ಹೈಕೋರ್ಟ್‌ ಅಸ್ತು: ಅಂಜನಾದ್ರಿದಲ್ಲಿ ವಿದ್ಯಾದಾಸ್ ಬಾಬಾರಿಂದ ಪೂಜಾ ಕಾರ್ಯಕ್ಕೆ ಚಾಲನೆ

KannadaprabhaNewsNetwork |  
Published : Jun 03, 2025, 12:48 AM IST
2ುಲು5 | Kannada Prabha

ಸಾರಾಂಶ

ಧಾರವಾಡ ಹೈಕೋರ್ಟ್ ಪೀಠ, ಎಂದಿನಂತೆ ಅರ್ಚಕ ವಿದ್ಯಾದಾಸ್ ಬಾಬಾ ಅವರು ಪೂಜಾ ಕಾರ್ಯ ನಡೆಸಬೇಕೆಂದು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬಾಬಾ ಅವರು ಆಂಜನೇಯಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿದರು.

ಗಂಗಾವತಿ:

ತಾಲೂಕಿನ ಐತಿಹಾಸಿಕ ಅಂಜನಾದ್ರಿ ಬೆಟ್ಟದ ಆಂಜನೇಯಸ್ವಾಮಿ ದೇಗುಲದಲ್ಲಿ ಅರ್ಚಕರಾಗಿರುವ ವಿದ್ಯಾದಾಸ್ ಬಾಬಾ ಅವರು ಹೈಕೋರ್ಟ್ ಆದೇಶದ ಹಿನ್ನೆಲೆಯಲ್ಲಿ ಸೋಮವಾರದಿಂದ ಪೂಜಾ ಕಾರ್ಯಕ್ಕೆ ಚಾಲನೆ ನೀಡಿದರು.

ಧಾರವಾಡ ಹೈಕೋರ್ಟ್ ಪೀಠ, ಎಂದಿನಂತೆ ಅರ್ಚಕ ವಿದ್ಯಾದಾಸ್ ಬಾಬಾ ಅವರು ಪೂಜಾ ಕಾರ್ಯ ನಡೆಸಬೇಕೆಂದು ಆದೇಶ ನೀಡಿದ್ದ ಹಿನ್ನೆಲೆಯಲ್ಲಿ ಬಾಬಾ ಅವರು ಆಂಜನೇಯಸ್ವಾಮಿಗೆ ಅಭಿಷೇಕ, ವಿಶೇಷ ಅಲಂಕಾರ ಸೇರಿದಂತೆ ಧಾರ್ಮಿಕ ಕಾರ್ಯಕ್ರಮ ನಡೆಸಿದರು.

ಈ ವೇಳೆ ಮಾತನಾಡಿದ ಬಾಬಾ ಅವರು, ಸತ್ಯಕ್ಕೆ ಜಯ ದೊರೆತಿದೆ. ಈ ಹಿನ್ನೆಲೆಯಲ್ಲಿ ಈ ಹಿಂದಿನಂತೆ ದೇವಸ್ಥಾನದ ಸುತ್ತಮುತ್ತಲಿನ ಪ್ರದೇಶಗಳ ಸ್ವಚ್ಛತೆ, ಧಾರ್ಮಿಕ ಪೂಜಾ ಕಾರ್ಯಕ್ರಮಗಳು, ಸಂಸ್ಕೃತ ಪಾಠಶಾಲೆ ಆರಂಭ, ಭಕ್ತರ ಇಷ್ಟಾರ್ಥಗಳನ್ನು ಈಡೇರಿಸಲು ಹೋಮ-ಹವನ, ದಿನ ಪ್ರತಿ ಹನುಮಾನ ಚಾಲೀಸಾ ಪಠಣ ನಡೆಸಿಕೊಂಡು ಹೋಗುವುದಾಗಿ ತಿಳಿಸಿದರು.ಅಂಜನಾದ್ರಿ ಬೆಟ್ಟದಲ್ಲಿರುವ ಆಂಜನೇಯಸ್ವಾಮಿ ದೇಗುಲದಲ್ಲಿ ಈ ಹಿಂದೆ ಪೂಜಾ ಕಾರ್ಯ ಮಾಡುತ್ತಿದ್ದ ವಿದ್ಯಾದಾಸ್ ಬಾಬಾ ಅವರಿಗೆ ಮೊದಲಿನಂತೆ ಪೂಜೆ ನಡೆಸಲು ಧಾರವಾಡ ಹೈಕೋರ್ಟ್ ಪೀಠ ಆದೇಶ ನೀಡಿದೆ. ಅದರಂತೆ ಪೂಜೆ ನಡೆಸಿಕೊಂಡು ಹೋಗುತ್ತಿದ್ದಾರೆ.

ಪ್ರಕಾಶ, ಇಒ ಅಂಜನಾದ್ರಿ ದೇವಸ್ಥಾನ ಸಮಿತಿ

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೊಳಚೆ ನೀರಲ್ಲಿ ತಟ್ಟೆ ತೊಳೆದ ಪ್ರಕರಣ; ಶಿಕ್ಷಕಿ ಅಮಾನತು
ಅಲೆಮಾರಿ ಜನಾಂಗದವರು ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡಲಿ: ಪಲ್ಲವಿ