ಬೀದರ್: ಗ್ರಾಮೀಣ ಪ್ರದೇಶದಲ್ಲಿ ಹಲವು ಸಮಸ್ಯೆಗಳಿರುತ್ತವೆ. ಹೀಗಾಗಿ ನಿತ್ಯವೂ ಗ್ರಾಮೀಣ ಭಾಗದ ಹಳ್ಳಿಗಳ ಪ್ರವಾಸ ಕೈಗೊಂಡು ಬಳಿಕ ಅಭಿವೃದ್ಧಿ ಕಾರ್ಯಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ ಎಂದು ಬೀದರ್ ದಕ್ಷಿಣ ಕ್ಷೇತ್ರದ ಶಾಸಕ ಡಾ. ಶೈಲೇಂದ್ರ ಬೆಲ್ದಾಳೆ ಹೇಳಿದರು. ಕ್ಷೇತ್ರದ ಗೂನ್ನಳ್ಳಿ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ಅನುದಾನದಡಿಯ 12 ಲಕ್ಷ ರು. ವೆಚ್ಚದ ಡಾ. ಬಿ ಆರ್. ಅಂಬೇಡ್ಕರ್ ಭವನ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು. ಪಿಡಿಓ ಅಧಿಕಾರಿಗಳು ಜನರ ಕೈಗೆ ಸಿಗದೆ ಪೋನ್ ಸ್ವಿಚ್ ಆಫ್ ಮಾಡಿಕೊಳ್ಳದೆ ಅಭಿವೃದ್ಧಿ ಕೆಲಸಗಳನ್ನು ಮಾಡಲು ಮುಂದಾಗಬೇಕು ಎಂದು ಸೂಚಿಸಿದರು. ಗ್ರಾಮೀಣ ಪ್ರದೇಶದ ಜನರಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಕೆಲಸ ಮಾಡಬೇಕು, ಗ್ರಾಮೀಣ ಪ್ರದೇಶ ಅಭಿವೃದ್ಧಿಯಾದರೆ ಮಾತ್ರ ಕ್ಷೇತ್ರ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ಕ್ಷೇತ್ರದಲ್ಲಿ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹೀಗಾಗಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಪಟ್ಟಿ ಸಿದ್ಧಪಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದು, ಮುಂದಿನ ದಿನಗಳಲ್ಲಿ ಗ್ರಾಮಗಳು ಹೆಚ್ಚಿನ ಅಭಿವೃದ್ಧಿ ಮಾಡಲಾಗುವುದು ಎಂದರು. ಗ್ರಾಮಗಳ ನಿವಾಸಿಗಳು ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಮಾಡುವಂತೆ ಶಾಸಕರಿಗೆ ಮನವಿ ಪತ್ರಗಳನ್ನು ಸಲ್ಲಿಸಿದರು. ಎಲ್ಲ ಕೆಲಸ ಹಂತ ಹಂತವಾಗಿ ಮಾಡಲಾಗುವುದು ಎಂದರು. ಈ ಸಂದರ್ಭದಲ್ಲಿ ಗ್ರಾ.ಪಂ ಅಧ್ಯಕ್ಷೆ ಸರಸ್ವತಿ ಘಾಳೆಪ್ಪ, ಗ್ರಾಪಂ ಪಿಡಿಒ ಸುನೀತಾ, ಮುಖಂಡರಾದ ಸುರೇಶ್ ಮಾಶೆಟ್ಟಿ, ಶಿವರಾಜ ಪಾಟೀಲ, ಚಂದ್ರಕಾಂತ ಪಾಟೀಲ, ಸೂರ್ಯಕಾಂತ ಬಿರಾದಾರ, ಲಕ್ಷ್ಮಣರಾವ ಸಿಂಧೋಲ, ಅನೀಲಕುಮಾರ ಗುನ್ನಳ್ಳಿ, ಜೋಸೆಫ್ ಕೊಡ್ಡೆಕರ್, ಕಂಟೆಪ್ಪ ಮನ್ನಳ್ಳಿ, ಓಂಕಾರ ಸುಲ್ತಾನಪುರ, ಸಂಗಮೇಶ ಗೋರನಳ್ಳಿ, ತುಳಸಿರಾಮ, ಶಿವಕುಮಾರ, ಮಾಣಿಕ, ಅಂಬಾದಾಸ ಮತ್ತಿತರರು ಉಪಸ್ಥಿತರಿದ್ದರು.