶಿಸಲಾಗುವುದು ಎಂದು ನ್ಯಾಯಮೂರ್ತಿಗಳು ಎಚ್ಚರಿಕೆ ನೀಡಿದರು. ನಂತರ ಸರ್ಕಾರಿ ಅಭಿಯೋಜಕರ ಮನವಿ ಮೇರೆಗೆ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿಗಳು ಮುಂದೂಡಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ
ಎಥೆನಾಲ್‌ಗೆ ಕಬ್ಬು ಬಳಕೆ ನಿಷೇಧ : ಕೇಂದ್ರ, ರಾಜ್ಯಕ್ಕೆ ಹೈ ನೋಟಿಸ್‌