ಕನ್ನಪ್ರಭ ವಾರ್ತೆ ಶಿವಮೊಗ್ಗ
ನಗರದ ಮಥುರಾ ಪಾರಾಡೈಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಮಥುರಾ ಪಾರಡೈಸ್ ರಜತೋತ್ಸವ ಸಂಭ್ರಮಾಚರಣೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ಶಿಕ್ಷಣ ಪಡೆದವರು, ಪಡೆಯದೇ ಇರುವವರು ಸೇರಿ ಎಲ್ಲ ವರ್ಗದವರಿಗೂ ವಸತಿ, ಊಟದ ಜತೆಗೆ ಸಂಬಳ ನೀಡುವ ಉದ್ಯಮ ಹೋಟೆಲ್ ಆಗಿದೆ ಎಂದು ಅಭಿಪ್ರಾಯಪಟ್ಟರು.
ವಕೀಲ ಕೆ.ಪಿ.ಶ್ರೀಪಾಲ್ ಮಾತನಾಡಿ, ಮಥುರಾ ಹೋಟೆಲ್ ವ್ಯಾಪಾರ ವಹಿವಾಟಿನ ಜತೆಯಲ್ಲಿ ಸಮಾಜಮುಖಿ ವೇದಿಕೆಗಳಿಗೆ ಹೆಚ್ಚಿನ ಅವಕಾಶ ನೀಡುವ ಕೆಲಸ ಮಾಡುತ್ತಿರುವುದು ಶ್ಲಾಘನೀಯ ಎಂದು ತಿಳಿಸಿದರು.ವಿಧಾನ ಪರಿಷತ್ ಮಾಜಿ ಸದಸ್ಯ ಆರ್.ಪ್ರಸನ್ನಕುಮಾರ್ ಮಾತನಾಡಿ, 25 ವರ್ಷಗಳ ಹಿಂದೆ ಶಿವಮೊಗ್ಗದ ಸಣ್ಣ ನಗರದಲ್ಲಿ ಲಕ್ಷಾಂತರ ರುಪಾಯಿ ಖರ್ಚು ಮಾಡಿ ಉತ್ತಮ ಹೋಟೆಲ್ ಮತ್ತು ವಸತಿಗೃಹ ಪ್ರಾರಂಭಿಸುವ ಧೈರ್ಯವನ್ನು ಗೋಪಿನಾಥ್ ಮಾಡಿದ್ದರು, ಇಂದು ಸಮಾಜಮುಖಿ ಕಾರ್ಯಕ್ರಮಗಳಿಗೆ ಸಹಕಾರಿಯಾಗುತ್ತಿದ್ದಾರೆ ಎಂದು ಹೇಳಿದರು.
ರಜತೋತ್ಸವ ಸಮಿತಿ ಅಧ್ಯಕ್ಷ ವಸಂತ ಹೋಬಳಿದಾರ್ ಮಾತನಾಡಿ, ಪ್ರತಿಯೊಬ್ಬ ಉದ್ಯಮಿ ತನ್ನ ಉದ್ಯಮದ ಜತೆಗೆ ಸಮಾಜಮುಖಿ ಕಾರ್ಯಗಳನ್ನು ಮಾಡುವುದರ ಮೂಲಕ ಸಮಾಜದ ಶ್ರೇಯೋಭಿವೃದ್ಧಿಗೆ ಕೆಲಸ ಮಾಡಿದಲ್ಲಿ ಎಲ್ಲ ಸಮುದಾಯಗಳು, ನಗರಗಳು ಉತ್ತಮ ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಹೇಳಿದರು.
ರಜತ ಮಹೋತ್ಸವ ವರ್ಷದ ಸಂಭ್ರಮಾಚರಣೆ ಅಂಗವಾಗಿ ಶಿವಮೊಗ್ಗ ಜಿಲ್ಲೆ 80 ಪ್ರವಾಸಿ ತಾಣಗಳನ್ನು ಸರ್ಕಾರ ಹಾಗೂ ಸಾರ್ವಜನಿಕ ಸಹಭಾಗಿತ್ವದಲ್ಲಿ ಅಭಿವೃದ್ಧಿ ಪಡಿಸಲು ಸರ್ಕಾರಕ್ಕೆ ವರದಿ ಸಲ್ಲಿಸಿ ಅನುಷ್ಠಾನ ಮಾಡಲು ಪ್ರಯತ್ನಿಸಲಾಗುವುದು ಎಂದು ವಿವರಿಸಿದರು.