ಹಿಂದಿ ಭಾಷೆ ಉನ್ನತ ಹುದ್ದೆ ಪಡೆದುಕೊಳ್ಳಲು ಸಹಕಾರಿ: ಬಿಜಾಪುರ

KannadaprabhaNewsNetwork |  
Published : Jul 21, 2025, 01:30 AM IST
ಗದಗ ಮಹಾವೀರ ಜೈನ್ ಪ್ರೌಢಶಾಲೆಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಜಿಲ್ಲಾ ಘಟಕದಿಂದ ಜಿಲ್ಲಾಮಟ್ಟದ ಹಿಂದಿ ಭಾಷಾ ಶಿಕ್ಷಕರ ಸಮಾಲೋಚನಾ ಸಭೆ ಹಾಗೂ ರಾಜ್ಯಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಮತ್ತು ಪ್ರಸ್ತುತ ವರ್ಷ ಹಿಂದಿ ಶಿಕ್ಷಕ ಸೇವಾ ನಿವೃತ್ತಿ ಪಡೆದ ಶಿಕ್ಷಕರಿಗೆ ಸನ್ಮಾನಿಸಲಾಯಿತು. | Kannada Prabha

ಸಾರಾಂಶ

ಹಿಂದಿ ಸಂಪರ್ಕ ಭಾಷೆಯಾಗಿದ್ದು ಕೇಂದ್ರ ಸರ್ಕಾರದ ಉದ್ಯೋಗ ಪರೀಕ್ಷೆಗಳಾದ ಐಎಎಸ್, ಯುಪಿಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಿಕೊಳ್ಳಲು ಅನುಕೂಲವಾಗುತ್ತದೆ. ಆ ಹಿನ್ನೆಲೆಯಲ್ಲಿ ಹಿಂದಿ ರಾಜ್ಯ ಭಾಷಾ ಸಂಘಟನೆಯನ್ನು ಬಲಿಷ್ಠಗೊಳಿಸಲು ಎಲ್ಲಾ ಹಿಂದಿ ಶಿಕ್ಷಕರು ಒಗ್ಗೂಡಬೇಕೆಂದು ಗದಗ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಲ್. ಬಿಜಾಪುರ ಹೇಳಿದರು.

ಗದಗ: ಹಿಂದಿ ಸಂಪರ್ಕ ಭಾಷೆಯಾಗಿದ್ದು ಕೇಂದ್ರ ಸರ್ಕಾರದ ಉದ್ಯೋಗ ಪರೀಕ್ಷೆಗಳಾದ ಐಎಎಸ್, ಯುಪಿಎಸ್, ಐಪಿಎಸ್ ಮತ್ತು ಇತರೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಿದ್ಯಾರ್ಥಿಗಳ ಭವಿಷ್ಯ ನಿರ್ಮಿಸಿಕೊಳ್ಳಲು ಅನುಕೂಲವಾಗುತ್ತದೆ. ಆ ಹಿನ್ನೆಲೆಯಲ್ಲಿ ಹಿಂದಿ ರಾಜ್ಯ ಭಾಷಾ ಸಂಘಟನೆಯನ್ನು ಬಲಿಷ್ಠಗೊಳಿಸಲು ಎಲ್ಲಾ ಹಿಂದಿ ಶಿಕ್ಷಕರು ಒಗ್ಗೂಡಬೇಕೆಂದು ಗದಗ ಜಿಲ್ಲಾ ಹಿಂದಿ ಭಾಷಾ ಶಿಕ್ಷಕರ ಸಂಘದ ಅಧ್ಯಕ್ಷ ಎ.ಎಲ್. ಬಿಜಾಪುರ ಹೇಳಿದರು.ನಗರದ ಮಹಾವೀರ ಜೈನ್ ಪ್ರೌಢಶಾಲೆಯಲ್ಲಿ ಜರುಗಿದ ಕರ್ನಾಟಕ ರಾಜ್ಯ ಪ್ರೌಢಶಾಲಾ ಹಿಂದಿ ಭಾಷಾ ಶಿಕ್ಷಕರ ಜಿಲ್ಲಾ ಘಟಕದಿಂದ ಜಿಲ್ಲಾಮಟ್ಟದ ಹಿಂದಿ ಭಾಷಾ ಶಿಕ್ಷಕರ ಸಮಾಲೋಚನಾ ಸಭೆ ಹಾಗೂ ರಾಜ್ಯಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಮತ್ತು ಪ್ರಸ್ತುತ ವರ್ಷ ಹಿಂದಿ ಶಿಕ್ಷಕ ಸೇವಾ ನಿವೃತ್ತಿ ಪಡೆದ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಹಿಂದಿ ಜನಪ್ರಿಯ ಭಾಷೆಯಾಗಿದ್ದು ವಿದೇಶಗಳಲ್ಲಿ ಹಿಂದಿಯಲ್ಲಿ ಮಾತನಾಡುವವರನ್ನು ಭಾರತೀಯರು ಎಂದು ಗುರುತಿಸಲಾಗುತ್ತದೆ. ಇದು ಎಲ್ಲ ಭಾಷೆಗಳನ್ನು ಜೋಡಿಸುತ್ತದೆ. ದೇಶದಲ್ಲಿ ಸುಮಾರು 4 ರಿಂದ 5 ಸಾವಿರ ಭಾಷೆಗಳಿವೆ ಇತ್ತೀಚಿನ ದಿನಗಳಲ್ಲಿ ಮಾತೃಭಾಷೆ ಕನ್ನಡ ಹಾಗೂ ಹಿಂದಿ ಮಾತನಾಡುವವರ ಸಂಖ್ಯೆ ಕ್ಷೀಣಿಸುತ್ತಿದೆ. ಎಲ್ಲರೂ ಇಂಗ್ಲೀಷ್‌ ಭಾಷೆಯ ಬೆನ್ನು ಬಿದ್ದಿದ್ದಾರೆ. ಹಿಂದಿ ಸುಂದರ ಭಾಷೆ. ಆದ್ದರಿಂದ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಹಿಂದಿಯ ಮೇಲೆ ಅಭಿಮಾನ ಉಂಟಾಗುವಂತೆ ಮಾಡಬೇಕು ಎಂದರು.ಜಿಲ್ಲಾ ಸಹ ಶಿಕ್ಷಕರ ಸಂಘದ ಅಧ್ಯಕ್ಷ ಬಿ.ಎಫ್.ಪೂಜಾರ ಮಾತನಾಡಿ, ಹಿಂದಿ ಭಾಷೆ ಕಲಿಕೆಗೆ ಸೀಮಿತವಾಗದೆ ಉನ್ನತ ಉದ್ಯೋಗವನ್ನು ಹೊಂದಲು ಕೂಡ ಅನುಕೂಲವಾಗಿದ್ದು ಮತ್ತು ಇತರ ರಾಜ್ಯಗಳಿಗೆ ಹಿಂದೆ ಭಾಷೆ ಸಹಕಾರಿಯಾಗಿದೆ. ಇಂದಿನ ಆಧುನಿಕ ಯುಗದಲ್ಲಿ ತೃತೀಯ ಭಾಷೆ ಎಲ್ಲರಿಗೂ ಅವಶ್ಯಕತೆ ಇದ್ದು ಸರ್ಕಾರ ತೃತೀಯ ಭಾಷಾ ನೀತಿಯನ್ನು ಮುಂದುವರಿಸಬೇಕೆಂದರು.ರಾಜ್ಯ ಪ್ರತಿನಿಧಿ ಯು.ಎಸ್.ನಿಪ್ಪಾಣಿಕರ ಮಾತನಾಡಿ, ತೃತೀಯ ಭಾಷೆಗೆ ಎದುರಾಗಿರುವ ಸಮಸ್ಯೆಗಳನ್ನು ಅರಿತುಕೊಂಡ ಎಚ್ಚೆತ್ತುಕೊಳ್ಳುವುದರ ಮೂಲಕ ಹಿಂದಿ ಭಾಷಾ ಶಿಕ್ಷಕರು ಪರಿಣಾಮಕಾರಿಯಾಗಿ ಬೋಧನೆ ಮಾಡಿ ಹಿಂದಿ ಭಾಷೆಯನ್ನು ಬೆಳೆಸಲು ಮುಂದಾಗಬೇಕೆಂದರು.ಎಸ್ಸೆಸ್ಸೆಲ್ಸಿ ಪರೀಕ್ಷಾ ನೂಡಲ್ ಅಧಿಕಾರಿ ಎಚ್.ಬಿ. ರಡ್ಡೆರ್, ತಾಲೂಕ ಹಿಂದಿ ಶಿಕ್ಷಕರ ಸಂಘದ ಅಧ್ಯಕ್ಷ ರವಿರಾಜ ಪವಾರ ಮಾತನಾಡಿದರು.ಈ ವೇಳೆ ರಾಜ್ಯಮಟ್ಟದ ಹಿಂದಿ ಶಿಕ್ಷಕ ರತ್ನ ಪ್ರಶಸ್ತಿ ಪಡೆದ ಶಿಕ್ಷಕರಿಗೆ ಹಾಗೂ ಪ್ರಸ್ತುತ ವರ್ಷ ಹಿಂದಿ ಶಿಕ್ಷಕ ಸೇವಾ ನಿವೃತ್ತಿ ಪಡೆದ ಶಿಕ್ಷಕರಿಗೆ ಸನ್ಮಾನಿಸಲಾಯಿತು.

ಆರ್.ಡಿ. ಪವಾರ್, ಧನಸಿಂಗ್ ರಾಠೋಡ, ಕೆ.ಪಿ. ರಾಠೋಡ, ಎಂ.ಬಿ. ಕಿತ್ತೂರ, ಜಯಶ್ರೀ ಜೋಶಿ, ವಾಸುದೇವ ಕಲಾಲ, ಎಸ್.ಎಸ್. ಪಾಟೀಲ, ರಾಧಾ ಜಾಲರೆಡ್ಡಿ ಹಾಗೂ ವಿದ್ಯಾರ್ಥಿಗಳು ಇದ್ದರು.

PREV

Recommended Stories

ಪ್ರೇಮದ ಇನ್ನೊಂದು ಹೆಸರೇ ಅಮೃತಾ ಪ್ರೀತಮ್
ಹೋಬೋ ಸೆಕ್ಷುಯಾಲಿಟಿ : ಒಂದು ಹಗುರ ಸಂಬಂಧದ ಕಥೆ!