ಕನ್ನಡಪ್ರಭ ವಾರ್ತೆ ಮೈಸೂರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜನಪ್ರಿಯತೆ ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕ್ರಮಗಳನ್ನು ಸಹಿಸದೆ ಬಿಜೆಪಿ ಮತ್ತು ಜೆಡಿಎಸ್ ಪಕ್ಷದವರ ಕುತಂತ್ರ ರಾಜಕಾರಣಕ್ಕೆ ತಡೆ ಒಡ್ಡಿದಂತಾಗಿದೆ. ಮುಡಾ ಪ್ರಕರಣದಲ್ಲಿ ಅನವಶ್ಯಕವಾಗಿ ಮುಖ್ಯಮಂತ್ರಿಗಳ ಹೆಸರನ್ನು ಎಳೆದು ತಂದು ರಾಜ್ಯದ ರಾಜಕಾರಣಕ್ಕೆ ಮಸಿ ಬಳಿಯಲು ಪ್ರಯತ್ನಿಸಿದವರಿಗೆ ಸರಿಯಾದ ಉತ್ತರ ದೊರೆತಿದೆ ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಮತ್ತು ಸರ್ಕಾರದ ಮೇಲೆ ಆರೋಪ ಮಾಡುವಾಗ ಬಹಳ ಎಚ್ಚರಿಕೆಯಿಂದ ವರ್ತಿಸಬೇಕಾಗುತ್ತದೆ. ಇದು ಮುಖ್ಯಮಂತ್ರಿಗಳಿಗೆ ಮಾತ್ರ ಆರೋಪಗಳು ಅನ್ವಯಿಸುವುದಿಲ್ಲ, ರಾಜ್ಯದ ಜನತೆಯ ಪ್ರತಿನಿಧಿಯಾಗಿ ಕಾರ್ಯ ನಿರ್ವಹಿಸುವುದರಿಂದ ಇಡೀ ರಾಜ್ಯದ ಜನತೆಗೆ ಅನ್ವಯಿಸುವ ವಿಚಾರವಾಗಿರುತ್ತದೆ ಎಂದಿದ್ದಾರೆ.ರಾಜ್ಯದ ರಾಜಕಾರಣ ದೇಶಕ್ಕೆ ಮಾದರಿಯಾಗಿರಬೇಕೆ ಹೊರತು ವೈಯಕ್ತಿಕ ದ್ವೇಷದಿಂದ ಆರೋಪ ಮಾಡುವುದು ಅತ್ಯಂತ ಕೆಟ್ಟ ಸಂಪ್ರದಾಯ. ಇಂತಹ ಕೆಟ್ಟ ಸಂಪ್ರದಾಯ ಕೊನೆಗಾಣಿಸುವ ಹೊಣೆಗಾರಿಕೆ ಪ್ರತಿಯೊಬ್ಬರದಾಗಿರುತ್ತದೆ. ಇದರಲ್ಲಿ ನ್ಯಾಯಾಲಯದ ಪಾತ್ರವೂ ಇರುತ್ತದೆ. ಆದ ಕಾರಣ ನ್ಯಾಯಾಲಯ ವ್ಯಕ್ತಪಡಿಸಿರುವ ಅಭಿಪ್ರಾಯ ನ್ಯಾಯ ಸಮ್ಮತವಾಗಿದೆ ಎಂದು ತಿಳಿಸಿದ್ದಾರೆ.