ಕೊಡಗು ಪ್ರವಾಸೋದ್ಯಮ ಅಭಿವೃದ್ಧಿಗೆ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ: ಸತೀಶ್ ಜಾರಕಿಹೊಳಿ

KannadaprabhaNewsNetwork |  
Published : Nov 01, 2026, 03:45 AM IST
ಕೊಪ್ಪಳ ಬಂದ್ ಹಿನ್ನೆಲೆಯಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು. | Kannada Prabha

ಸಾರಾಂಶ

ಕೊಡಗು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧಿತ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸಲಾಗುತ್ತದೆ ಎಂದು ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರಕಟಿಸಿದ್ದು, ಕೊಡಗಿನ ಪ್ರವಾಸಿ ತಾಣಗಳಿಗೆ ತೆರಳುವ 5 ಕಿ.ಮೀ.ಯೊಳಗಿನ ಗ್ರಾಮೀಣ ರಸ್ತೆಗಳನ್ನು ಶೀಘ್ರಗತಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದೂ ಘೋಷಿಸಿದ್ದಾರೆ.

ಮಡಿಕೇರಿ ; ಕೊಡಗು ಪ್ರವಾಸೋದ್ಯಮ ಅಭಿವೃದ್ಧಿ ಸಂಬಂಧಿತ ವಿವಿಧ ಇಲಾಖೆಗಳ ಸಚಿವರು, ಅಧಿಕಾರಿಗಳೊಂದಿಗೆ ಶೀಘ್ರದಲ್ಲಿಯೇ ಬೆಂಗಳೂರಿನಲ್ಲಿ ಉನ್ನತ ಮಟ್ಟದ ಸಭೆ ಆಯೋಜಿಸಲಾಗುತ್ತದೆ ಎಂದು ರಾಜ್ಯ ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಪ್ರಕಟಿಸಿದ್ದು, ಕೊಡಗಿನ ಪ್ರವಾಸಿ ತಾಣಗಳಿಗೆ ತೆರಳುವ 5 ಕಿ.ಮೀ.ಯೊಳಗಿನ ಗ್ರಾಮೀಣ ರಸ್ತೆಗಳನ್ನು ಶೀಘ್ರಗತಿಯಲ್ಲಿ ಅಭಿವೃದ್ಧಿ ಪಡಿಸಲಾಗುತ್ತದೆ ಎಂದೂ ಘೋಷಿಸಿದ್ದಾರೆ.

ನಗರದ ಹೊರ ವಲಯದ ಖಾಸಗಿ ರೆಸಾರ್ಟ್ ವೊಂದರಲ್ಲಿ ನಡೆದ ಖಾಸಗಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಕಡಮೆ ಸೌಕರ್ಯಗಳ ನಡುವೇ ಕೊಡಗು ಜಿಲ್ಲೆ ಪ್ರವಾಸೋದ್ಯಮದಲ್ಲಿ ಗಮನ ಸೆಳೆದಿದೆ. ಪ್ರವಾಸೋದ್ಯಮಕ್ಕೆ ಬಹಳ ಮುಖ್ಯವಾಗಿರುವ ರಸ್ತೆಗಳ ಅಭಿವೃದ್ಧಿಗೆ ತಾನು ಎಲ್ಲಾ ರೀತಿಯಲ್ಲಿಯೂ ಸಹಾಯ ನೀಡುವುದಾಗಿಯೂ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. ಬೆಂಗಳೂರಿನಲ್ಲಿ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು, ಸಚಿವರ ಸಭೆ ನಡೆಸಿ ಕೊಡಗು ಪ್ರವಾಸೋದ್ಯಮದ ಬೇಡಿಕೆಗಳನ್ನು ಪರಿಶೀಲಿಸಲಾಗುತ್ತದೆ ಎಂದು ಹೇಳಿದ ಸಚಿವರು, ಕೊಡಗಿನ ಗ್ರಾಮೀಣ ಭಾಗದಲ್ಲಿರುವ 5 ಕಿ.ಮೀ.ಯೊಳಗಿನ ಪ್ರವಾಸಿ ತಾಣಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳ ಅಭಿವೃದ್ಧಿಗೆ ತುರ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.ಕೊಡಗಿನಲ್ಲಿ ಪ್ರವಾಸೋದ್ಯಮ ತರಬೇತಿ ಕೇಂದ್ರ ಸ್ಥಾಪನೆ, ಅಂತರರಾಜ್ಯ ಸಂಪಕ೯ ರಸ್ತೆಗಳ ಅಭಿವೃದ್ಧಿ, ಮಿನಿ ವಿಮಾನನಿಲ್ದಾಣ ಸೇರಿದಂತೆ ಹಲವಾರು ಬೇಡಿಕೆಗಳ ಬಗ್ಗೆ ತಾನು ಗಂಭೀರವಾಗಿ ಗಮನ ನೀಡುವುದಾಗಿಯೂ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು. 20 ವರ್ಷಗಳ ಬಳಿಕ ರಾಜ್ಯ ಸರ್ಕಾರದಿಂದ ಮೂರೂವರೆ ವರ್ಷಗಳಲ್ಲಿ 4 ಸಾವಿರ ಸೇತುವೆಗಳನ್ನು ರಾಜ್ಯವ್ಯಾಪಿ ನಿರ್ಮಿಸಲಾಗಿದೆ ಎಂದು ಹೇಳಿದರು.ಶಾಸಕ ಎ.ಎಸ್. ಪೊನ್ನಣ್ಣ ಮಾತನಾಡಿ, ಪ್ರವಾಸೋದ್ಯಮ ದೖಷ್ಟಿಯಿಂದ ಕೊಡಗನ್ನು ನಿರ್ಲಕ್ಷಿಸಲಾಗುವುದಿಲ್ಲ. ಕೊಡಗಿನ ನೈಜ ಸೌಂದರ್ಯ ಸಂರಕ್ಷಿಸುವಲ್ಲಿ ಸ್ಥಳೀಯ ಪರಿಸರವಾದಿಗಳ ಕೊಡುಗೆ ಮಹತ್ವದ್ದಾಗಿದೆ ಎಂದರು. ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮಾತನಾಡಿ, ಕೊಡಗು ಜಿಲ್ಲೆಯಲ್ಲಿ 2 ಸಾವಿರ ಕಿ.ಮೀ ರಾಜ್ಯ ಹೆದ್ದಾರಿಯಿದ್ದು, 3,500 ಕಿ.ಮೀ. ಗ್ರಾಮೀಣ ರಸ್ತೆಗಳಿವೆ. ಮಳೆಯಿಂದಾಗಿ ಗುಂಡಿಬಿದ್ದಿರುವ ರಸ್ತೆಗಳನ್ನು ಶೀಘ್ರವೇ ದುರಸ್ತಿಗೊಳಿಸಲಾಗುತ್ತದೆ ಎಂದರು.ಸಂಸದ ಯದುವೀರ್ ಒಡೆಯರ್, ಮಾತನಾಡಿ, ಮಡಿಕೇರಿಯ ಕೋಟೆ ಅರಮನೆಗೆ ಧ್ವನಿಬೆಳಕು, ಲೇಸರ್ ಪ್ರದರ್ಶನದ ಯೋಜನೆಗೂ ಚಾಲನೆ ನೀಡಲಾಗುತ್ತದೆ ಎಂದರು. ಉತ್ತರ ಭಾರತದ ಮಾದರಿಯನ್ನು ಅಭ್ಯಸಿಸಿ, ಕೊಡಗಿನಲ್ಲಿಯೂ ಪರಿಸರ, ಹವಾಮಾನಕ್ಕೆ ತಕ್ಕಂತೆ ಅಭಿವೃದ್ಧಿ ಕಾರ್ಯ ಕೈಗೊಳ್ಳಬೇಕೆಂದು ಸಲಹೆ ನೀಡಿದ ಸಂಸದರು, ಕೊಡಗಿನ ಗಡಿಯಾದ ಕುಶಾಲನಗರದವರೆಗೂ ಉತ್ತಮ ಗುಣಮಟ್ಟದ ಹೆದ್ದಾರಿ ಕಾಮಗಾರಿ ಅಂತಿಮ ಹಂತದಲ್ಲಿದೆ ಎಂದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಬೆಂಗಳೂರು ಹೋಟೆಲ್‌ ಈಜು ಕೊಳದಲ್ಲಿ 2 ವಿದೇಶಿಗರ ಸಾವು
ಪ್ರಜ್ವಲ್‌ ಜೀವಾವಧಿಗೆ ಕಾರಣ ಆದ ಮೂವರಿಗೆ ಕೇಂದ್ರ ಗೃಹ ಪ್ರಶಸ್ತಿ