ಹಿಂಗಾರಿನ 6 ಬೆಳೆಗಳ ಬೆಂಬಲ ಬೆಲೆ ಹೆಚ್ಚಳ: ಸ್ವಾಗತ

KannadaprabhaNewsNetwork |  
Published : Oct 19, 2024, 12:24 AM IST
ಸಂಸದ ಈರಣ್ಣ ಕಡಾಡಿ | Kannada Prabha

ಸಾರಾಂಶ

ರೈತರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ಪ್ರತಿಫಲ ಒದಗಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಹಿಂಗಾರು ಹಂಗಾಮಿನ 6 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ ₹130 ರಿಂದ ₹300ರವರೆಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.

ಕನ್ನಡಪ್ರಭ ವಾರ್ತೆ ಮೂಡಲಗಿ

ರೈತರ ಪರಿಶ್ರಮಕ್ಕೆ ತಕ್ಕಂತೆ ಅವರಿಗೆ ಪ್ರತಿಫಲ ಒದಗಿಸಲು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟ ಹಿಂಗಾರು ಹಂಗಾಮಿನ 6 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆಯನ್ನು ಪ್ರತಿ ಕ್ವಿಂಟಾಲ್ ಗೆ ₹130 ರಿಂದ ₹300ರವರೆಗೆ ಏರಿಕೆ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಸ್ವಾಗತಿಸಿದ್ದಾರೆ.

ಕೇಂದ್ರ ಸರ್ಕಾರ ರೈತರ ಉತ್ಪನ್ನಗಳಿಗೆ ಲಾಭದಾಯಕ ದರ ಖಾತ್ರಿಪಡಿಸುವುದಕ್ಕಾಗಿ 2025-26ನೇ ಸಾಲಿನ ಹಿಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಿಸಿದೆ. ಕನಿಷ್ಠ ಬೆಂಬಲ ಬೆಲೆಯಲ್ಲಿ ಗರಿಷ್ಟ ಹೆಚ್ಚಳವಾಗಿ ರಾಪ್ಸೀಡ್ ಮತ್ತು ಸಾಸಿವೆ ಪ್ರತಿ ಕ್ವಿಂಟಲ್‌ಗೆ ₹300 ಹಾಗೂ ಮಸೂರ -₹275,ಗೋದಿ -₹150, ಬಾರ್ಲಿ- ₹130, ಕಡಲೆ - ₹210, ಸೂರ್ಯಕಾಂತಿ - ₹140 ಹೆಚ್ಚಿಸಿ ದೀಪಾವಳಿಗೂ ಮುನ್ನ ರೈತರಿಗೆ ಬಂಪರ್ ಕೊಡುಗೆ ನೀಡಿದೆ ಎಂದವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಮುಂಗಾರು ಹಂಗಾಮಿನ 14 ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ ಏರಿಕೆ ಮಾಡಲಾಗಿದೆ. ಹಿಂಗಾರು ಹಂಗಾಮಿಗೆ 6 ಬೆಳೆಗಳಿಗೆ ಹೊಸ ಕನಿಷ್ಠ ಬೆಂಬಲ ಬೆಲೆ ಘೋಷಿಸಲಾಗಿದೆ. ಯೂರಿಯಾ ಹೊರತಾದ ರಸಗೊಬ್ಬರಗಳ ಸಬ್ಸಿಡಿಗೆ ₹24,475 ಕೋಟಿ ವಿನಿಯೋಗಿಸುವ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಲಾಗಿದೆ. ಅನ್ನದಾತರ ಆದಾಯ ಹೆಚ್ಚಿಸಲು ಸದಾ ಬದ್ಧತೆ ತೋರಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ನಾಡಿನ ಅನ್ನದಾತರ ಪರವಾಗಿ ಧನ್ಯವಾದ ಅರ್ಪಿಸುವುದಾಗಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸ್ವಾರ್ಥಕ್ಕಾಗಿ ಬ್ಲ್ಯಾಕ್‌ಮೇಲ್‌ ಮಾಡಲು ಇಷ್ಟವಿಲ್ಲ: ಡಿಸಿಎಂ
ಒಪಿಎಸ್‌ ಜಾರಿಗೆ ಸರ್ಕಾರಕ್ಕೆ ಒತ್ತಾಯಿಸುವೆ