ಹುಬ್ಬಳ್ಳಿ:
ಈ ಮೂಲಕ ಕಾಂಗ್ರೆಸ್ ಸರ್ಕಾರ ಬಡವರ ಪರ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ.
ರಾಜ್ಯದಲ್ಲಿ ಪಂಚ ಗ್ಯಾರಂಟಿ ಯೋಜನೆ ಜಾರಿಗೊಳಿಸುವ ಮೂಲಕ ಜನಪರ ಆಡಳಿತ ಮುಂದುವರಿಸಿದ ಕಾಂಗ್ರೆಸ್ ಸರ್ಕಾರ, 6ನೇ ಗ್ಯಾರಂಟಿ ಭಾಗವಾಗಿ ಬಡವರಿಗೆ ಸೂರು ಒದಗಿಸುವ ಕೈಂಕರ್ಯ ಮಾಡುತ್ತಿದೆ. ವಸತಿ ರಹಿತ ಕಡು ಬಡವರಿಗೆ ಸುಸಜ್ಜಿತ ಸೂರು ಕಲ್ಪಿಸುವ ದೃಢ ಸಂಕಲ್ಪದ ಸರ್ಕಾರದ ಕನಸು ಸಾಕಾರ ಮಾಡಲು ಜಮೀರ್ ಅಹಮದ್‌ಖಾನ್ ಹಾಗೂ ಪ್ರಸಾದ ಅಬ್ಬಯ್ಯ ಜೋಡೆತ್ತಿನಂತೆ ಕ್ರಿಯಾಶೀಲರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.ಈ ಜೋಡೆತ್ತಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ ಅವರ ಅಗತ್ಯ ಮಾರ್ಗದರ್ಶನ, ಸಹಕಾರ ಕೂಡ ನೀಡುತ್ತಿರುವುದು ವಿಶೇಷ. ಬಡವರಿಗಾಗಿ ಏನಾದರೂ ಮಾಡಬೇಕೆಂಬ ಈ ಜೋಡೆತ್ತಿನ ಇದೇ ತುಡಿತ ಅವರಿಬ್ಬರ ಸಂಬಂಧವನ್ನು ಮತ್ತಷ್ಟು ಗಟ್ಟಿಗೊಳಿಸಿದೆ. ಈ ಇಬ್ಬರು ಟೊಂಕ ಕಟ್ಟಿ ಕೆಲಸ ಮಾಡುತ್ತಿದ್ದಾರೆ.
ಈಗಾಗಲೇ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ ಈ ವರೆಗೂ ಅಂದಾಜು 80 ಸಾವಿರಕ್ಕೂ ಹೆಚ್ಚು ಮನೆ ನಿರ್ಮಿಸಿದ್ದು, ಈ ಪೈಕಿ 36,789 ಮನೆಗಳನ್ನು 2024ರಲ್ಲೇ ಹಸ್ತಾಂತರ ಮಾಡಲಾಗಿದೆ. ಇದೀಗ 2ನೇ ಹಂತದಲ್ಲಿ ರಾಜ್ಯಾದ್ಯಂತ 42,345 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಹುಬ್ಬಳ್ಳಿಯಿಂದ ಮಾಡಲಾಗುತ್ತಿದೆ. ಅದ್ಧೂರಿ ಕಾರ್ಯಕ್ರಮ ನೆರವೇರಿಸಲು ವಸತಿ ಸಚಿವ ಜಮೀರ್ ಅಹಮದ್‌ಖಾನ್, ಶಾಸಕ ಪ್ರಸಾದ ಅಬ್ಬಯ್ಯ, ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಅವರು ಭರದ ಸಿದ್ಧತೆ ಕೂಡ ನಡೆಸಿದ್ದಾರೆ.ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಂಟೂರು ರಸ್ತೆಯಲ್ಲಿ ನಿರ್ಮಿಸಿದ 1,008 ಮನೆ ಸೇರಿದಂತೆ ರಾಜ್ಯಾದ್ಯಂತ ನಿರ್ಮಿಸಿದ ಒಟ್ಟು 42,345 ಮನೆಗಳ ಹಸ್ತಾಂತರ ಕಾರ್ಯಕ್ರಮವನ್ನು ಜ. 24ರಂದು ಬೆಳಗ್ಗೆ 11ಕ್ಕೆ ನಡೆಯಲಿದೆ. ವಸತಿ ಸಚಿವ ಜಮೀರ್ ಅಹಮದ್‌ಖಾನ್ ಅಧ್ಯಕ್ಷತೆ ಹಾಗೂ ಸ್ಲಂ ಬೋರ್ಡ್ ಅಧ್ಯಕ್ಷ ಹಾಗೂ ಶಾಸಕ ಪ್ರಸಾದ ಅಬ್ಬಯ್ಯ ಅವರ ನೇತೃತ್ವದಲ್ಲಿ ಕಾರ್ಯಕ್ರಮ ನಡೆಯಲಿದೆ. ಎಐಸಿಸಿ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ, ಸೇರಿದಂತೆ ಗಣ್ಯಾತಿಗಣ್ಯರು ಪಾಲ್ಗೊಳ್ಳುತ್ತಿದ್ದಾರೆ. ಇಲ್ಲಿ ಆಸ್ಪತ್ರೆ, ಗ್ರಂಥಾಲಯ, ಶಾಪಿಂಗ್ ಮಾಲ್, ಪ್ರತಿ ಮನೆಗೂ ಬಾಲ್ಕನಿ ವ್ಯವಸ್ಥೆ, ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಫಲಾನುಭವಿಗಳು ಖುಷಿ ಪಡುವಂತಿವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಲಾಡ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.ಜಮೀರ್ ಮಾಸ್ ಲೀಡರ್!ಸಿಎಂ ಸಿದ್ದರಾಮಯ್ಯ ಅವರ ಆಪ್ತರಲ್ಲಿ ಒಬ್ಬರಾಗಿರುವ ಜಮೀರ್ ಅಹಮದ್‌ಖಾನ್ ಅವರು ಮಂತ್ರಿ ಮಂಡಲದ ಯಾವುದೇ ಖಾತೆ ನೀಡಿದರೂ, ಆ ಸ್ಥಾನಕ್ಕೆ ನ್ಯಾಯ ಒದಗಿಸುವ ಕೆಲಸ ಮಾಡಿರುವುದು ವಿಶೇಷ. ಇದೀಗ ವಸತಿ ಸಚಿವರಾಗಿ ಬಡ ಜನರಿಗೆ ಸೂರು ಒದಗಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ಸಹಾಯ ಹಸ್ತ ಕೋರಿ ಬಂದವರಿಗೆ ಮನಃಪೂರ್ವಕ ಸಹಾಯ ಮಾಡುತ್ತಿದ್ದಾರೆ. ಇವರ ಈ ಗುಣಗಳೇ ಅವರ ಬೆಳವಣಿಗೆಗೆ ಸಾಕ್ಷಿಯಾಗಿವೆ. ಹೀಗಾಗಿಯೇ ರಾಜ್ಯದ ಯಾವುದೇ ಕ್ಷೇತ್ರಕ್ಕೆ ಹೋದರೂ, ಜನರು ಅವರನ್ನೂ ಕಾಣಲು ಮುಗಿಬೀಳುವ ದೃಶ್ಯ ಸಾಮಾನ್ಯ. ಇವರೊಬ್ಬರು ಮಾಸ್ ಲೀಡರ್ ಆಗಿ ಹೊರಹೊಮ್ಮಿದ್ದಾರೆ. ಇನ್ನೊಂದೆಡೆ ಹು-ಧಾ ಪೂರ್ವ ವಿಧಾನಸಭಾ ಕ್ಷೇತ್ರದಿಂದ ಹ್ಯಾಟ್ರಿಕ್ ಗೆಲುವು ಸಾಧಿಸಿರುವ ಶಾಸಕ ಪ್ರಸಾದ ಅಬ್ಬಯ್ಯ ಅವರು ತಮ್ಮ ಕ್ಷೇತ್ರದಲ್ಲಿ ಅಭಿವೃದ್ಧಿ ಪರ್ವ ಮಾಡಿದ್ದಾರೆ. ಈಗ ಸ್ಲಂ ಬೋರ್ಡ್ ಅಧ್ಯಕ್ಷರಾಗಿ ತಮ್ಮ 2 ವರ್ಷದ ಅಧಿಕಾರವಧಿಯಲ್ಲಿ ಮಂಡಳಿಯಿಂದ ನಿರ್ಮಿಸಿದ 80 ಸಾವಿರಕ್ಕೂ ಹಂಚಿಕೆ ಮಾಡಲಾಗುತ್ತಿದೆ. ಇದು ಈ ಇಬ್ಬರು ನಾಯಕರ ಜನಪರ ಕಾಳಜಿಗೆ ಹಿಡಿದ ಕೈಗನ್ನಡಿ.ವಸತಿ ಸಚಿವನಾಗಿ ಬಡ ಜನರಿಗೆ ಸಿಎಂ ಸಿದ್ದರಾಮಯ್ಯ ಅವರ ಆಶೀರ್ವಾದದಿಂದ ಸೂರು ಒದಗಿಸುವ ಪ್ರಾಮಾಣಿಕ ಕೆಲಸ ಮಾಡುತ್ತಿದ್ದೇನೆ. ಮುಂದಿನ ದಿನಗಳಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ರಾಜ್ಯಾದ್ಯಂತ 30 ಸಾವಿರಕ್ಕೂ ಹೆಚ್ಚು ಮನೆಗಳನ್ನು 3ನೇ ಹಂತದಲ್ಲಿ ಹಂಚಿಕೆ ಮಾಡಲಾಗುವುದು.ಜಮೀರ್ ಅಹ್ಮದ್‌ಖಾನ್, ವಸತಿ, ವಕ್ ಮತ್ತು ಅಲಸಂಖ್ಯಾತರ ಕಲ್ಯಾಣ ಸಚಿವರು.
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮೊದಲನೆಯ ಹಂತದಲ್ಲಿ ರಾಜ್ಯಾದ್ಯಂತ 36,789 ಮನೆಗಳನ್ನು ಫಲಾನುಭವಿಗಳಿಗೆ ಹಸ್ತಾಂತರಿಸಲಾಗಿದೆ. ಈಗ ಎರಡನೇ ಹಂತದಲ್ಲಿ 42,345 ಮನೆ ಹಸ್ತಾಂತರಿಸಲಾಗುತ್ತಿದೆ. ಈ ಪೈಕಿ ಹು-ಧಾ ಪೂರ್ವದ 1,008 ಮನೆ ನೀಡಲಾಗುತ್ತಿದೆ. ಸೂರು ಇಲ್ಲದ ಬಡವರಿಗೆ ಮನೆ ಒದಗಿಸಿದ ಆತ್ಮಸಂತೃಪ್ತಿ ಇದೆ.
ಪ್ರಸಾದ ಅಬ್ಬಯ್ಯ, ಸ್ಲಂ ಬೋರ್ಡ್ ಅಧ್ಯಕ್ಷ, ಹು-ಧಾ ಪೂರ್ವ ಕ್ಷೇತ್ರದ ಶಾಸಕ