ಕನ್ನಡಪ್ರಭ ವಾರ್ತೆ ನಾಗಮಂಗಲ
ತಾಲೂಕಿನ ತುಪ್ಪದಮಡು ಗ್ರಾಮದಲ್ಲಿ ಮೀನುಗಾರಿಕೆ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ ಮತ್ತು ಗ್ರಾಪಂ ಸಹಭಾಗಿತ್ವದಲ್ಲಿ ಆಯೋಜಿಸಿದ್ದ ಮತ್ಸ್ಯ ಸಂಜೀವಿನಿ ಯೋಜನೆಗೆ ಚಾಲನೆ ನೀಡಿ ಮಾತನಾಡಿ, ಮಹಿಳೆಯರ ಆರ್ಥಿಕ ಅಭಿವೃದ್ಧಿ ಮತ್ತು ಕುಟುಂಬ ನಿರ್ವಹಣೆಗೆ ಮತ್ಸ್ಯ ಸಂಜೀವಿನಿ ಯೋಜನೆ ಸಹಕಾರಿಯಾಗಲಿದೆ ಎಂದರು.
ಮಹಿಳೆಯರ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಪೂರಕವಾಗಿ ರಾಜ್ಯ ಸರ್ಕಾರ ಹಲವು ಜನಪರ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಇದರ ಜೊತೆಗೆ ಈಗ ಮತ್ಸ್ಯ ಸಂಜೀವಿನಿ ಯೋಜನೆ ಜಾರಿಗೊಳಿಸುವ ಮೂಲಕ ಮಹಿಳಾ ಒಕ್ಕೂಟಗಳನ್ನು ಸದೃಢಗೊಳಿಸಲು ಮುಂದಾಗಿದೆ. ಮೀನು ಸಾಕಾಣಿಕೆಯಿಂದ ಅಧಿಕ ಲಾಭ ಮತ್ತು ಹೆಚ್ಚು ಅನುಕೂಲವಾಗುತ್ತದೆ. ಹಾಗಾಗಿ ಮಹಿಳಾ ಸ್ವ ಸಹಾಯ ಗುಂಪುಗಳು ಈ ಯೋಜನೆ ಸದುಪಯೋಗಪಡಿಸಿಕೊಳ್ಳಬೇಕು ಎಂದರು.ಜಿಲ್ಲೆಯಲ್ಲಿ ಒಟ್ಟು 250 ಮಂದಿ ಮಹಿಳಾ ಸದಸ್ಯರನ್ನೊಳಗೊಂಡ 49 ಸ್ವ ಸಹಾಯ ಗುಂಪುಗಳು ಮತ್ತು 49 ಕೆರೆಗಳನ್ನು ಮತ್ಸ್ಯ ಸಂಜೀವಿನಿ ಯೋಜನೆಗೆ ಆಯ್ಕೆ ಮಾಡಿ ಒಟ್ಟು 9 ಲಕ್ಷ ಮೀನು ಮರಿಗಳನ್ನು ಬಿಟ್ಟು ಸಾಕಾಣಿಕೆ ಮಾಡಿಸುವ ಗುರಿ ಹೊಂದಲಾಗಿದೆ. ತಾಲೂಕಿನಲ್ಲಿ ಪ್ರಾಯೋಗಿಕವಾಗಿ ತುಪ್ಪದಮಡು, ಕಾಳಿಂಗನಹಳ್ಳಿ, ದೇವರಮಲ್ಲನಾಯ್ಕನಹಳ್ಳಿ, ಭೀಮನಹಳ್ಳಿ ಹಾಗೂ ದೊಡ್ಡಾಬಾಲ ಗ್ರಾಪಂ ವ್ಯಾಪ್ತಿಗೆ ಬರುವ 5 ಕೆರೆಗಳನ್ನು ಯೋಜನೆಗೆ ಆಯ್ಕೆ ಮಾಡಿಕೊಳ್ಳಲಾಗಿದೆ ಎಂದರು.
ಈ ವೇಳೆ ಮೀನುಗಾರಿಕೆ ಇಲಾಖೆ ಉಪ ನಿರ್ದೇಶಕ ಹಾಗೂ ಜಿಪಂ ಪ್ರಭಾರ ಉಪ ಕಾರ್ಯದರ್ಶಿ ಬಿ.ಎಚ್.ಬಾಬಾಸಾಬ್, ತಾಪಂ ಇಒ ಬಿ.ಎಸ್.ಸತೀಶ್, ಮೀನುಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಜಗದೀಶ್, ಗ್ರಾಪಂ ಮಾಜಿ ಅಧ್ಯಕ್ಷ ಎಂ.ರಾಘವೇಂದ್ರ, ಮುಖಂಡರಾದ ಚಿಕ್ಕಮ್ಮ, ಗೀತಾ, ಕಾಂತ, ಪುಟ್ಟಸ್ವಾಮಿ, ಎನ್‌ಆರ್‌ಎಲ್‌ಎಂ ವಿಭಾಗದ ಸಿಬ್ಬಂದಿ ಮತ್ತು ಸಂಜೀವಿನಿ ಒಕ್ಕೂಟದ ಮಹಿಳಾ ಸ್ವಸಹಾಯ ಗುಂಪುಗಳ ಸದಸ್ಯರು ಇದ್ದರು.