ಕನ್ನಡಪ್ರಭ ವಾರ್ತೆ ಮಂಡ್ಯ
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಲ್ಲಿ ಗರಿಷ್ಠ ಸಾಧನೆ ಮಾಡಿದ್ದನ್ನು ಗುರುತಿಸಿ ಮಂಡ್ಯ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಎಸ್.ಎಸ್.ಕೋಮಲ್‌ಕುಮಾರ ಅವರನ್ನು ಬೆಳಗಾವಿಯಲ್ಲಿ ನಡೆದ ಸಮಾರಂಭದಲ್ಲಿ ಇಲಾಖೆಯಿಂದ ಪ್ರಶಂಸಾ ಪತ್ರವನ್ನು ನೀಡಿ ಅಭಿನಂದಿಸಲಾಯಿತು.ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವಿದ್ಯಾರ್ಥಿ ವೇತನ ಯೋಜನೆಯಡಿ 2024-25ನೇ ಸಾಲಿಗೆ ರಾಜ್ಯ ಮಟ್ಟದಲ್ಲಿ ಗರಿಷ್ಠ ಸಾಧನೆ ಮಾಡಿ ಅವರು ರಾಜ್ಯ ಮಟ್ಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಅವರ ಸಾಧನೆಯನ್ನು ಗುರುತಿಸಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವೆ ಲಕ್ಷ್ಮೀಹೆಬ್ಬಾಳ್ಕರ್, ಸರ್ಕಾರದ ಕಾರ್ಯದರ್ಶಿ ಸಂಬಲ್ ಇಕ್ಬಾಲ, ಇಲಾಖೆ ನಿರ್ದೇಶಕ ಟಿ.ರಾಘವೇಂದ್ರ, ಮಹೇಶ್‌ಬಾಬು, ಜಂಟಿ ನಿರ್ದೇಶಕ ನಿಶ್ಚಲ್ ಮತ್ತು ನಟರಾಜು ಹಾಗೂ ಬೆಳಗಾವಿ ಉಪನಿರ್ದೇಶಕರಾದ ಚೇತನ್‌ಕುಮಾರ್ ಅವರು ಅಭಿನಂದಿಸಿದರು.
ನೆಲದನಿ ಬಳಗದ ಅಧ್ಯಕ್ಷ ಎಂ.ಸಿ.ಲಂಕೇಶ್ ಹಾಗೂ ಪದಾಧಿಕಾರಿಗಳು ಜಿಲ್ಲೆ ಜನತೆಯ ಪರವಾಗಿ ಕೋಮಲ್‌ಕುಮಾರ್ ಅವರಿಗೆ ಶುಭಾಶಯ ಕೋರಿದ್ದಾರೆ.ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ
ಮಂಡ್ಯ: ಮಹಾರಾಷ್ಟ್ರದ ನಾಗಪುರ ದೀಕ್ಷಾಭೂಮಿಯಲ್ಲಿ 2025ರ 2ನೇ ಅಕ್ಟೋಬರ್ ರಂದು ವಿಜಯದಶಮಿ ದಿನದಂದು ನಡೆಯಲಿರುವ ಧಮ್ಮ ಪ್ರವರ್ತನಾ ದಿನಕ್ಕೆ ಭೇಟಿ ನೀಡಲು ಅನುಕೂಲವಾಗುವಂತೆ ಸೆಪ್ಟೆಂಬರ್ 30 ರಿಂದ ಅಕ್ಟೋಬರ್ 4 ರವರಗೆ ಬಸ್ಸು ಹಾಗೂ ರೈಲಿನ ಮೂಲಕ ಪ್ರಯಾಣಿಸಲು ಸಮಾಜ ಕಲ್ಯಾಣ ಇಲಾಖೆಯಿಂದ ಪ್ರಯಾಣ ವ್ಯವಸ್ಥೆ ಕಲ್ಪಿಸಲಾಗುತ್ತಿದೆ. ಧಮ್ಮ ಪ್ರವರ್ತನಾ ದಿನಕ್ಕೆ ಭೇಟಿನೀಡಲು ಆಸಕ್ತ ಡಾ.ಬಿ.ಆರ್. ಅಂಬೇಡ್ಕರ್ ರವರ ಅನುಯಾಯಿಗಳ ಹಿತದೃಷ್ಟಿಯಿಂದ ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ತಿಳಿಸಿದ್ದ ದಿನಾಂಕವನ್ನು ವಿಸ್ತರಿಸಲಾಗಿದೆ. ಅರ್ಜಿಯನ್ನು ಸೆಪ್ಟೆಂಬರ್ 15 ರವರಗೆ https://swd.karnataka.gov.in ವೆಬ್‌ಸೈಟ್‌ನಲ್ಲಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು ಅಥವಾ ತಾಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸಲು ಕೋರಲಾಗಿದೆ.18 ರಂದು ಗ್ರಾಮೀಣ ಬ್ಯಾಂಕಿನ ವಾರ್ಷಿಕ ಮಹಾಸಭೆಮಂಡ್ಯ: ಗ್ರಾಮೀಣ ಅಭಿವೃದ್ಧಿ ಬ್ಯಾಂಕಿನ 2024-25ನೇ ಸಾಲಿನ ಸರ್ವಸದಸ್ಯರ ವಾರ್ಷಿಕ ಮಹಾಸಭೆಯನ್ನು ಸೆಪ್ಟೆಂಬರ್ 18 ರಂದು ಬೆಳಗ್ಗೆ 11 ಗಂಟೆಗೆ ಬ್ಯಾಂಕಿನ ಆವರಣದಲ್ಲಿ ಅಧ್ಯಕ್ಷ ಮರೀಗೌಡರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗಿದೆ. ಬ್ಯಾಂಕಿನ ಸದಸ್ಯರು ಸಕಾಲಕ್ಕೆ ಆಗಮಿಸಿ ಸಭೆಯನ್ನು ಯಶಸ್ವಿಗೊಳಿಸಲು ಪ್ರಭಾರ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ಕೋರಿದ್ದಾರೆ.