ಮಾಲೂರು ಶಾಸಕ ನಂಜೇಗೌಡರಿಗೆ ಹೈಕೋರ್ಟ್‌ ಬಿಗ್‌ ರಿಲೀಫ್‌

KannadaprabhaNewsNetwork |  
Published : Nov 07, 2026, 01:15 AM IST
೬ಕೆಎಲ್‌ಆರ್-೧ಕೋಲಾರದ ಬಸ್ ನಿಲ್ದಾಣ ವೃತ್ತದಲ್ಲಿ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ - ಪ್ರತಿಕೃತಿ ದಹನಕ್ಕೆ ಅಡ್ಡಿಪಡಿಸಿದ ಪೊಲೀಸರ ಜತೆ ಮುಖಂಡರ ವಾಗ್ವಾದ ನಡೆಯುತ್ತಿರುವುದು. | Kannada Prabha

ಸಾರಾಂಶ

ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿತ್ತು. ಕೋಮುಲ್ ನೇಮಕಾತಿ ವಿಚಾರದಲ್ಲಿ ಈ ಪ್ರಕರಣ ದಾಖಲಾಗಿತ್ತು.

ಕನ್ನಡಪ್ರಭ ವಾರ್ತೆ ಕೋಲಾರ

ಕೋಮುಲ್ ನೇಮಕಾತಿ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಲೂರು ಕಾಂಗ್ರೆಸ್ ಶಾಸಕ ನಂಜೇಗೌಡರಿಗೆ ಧಾರವಾಡ ಹೈಕೋರ್ಟ್‌ನಿಂದ ದೊಡ್ಡ ರಿಲೀಫ್‌ ದೊರೆತಿದೆ.

ನ್ಯಾಯಮೂರ್ತಿ ಎಂ.ಐ.ಅರುಣ್ ಅವರು ಶಾಸಕ ನಂಜೇಗೌಡ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿ ಆದೇಶ ಹೊರಡಿಸಿದ್ದಾರೆ. ಜಾರಿ ನಿರ್ದೇಶನಾಲಯ ದಾಖಲಿಸಿದ್ದ ಅರ್ಜಿ ವಿರುದ್ಧ ಶಾಸಕರು ಸಲ್ಲಿಸಿದ್ದ ಅರ್ಜಿಗೆ ಈ ಆದೇಶ ಪ್ರಕಟವಾಗಿದೆ.

ಜಾರಿ ನಿರ್ದೇಶನಾಲಯವು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿತ್ತು. ಕೋಮುಲ್ ನೇಮಕಾತಿ ವಿಚಾರದಲ್ಲಿ ಈ ಪ್ರಕರಣ ದಾಖಲಾಗಿತ್ತು.

ಜನವರಿ ೨೦, ೨೦೨೪ರಂದು ಶಾಸಕ ನಂಜೇಗೌಡರ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು. ಮಾಲೂರು ತಾಲೂಕಿನ ಕೊಮ್ಮನಹಳ್ಳಿ ನಿವಾಸ ಹಾಗೂ ಇತರೆಡೆ ದಾಳಿ ನಡೆಸಿದ್ದ ಅಧಿಕಾರಿಗಳು, ಸೆಪ್ಟೆಂಬರ್ ೧೨, ೨೦೨೪ರಂದು ಅಕ್ರಮ ಹಣ ವರ್ಗಾವಣೆ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದರು.

ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ದಾಳಿ ವೇಳೆ ನಂಜೇಗೌಡ ಕುಟುಂಬಕ್ಕೆ ಸೇರಿದ್ದ ಜಮೀನು, ಆಸ್ತಿ, ನಗದು ಹಾಗೂ ಮೊಬೈಲ್‌ಗಳನ್ನು ಜಾರಿ ನಿರ್ದೇಶನಾಲಯ ಜಪ್ತಿ ಮಾಡಿತ್ತು. ನೇಮಕಾತಿ ವಿಚಾರದಲ್ಲಿ ಜಾರಿ ನಿರ್ದೇಶನಾಲಯ ವಿಚಾರಣೆ ನಡೆಸಲು ಅವಕಾಶವಿಲ್ಲ ಎಂದು ಶಾಸಕ ನಂಜೇಗೌಡ ನ್ಯಾಯಾಲಯದ ಮೆಟ್ಟಿಲೇರಿದ್ದರು. ಸತತ ವಿಚಾರಣೆ ನಡೆಸಿದ ಹೈಕೋರ್ಟ್ ಆದೇಶ ಹೊರಡಿಸಿದೆ.

ಶಾಸಕ ನಂಜೇಗೌಡರ ಪರ ವಕೀಲ ಮಹೇಂದ್ರ ಗೌಡ ವಾದ ಮಂಡಿಸಿದ್ದರು. ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಸರ್ವೋಚ್ಚ ನ್ಯಾಯಾಲಯದ ಮೆಟ್ಟಿಲೇರುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕಬ್ಬಿಗೆ ಸ್ಥಳೀಯ ರಿಕವರಿ ಆಧಾರದಲ್ಲಿ ನ್ಯಾಯಯುತ ಬೆಲೆ ನೀಡಲು ಆಗ್ರಹ
ಕರ್ತವ್ಯ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ವಹಿಸಿದ್ದರೆ ಸೂಕ್ತ ಕ್ರಮ