ಗೋವುಗಳ ಕೆಚ್ಚಲು ಕೊಯ್ದ ಘಟನೆಗೆ ಖಂಡನೆ । ಕಠಿಣ ಶಿಕ್ಷೆ ವಿಧಿಸಲು ಸಂಸದ ರಾಘವೇಂದ್ರ ಆಗ್ರಹ
ಚಾಮರಾಜಪೇಟೆಯ ವಿನಾಯಕ ನಗರದಲ್ಲಿ ಗೋ ಹತ್ಯೆಗೆ ಪ್ರಯತ್ನ ನಡೆದಿರುವುದನ್ನು ಖಂಡನೀಯ.ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರ ಸತ್ತುಹೋಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ಕಿಡಿಕಾರಿದರು.
ನಗರದಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿ, ಬೆಂಗಳೂರಿನ ಚಾಮರಾಜಪೇಟೆಯಲ್ಲಿ ನಡೆದ ಗೋವುಗಳ ಕೆಚ್ಚಲು ಕೊಯ್ದ ಘಟನೆ ಅತ್ಯಂತ ಖಂಡನೀಯವಾಗಿದ್ದು, ನಾಗರಿಕ ಸಮಾಜ ತಲೆತಗ್ಗಿಸುವಂತಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಗೋವುಗಳ ಸಂರಕ್ಷಣೆಗಾಗಿ ಗೋ ಹತ್ಯೆ ನಿಷೇಧ ಕಾಯ್ದೆಯನ್ನು ನಮ್ಮ ಸರ್ಕಾರ ಜಾರಿಗೆ ತಂದಿತ್ತು. ಆದರೆ ಪ್ರಸ್ತುತ ರಾಜ್ಯದಲ್ಲಿ ಗೋವುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಗೋವುಗಳ ಕೆಚ್ಚಲನ್ನು ಕೊಯ್ಯುವಂತಹ ನೀಚ ಕೃತ್ಯಕ್ಕೆ ಮುಸ್ಲಿಂ ಕಿಡಿಗೇಡಿಗಳೂ ಇಳಿದಿರುವುದು ಅತ್ಯಂತ ನೋವಿನ ಸಂಗತಿ. ಮುಕ್ಕೋಟಿ ದೇವತೆಗಳು ವಾಸಿಸುವಂತಹ ಗೋಮಾತೆಗೆ ಇಂತಹ ಸ್ಥಿತಿಯನ್ನು ನೀಡುವ ಅವರ ಮಾನಸಿಕತೆ ಎಂತಹದು ಎನ್ನುವುದು ಗೊತ್ತಾಗುತ್ತದೆ ಎಂದರು.
ರಾಜ್ಯದಲ್ಲಿ ೭೦ ಗೋ ಶಾಲೆಗಳನ್ನು ತೆರೆಯಬೇಕೆಂದು ಬಜೆಟ್‌ನಲ್ಲಿ ಮಂಜೂರಾತಿಯನ್ನು ನೀಡಲಾಗಿದೆ. ಆದರೆ ಇದುವರೆಗೂ ಗೋಶಾಲೆಯನ್ನು ತೆರೆಯುವಂತಹ ಕಾರ್ಯಕ್ಕೆ ಮುಂದಾಗಿಲ್ಲ. ಗೋಶಾಲೆಗಳನ್ನು ತೆರೆಯುವ ನಿಟ್ಟಿನಲ್ಲಿ ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.
ಸ್ಬೂಡ ಮಾಜಿ ಅಧ್ಯಕ್ಷ ನಾಗರಾಜ್,ಬಿಜೆಪಿ ನಗರದ ಅಧ್ಯಕ್ಷ ಮೋಹನ್ ರೆಡ್ಡಿ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಇತರರು ಇದ್ದರು.
ಬೆಂಗಳೂರಿನ ಚಾಮರಾಜಪೇಟೆ ವಿನಾಯಕ ನಗರದ ಹಳೇ ಪೆನ್ಷನ್ ಮೊಹಲ್ಲಾದ ರಸ್ತೆಯ ಬದಿ ಶೆಡ್ ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದು ಮಚ್ಚಿನಿಂದ ಕಾಲಿಗೆ ಹೊಡೆದಿರುವುದು ರಾಕ್ಷಸೀಯ, ಅಮಾನವೀಯ ಮತ್ತು ಹೇಯ ಕೃತ್ಯವಾಗಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಖಂಡಿಸಿದ್ದಾರೆ.