ಪಕ್ಷ ನಿಷ್ಠೆಗೆ ಕೈನಿಂದ ಉನ್ನತ ಸ್ಥಾನ: ಮಂಜಪ್ಪ

KannadaprabhaNewsNetwork |  
Published : Sep 28, 2025, 02:00 AM IST
ಹೊನ್ನಾಳಿ ಫೋಟೋ 28ಎಚ್.ಎಲ್.ಐ3.  ಕಾಂಗ್ರೇಸ್ ಜಿಲ್ಲಾಧ್ಯಕ್ಷ  ಎಚ್.ಬಿ. ಮಂಜಪ್ಪ ಅವರು ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಗಮದ  ನೂತನಅಧ್ಯಕ್ಷರಾಗಿ ನೇಮಕವಾದ ಸಂದರ್ಭದಲ್ಲಿ ಹೊನ್ನಾಳಿಯ ಅ‍ವರ ನಿವಾಸದಲ್ಲಿ  ಅಭಿಮಾನಿ ಬಳಗದಿಂದ ಅವರನ್ನು ಅಭಿನಂದಿಸಲಾಯಿತು.  | Kannada Prabha

ಸಾರಾಂಶ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಪಕ್ಷದ ಅಧ್ಯಕ್ಷ ಡಿ.ಕೆ.ಶಿಕುಮಾರ್, ಗೃಹಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರು, ಶಾಸಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ಕನ್ನಡಪ್ರಭ ವಾರ್ತೆ ಹೊನ್ನಾಳಿ

ಕಾಂಗ್ರೆಸ್ ಪಕ್ಷ ನನ್ನ 30 ವರ್ಷಗಳ ಸುದೀರ್ಘ ಹೋರಾಟ, ಪಕ್ಷ ಸಂಘಟನೆ ಹಾಗೂ ನನ್ನ ಪಕ್ಷ ನಿಷ್ಠೆಯನ್ನು ಗಮನಿಸಿ ನನಗೆ ಬಯಲುಸೀಮೆ ಪ್ರದೇಶಾಭಿವೃದ್ಧಿ ನಿಗಮದ ಅಧ್ಯಕ್ಷನನ್ನಾಗಿ ನೇಮಕ ಮಾಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಾಗೂ ಪಕ್ಷದ ಅಧ್ಯಕ್ಷ ಡಿ.ಕೆ.ಶಿಕುಮಾರ್, ಗೃಹಸಚಿವ ಪರಮೇಶ್ವರ್, ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್, ಸಂಸದರು, ಶಾಸಕರಿಗೆ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಚ್.ಬಿ.ಮಂಜಪ್ಪ ಹೇಳಿದರು.

ಪಟ್ಟಣದಲ್ಲಿರುವ ತಮ್ಮ ಗೃಹಕಚೇರಿಯಲ್ಲಿ ಶನಿವಾರ ಅಭಿನಂದನೆ ಸ್ವೀಕರಿಸಿ ಮಾತನಾಡಿದರು.

ನಮ್ಮ ರಾಜಕೀಯ ಗುರುಗಳಾದ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ , ಶಾಮನೂರು ಶಿವಶಂಕರಪ್ಪ ಹಾಗೂ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ನನಗೆ ಈ ಸ್ಥಾನಮಾನ ಸಿಗಲಿಕ್ಕೆ ನೇರವಾಗಿ ಕಾರಣಕರ್ತರಾಗಿದ್ದಾರೆ. ನಾನು ಪುರಸಭೆಯ ಅಧ್ಯಕ್ಷನಾಗಿ, ತಾ.ಪಂ. ಅಧ್ಯಕ್ಷರಾಗಿ, ಜಿ.ಪಂ. ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದು, ಹಾಗೂ ಎರಡು ಬಾರಿ ಪಕ್ಷದ ಜಿಲ್ಲಾ ಅಧ್ಯಕ್ಷನಾಗಿ ಸೇವೆ ಸಲ್ಲಿಸಿದ್ದು, ಈ ಅವಧಿಯಲ್ಲಿ ನಾನು ಮಾಡಿದ ಹೋರಾಟ ಹಾಗೂ ಪಕ್ಷದ ಕಾರ್ಯಕ್ರಮಗಳನ್ನು ಗಮನಿಸಿ ನನಗೆ ಈ ಅವಕಾಶ ಮಾಡಿಕೊಟ್ಟಿದ್ದಾರೆ ಎಂದರು.

ನಮ್ಮ ಕ್ಷೇತ್ರದ ಹಿರಿಯ ಶಾಸಕ ಡಿ.ಜಿ.ಶಾಂತನಗೌಡ ಹಾಗೂ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಶಾಸಕರು, ಚಿತ್ರದುರ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ಹಾಗೂ ಶಾಸಕರು, ನಾನು ಅಧಿಕಾರ ಸ್ವೀಕರಿಸುವ ಈ ಶುಭ ಸಂದರ್ಭದಲ್ಲಿ ಹಾಜರಿದ್ದು ನನಗೆ ಸಲಹೆ, ಸೂಚನೆ ಕೊಡುವ ಮೂಲಕ ಬೆಂಬಲ ನೀಡಬೇಕು ಎಂದು ಮನವಿ ಮಾಡಿದರು.

ಬಯಲು ಸೀಮೆ ಪ್ರದೇಶಾಭಿವೃದ್ಧಿ ನಿಗಮದ ವ್ಯಾಪ್ತಿಯು 14 ಜಿಲ್ಲೆಗಳನ್ನೊಳಗೊಂಡಿದ್ದು ಸುಮಾರು 70 ವಿಧಾನಸಭಾ ಕ್ಷೇತ್ರಗಳನ್ನು (82 ತಾಲೂಕುಗಳು) ಹೊಂದಿದೆ. ದಾವಣಗೆರೆ ಜಿಲ್ಲೆಯ ಜಗಳೂರು ಹಾಗೂ ಈ ಹಿಂದೆ ಇದ್ದ ಹರಪನಹಳ್ಳಿ ಕ್ಷೇತ್ರಗಳು ಬಯಲು ಸೀಮೆ ಅಭಿವೃದ್ಧಿ ನಿಗಮದ ವ್ಯಾಪ್ತಿಗೆ ಬರುತ್ತವೆ ಎಂದರು.

ಅಧಿಕಾರ ಸ್ವೀಕಾರ:

ಚಿತ್ರದುರ್ಗದಲ್ಲಿರುವ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿಯ ಕಚೇರಿಯಲ್ಲಿ ಸೆ.29ರ ಸೋಮವಾರ ಮಧ್ಯಾಹ್ನ 12 ಗಂಟೆಗೆ ಅಧಿಕಾರ ಸ್ವೀಕರಿಸುತ್ತಿದ್ದೇನೆ. ಆದ್ದರಿಂದ ಪಕ್ಷದ ಅಧ್ಯಕ್ಷರು, ಪದಾಧಿಕಾರಿಗಳು, ಯುವಕಾಂಗ್ರೆಸ್ ಘಟಕದ, ಹಾಗೂ ಮುಂಚೂಣಿ ಘಟಕದ ಪದಾಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಅಧಿಕಾರ ಸ್ವೀಕರಿಸುವ ಈ ಶುಭ ಸಂದರ್ಭದಲ್ಲಿದ್ದು ಹಾರೈಸಬೇಕು ಎಂದು ಮನವಿ ಮಾಡಿದರು.

ಪುರಸಭೆ ಸದಸ್ಯರಾದ ಧರ್ಮಪ್ಪ, ಎಚ್.ಡಿ.ವಿಜೇಂದ್ರಪ್ಪ, ಬಗರ್ ಹುಕುಂ ಸಮಿತಿ ಸದಸ್ಯ ರುದ್ರೇಶ್ ಕೊಡತಾಳ್ ಹಲವರು ಹಾಜರಿದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಕೋಗಿಲು ನಿರಾಶ್ರಿತರಿಗೆ 5ರ ನಂತರ ವಸತಿ ಭಾಗ್ಯ
ಹೊಸ ವರ್ಷಕ್ಕೆ ಶೇ.40 ಮದ್ಯ ಮಾರಾಟ ಹೆಚ್ಚಳ!