ಕನ್ನಡಪ್ರಭ ವಾರ್ತೆ ಕಲಬುರಗಿ
ಜೇವರ್ಗಿ ಹೊರವಲಯದಲ್ಲಿರುವ ಧರಂಸಿಂಗ್ ಕಲ್ಯಾಣ ಮಂಟಪದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಭಾಗವಹಿಸಿ ಕಾಂಗ್ರೆಸ್ ಹುರಿಯಾಳು ರಾಧಾಕೃಷ್ಣ ಪರವಾಗಿ ಮತ ಯಾಚಿಸಿ ಮಾತನಾಡಿದರು.
ಕಳೆದ ಚುನಾವಣೆಯಲ್ಲಿ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಆದ ಸೋಲು ಅವರ ವೈಯಕ್ತಿಕ ಸೋಲಲ್ಲ ಅದು ಅಭಿವೃದ್ಧಿಗೆ ಆದ ಹಿನ್ನೆಡೆಯಾಗಿದೆ. ಈ ಸಲ ಯಾವ ಕಾರಣಕ್ಕೂ ಹಾಗಾಗಬಾರದು. ಅಭ್ಯರ್ಥಿ ರಾಧಾಕೃಷ್ಣ ದೊಡ್ಡಮನಿ ಅವರನ್ನು ಗೆಲ್ಲಿಸುವ ಮೂಲಕ ಕಲಬುರಗಿಯ ಸಮಗ್ರ ಅಭಿವೃದ್ಧಿಗೆ ಸಹಕಾರ ನೀಡಿ, ರಾಜ್ಯದಲ್ಲಿ ನಮ್ಮ ಸರಕಾರವಿದೆ, ಜಿಲ್ಲೆಯ ಸರ್ವತೋಮುಖ ಪ್ರಗತಿಗೆ ಇದು ಸಕಾಲವೆಂದರು.ಬಿಜೆಪಿಯವರ ಸುಳ್ಳು ಭರವಸೆಗಳನ್ನು ನಂಬಬೇಡಿ, ನಾವು ಅದಾಗಲೇ ಪಂಚ ಗ್ಯಾರಂಟಿಗಳ ಬಗ್ಗೆ ಮನೆ ಮನೆಗೂ ಪತ್ರ ತಲುಪಿಸಿ ಅವುಗಳನ್ನ ಅನುಷ್ಠಾನಕ್ಕೆ ತಂದಿದ್ದೇವೆ. ಲೋಕ ಸಭೆಯಲ್ಲೂ 25 ಗ್ಯಾರಂಟಿಗಳನ್ನು ಘೋಷಿಸಿ ನಿಮ್ಮ ಬದುಕಿನ ಏಳಿಗೆಗೆ ಬದ್ಧರಾಗಿದ್ದೇವೆಂದ ಡಾ. ಅಜಯ್ ಸಿಂಗ್ ಈ ಬಾರಿ ಕಲಬುರಗಿಯಲ್ಲಿ ಕಾಂಗ್ರೆಸ್ ಜಯಭೇರಿ ಬಾರಿಸುವಂತೆ ನಿಮ್ಮ ಅಮೂಲ್ಯ ಮತ ಚಲಾಯಿಸಿರಿ ಎಂದರು.
ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗ ಪ್ರತಿ ಮಹಿಳೆಯರಿಗೆ ವಾರ್ಷಿಕ ರು.1 ಲಕ್ಷ ಪರಿಹಾರ ನೀಡಲಾಗುವುದು ಎಂದು ಹೇಳಿದ ಡಾ ಅಜಯ್ ಸಿಂಗ್ ಜಿಲ್ಲೆಯ ಅಭಿವೃದ್ದಿಗೆ ಪಣತೊಟ್ಟು ಕೆಲಸ ಧರಂ ಸಿಂಗ್ ಹಾಗೂ ಮಲ್ಲಿಕಾರ್ಜುನ ಖರ್ಗೆ ಅವರಂತೆ ರಾಧಾಕೃಷ್ಣ ಅವರು ಕೆಲಸ ಮಾಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಜೇವರ್ಗಿ ಮತಕ್ಷೇದಿಂದ ಕನಿಷ್ಠ 10,000-15,000 ಸಾವಿರ ಮತಗಳ ಲೀಡ್ ಕೊಡುತ್ತೇವೆ ಎಂದು ಇದೇ ಸಂದರ್ಭದಲ್ಲಿ ಡಾ. ಅಜಯ್ ಸಿಂಗ್ ಹೇಳಿದರು.
ಬಿಜೆಪಿ ಅಧಿಕಾರದ ಹತ್ತು ವರ್ಷಗಳ ಅವಧಿಯಲ್ಲಿ ದಿನಬಳಕೆ ವಸ್ತುಗಳು, ಪೆಟ್ರೋಲ್ ಡಿಸೇಲ್, ರಸಗೊಬ್ಬರ ಹಾಗೂ ಇತ್ಯಾದಿ ವಸ್ತುಗಳ ಬೆಲೆ ಗಗನಕ್ಕೇರಿದೆ. ಇದೆನಾ ಮೋದಿಯವರ ಅಚ್ಛಾದಿನ್ ? ರೈತರ ಆದಾಯ ದ್ವಿಗುಣ ಗೊಳಿಸುವ ಭರವಸೆ ನೀಡಿದ್ದರು. ಅವರು ನೀಡಿರುವ ಯಾವ ಭರವಸೆ ಈಡೇರಿಸಿದ್ದಾರೆ ಎಂದು ಪ್ರಶ್ನಿಸಿದ ಖರ್ಗೆ, ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿ ಇದ್ದಾಗ ಮನಮೋಹನ ಸಿಂಗ್ ರೂ 72,000 ಕೋಟಿ ರೈತರ ಸಾಲ ಮನ್ನಾ ಮಾಡಿದ್ದರು. ಬಿಜೆಪಿ ಸರ್ಕಾರ ರೈತರ ಸಾಲ ಮನ್ನಾ ಮಾಡಲು ಹಣದ ಕೊರತೆ ಕಾರಣ ಹೇಳಿ ಬಂಡವಾಳಶಾಯಿಗಳ 12 ಲಕ್ಷ ಕೋಟಿ ಸಾಲ ಮನ್ನಾ ಮಾಡಿದ್ದಾರೆ ಎಂದರು.
ವೇದಿಕೆಯ ಮೇಲೆ ಡಿಸಿಸಿ ಅಧ್ಯಕ್ಷ ಜಗದೇವ ಗುತ್ತೇದಾರ, ಶಾಸಕ ಅಲ್ಲಮಪ್ರಭು ಪಾಟೀಲ, ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಕೇದಾರಲಿಂಗಯ್ಯ ಮಠಪತಿ, ಶಿವಶರಣಪ್ಪ ಕೋಬಾಳ ಸೇರಿದಂತೆ ಇತರರು ಇದ್ದರು.