)
ಪುತ್ತೂರು: ಮದುವೆಯಾಗುವುದಾಗಿ ನಂಬಿಸಿ ಪುತ್ತೂರಿನ ಯುವತಿಗೆ ವಂಚನೆ ಮಾಡಿದ ಪ್ರಕರಣದ ಆರೋಪಿ ಶ್ರೀಕೃಷ್ಣ ಜೆ ರಾವ್ ಗೆ ಆಶ್ರಯ ನೀಡಿದ ಆತನ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ವಿರುದ್ಧ ದಾಖಲಿಸಲಾಗಿದ್ದ ಪ್ರಕರಣದ ಮುಂದಿನ ವಿಚಾರಣೆಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ತನ್ನ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದುಪಡಿಸುವಂತೆ ಕೋರಿ ಆರೋಪಿಗಳು ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿದ ನ್ಯಾಯಪೀಠ, ಯಾವುದೇ ಸ್ಪಷ್ಟ ಕಾರಣವಿಲ್ಲದೆ ಆರೋಪಿಯ ತಂದೆಯನ್ನು ಈ ಪ್ರಕರಣಕ್ಕೆ ಎಳೆದುಕೊಂಡಿದ್ದಾರೆ ಎಂದು ಗಮನಿಸಲಾಗಿದೆ. ಈ ಹಿನ್ನಲೆಯಲ್ಲಿ ಮುಂದಿನ ವಿಚಾರಣೆ ದಿನಾಂಕದ ತನಕ ಆರೋಪಿ ಕೃಷ್ಣ ಜೆ ರಾವ್ ತಂದೆ ಪಿ.ಜಿ.ಜಗನ್ನಿವಾಸ್ ರಾವ್ ವಿರುದ್ಧದ ಪ್ರಕರಣದ ಮುಂದಿನ ವಿಚಾರಣೆಗೆ ತಡೆಯಾಜ್ಞೆ ನೀಡಿದೆ. ಆರೋಪಿ ಪರ ಹೈಕೋರ್ಟ್ ವಕೀಲರಾದ ಪಿ.ಪಿ ಹೆಗ್ಡೆ ವಾದಿಸಿದ್ದರು.