ನಾಲ್ಕುವರೆ ಗಂಟೆಗಳಲ್ಲಿ ಯಶಸ್ವಿ ತೆರವು ಕಾರ್ಯ, ಮತ್ತೆ ರೈಲು ಸಂಚಾರ ಶುರುಕನ್ನಡಪ್ರಭ ವಾರ್ತೆ ಮಂಗಳೂರು
ಇದೇ ಮಾರ್ಗದಲ್ಲಿ ಮಂಗಳೂರಿಗೆ ಸಂಚರಿಸುತ್ತಿದ್ದ ಎಕ್ಸ್‌ಪ್ರೆಸ್ ರೈಲು ಬಂಡೆ ಬಿದ್ದಿರುವ ಸ್ಥಳದಿಂದ ಸ್ವಲ್ಪ ದೂರಕ್ಕೆ ಬಂದು ನಿಂತಿದೆ. ಲೋಕೋ ಪೈಲಟ್ ಸಮಯ ಪ್ರಜ್ಞೆಯಿಂದ ಬಾರಿ ಅನಾಹುತ ತಪ್ಪಿದಂತಾಗಿದೆ. ನಸುಕಿನ 4.30 ಗಂಟೆಗೆ ಹಳಿಗೆ ಬಂಡೆ ಬಿದ್ದಿರುವುದು ಗೋಚರಿಸಿದೆ.
ರೈಲು ಸಂಚಾರ ಸ್ಥಗಿತಗೊಂಡ ಕಾರಣ ನೂರಾರು ಪ್ರಯಾಣಿಕರು ರೈಲು ನಿಲ್ದಾಣದಲ್ಲಿ ಕಾಲ ಕಳೆಯುವಂತಾಯಿತು. ರೈಲ್ವೆ ಅಧಿಕಾರಿಗಳು ಎಲ್ಲ ಪ್ರಯಾಣಿಕರಿಗೆ ಕಾಫಿ, ತಿಂಡಿ ವ್ಯವಸ್ಥೆ ಮಾಡಿದ್ದಾರೆ. ಮಳೆಗಾಲದಲ್ಲಿ ಈ ಘಾಟ್ ಪ್ರದೇಶದಲ್ಲಿ ತುರ್ತು ನಿರ್ವಹಣಾ ವ್ಯವಸ್ಥೆಯನ್ನು ಅಳವಡಿಸಿರುವುದರಿಂದ ಕೂಡಲೇ ಹಳಿ ಮೇಲೆ ಬಿದ್ದ ಮಣ್ಣನ್ನು ತೆರವುಗೊಳಿಸುವ ಕಾರ್ಯಾಚರಣೆ ಕೈಗೆತ್ತಿಕೊಳ್ಳಲಾಯಿತು. ಬೆಳಗ್ಗೆ 9 ಗಂಟೆ ಸುಮಾರಿಗೆ ಬಂಡೆಯನ್ನು ತೆರವುಗೊಳಿಸಿ ಹಳಿಯನ್ನು ರೈಲು ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ.ಸಕಲೇಶಪುರ ಭಾಗದಿಂದ ಸುಬ್ರಹ್ಮಣ್ಯ ಕಡೆಗೆ ಬರುವ ಎಲ್ಲ ರೈಲಗಳನ್ನು ಆಯಾಯ ರೈಲು ನಿಲ್ದಾಣಗಳಲ್ಲಿ ತಡೆ ಹಿಡಿಯಲಾಯಿತು. ಇದರಿಂದಾಗಿ ರೈಲು ಸಂಖ್ಯೆ 16511 ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್‌ಪ್ರೆಸ್ ರೈಲು ಕಡಗರವಳ್ಳಿಗೆ ನಸುಕಿನ 3.40 ಗಂಟೆಗೆ ಆಗಮಿಸಿದ್ದು, 4 ಗಂಟೆ 10 ನಿಮಿಷ ತಡವಾಗಿ ಸಂಚರಿಸಿದೆ. ರೈಲು ಸಂಖ್ಯೆ 16585 ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು-ಮುರುಡೇಶ್ವರ ಎಕ್ಸ್‌ಪ್ರೆಸ್ ಸಕಲೇಶಪುರಕ್ಕೆ ಬೆಳಗ್ಗೆ 3.10 ಕ್ಕೆ ಆಗಮಿಸಿದ್ದು, 3 ಗಂಟೆ 50 ನಿಮಿಷ ತಡವಾಗಿ ಸಂಚರಿಸಿದೆ. ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಎಕ್ಸ್‌ಪ್ರೆಸ್ ವಿಶೇಷ ರೈಲು ಸಕಲೇಶಪುರಕ್ಕೆ ಬೆಳಗ್ಗೆ 6.26 ಕ್ಕೆ ಆಗಮಿಸಿದ್ದು, 2 ಗಂಟೆ 48 ನಿಮಿಷ ತಡವಾಗಿ ಸಂಚರಿಸಿದೆ. -------------