ಎಥೆನಾಲ್‌ಗೆ ಕಬ್ಬು ಬಳಕೆ ನಿಷೇಧ : ಕೇಂದ್ರ, ರಾಜ್ಯಕ್ಕೆ ಹೈ ನೋಟಿಸ್‌

KannadaprabhaNewsNetwork |  
Published : Oct 31, 2026, 03:30 AM ISTUpdated : Oct 31, 2026, 04:31 AM IST
Karnataka High court

ಸಾರಾಂಶ

ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧಿಸಿರುವ ಕ್ರಮ ಪ್ರಶ್ನಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾ‍ಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ. ಮಹಾವೀರ್ ಜೆ. ಅಸ್ಕಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ

 ಬೆಂಗಳೂರು : ಎಥೆನಾಲ್ ಉತ್ಪಾದನೆಗೆ ಕಬ್ಬು ಬಳಕೆಯನ್ನು ನಿಷೇಧಿಸಿರುವ ಕ್ರಮ ಪ್ರಶ್ನಿಸಿರುವ ಅರ್ಜಿ ಸಂಬಂಧ ಕೇಂದ್ರ ಮತ್ತು ರಾ‍ಜ್ಯ ಸರ್ಕಾರಕ್ಕೆ ಹೈಕೋರ್ಟ್‌ ನೋಟಿಸ್ ಜಾರಿ ಮಾಡಿದೆ.

.ಮಹಾವೀರ್ ಜೆ. ಅಸ್ಕಿ ಹೈಕೋರ್ಟ್ ಗೆ ಅರ್ಜಿ

ಈ ಕುರಿತು ಕೇಂದ್ರ ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ಬೆಳಗಾವಿ ಮೂಲದ ಎಥೆನಾಲ್ ಉತ್ಪಾದನಾ ಕಂಪೆನಿ ಮೆಸರ್ಸ್ ಆಸ್ಕಿನ್ಸ್ ಬಯೋಫ್ಯೂಯಲ್ಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕ ಅಶೋಕ್ ಜೆ. ಅಸ್ಕಿ ಹಾಗೂ ಶ್ರೀ ಬ್ರಹ್ಮಾನಂದಸಾಗರ್ ಜಾಗರಿ ಇಂಡಸ್ಟ್ರೀಸ್ ಪಾಲುದಾರ .ಮಹಾವೀರ್ ಜೆ. ಅಸ್ಕಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದಾರೆ

ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸಿ.ಎಂ. ಪೂಣಚ್ಚ ಅವರ ಪೀಠ, ಪ್ರತಿವಾದಿಗಳಾದ ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸಿತು. ಅಲ್ಲದೆ, ಎಥನಾಲ್‌ ಬಳಕೆಗೆ ನಿಷೇಧ ಹೇರಿ ಹೊರಡಿಸಿರುವ ಪ್ರಕಟಣೆಗೆ ತಡೆ ನೀಡಬೇಕು ಎಂಬ ಅರ್ಜಿದಾರರ ಮಧ್ಯಂತರ ಮನವಿಯನ್ನು ಮುಂದಿನ ವಿಚಾರಣೆ ವೇಳೆ ಪರಿಗಣಿಸಲಾಗುವುದು ಎಂದು ತಿಳಿಸಿದ ನ್ಯಾಯಪೀಠ ಅರ್ಜಿ ವಿಚಾರಣೆಯನ್ನು ನ.5ಕ್ಕೆ ಮುಂದೂಡಿತು.

ಉತ್ಪಾದಿಸುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ 2026ರ ಅ.22ರಂದು ಪ್ರಕಟಣೆ

ದೇಶದಲ್ಲಿ ಸಕ್ಕರೆ ಲಭ್ಯತೆ ಹೆಚ್ಚಿಸಲು 2026-27ರ ಎಥೆನಾಲ್ ಪೂರೈಕೆ ವರ್ಷ (2026ರ ನ.1ರಿಂದ 2027ರ ಅ.31ರವರೆಗೆ) ಕಬ್ಬಿನ ರಸ ಮತ್ತು ಬಿ-ಹೆವಿ ಮೊಲಾಸಸ್ ಬಳಸಿ ಎಥೆನಾಲ್‌ ಉತ್ಪಾದಿಸುವುದನ್ನು ನಿಷೇಧಿಸಿ ಕೇಂದ್ರ ಸರ್ಕಾರ 2026ರ ಅ.22ರಂದು ಪ್ರಕಟಣೆ ಹೊರಡಿಸಿತ್ತು.

ಅದನ್ನು ಪ್ರಶ್ನಿಸಿರುವ ಅರ್ಜಿದಾರರು, ಕೇಂದ್ರ ಸರ್ಕಾರ ಎಥೆನಾಲ್ ಉತ್ಪಾದನೆಗೆ ಕಬ್ಬಿನ ರಸ ಬಳಕೆಯನ್ನು ನಿಷೇಧಿಸಿರುವುದರಿಂದ ಸಂಕಷ್ಟ ಎದುರಾಗಿದೆ. ತಮ್ಮ ಕಂಪನಿಗಳಲ್ಲಿ ಎಥೆನಾಲ್ ಉತ್ಪಾದನೆ ನಿಂತು ಹೋಗಿದೆ. ಇದು ಆರ್ಥಿಕ ದುಷ್ಪರಿಣಾಮಗಳನ್ನು ಉಂಟು ಮಾಡಲಿದೆ. ಆದ್ದರಿಂದ ಅ.22ರ ಕೇಂದ್ರ ಸರ್ಕಾರದ ಪ್ರಕಟಣೆಗೆ ತಡೆ ನೀಡಬೇಕು ಎಂದು ಕೋರಿದರು.

ಕೇಂದ್ರ ಸರ್ಕಾರವನ್ನು ಪ್ರತಿನಿಧಿಸಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ. ಅರವಿಂದ್ ಕಾಮತ್, ಕೇಂದ್ರ ಸರ್ಕಾರದ ಪ್ರಕಟಣೆಗೆ ತಡೆ ನೀಡುವುದಕ್ಕೆ ಬಲವಾದ ವಿರೋಧ ವ್ಯಕ್ತಪಡಿಸಿದರು. ಜತೆಗೆ ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ಕೋರಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.
Read more Articles on

Recommended Stories

ತಡೆಯಾಜ್ಞೆ ಇದ್ದರೂ ಪೊಲೀಸರಿಂದ ಚಾರ್ಜ್‌ಶೀಟ್‌: ಹೈಕೋರ್ಟ್‌ ಗರಂ
ಪ್ರೀತಿಗೆ ಪೋಷಕರು ವಿರೋಧ: ಪ್ರೇಮಿಗಳಿಂದ ಆತ್ಮಹತ್ಯೆ ಯತ್ನ