ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆಕನ್ನಡಪ್ರಭ ವಾರ್ತೆ ತುಮಕೂರುಬಾಂಗ್ಲಾ ದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ನಿರಂತರ ದೌರ್ಜನ್ಯ, ಹಿಂದೂ ದೇವಾಲಯಗಳ ಧ್ವಂಸದಂತಹ ಕೃತ್ಯಗಳನ್ನು ಖಂಡಿಸಿ ಬುಧವಾರ ನಗರದಲ್ಲಿ ಹಿಂದೂ ಹಿತರಕ್ಷಣಾ ವೇದಿಕೆಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ. ವಿವಿಧ ಮಠಾಧೀಶರು, ಸಂಘಟನೆಗಳ ಮುಖಂಡರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಈ ಹೋರಾಟ ಬೆಂಬಲಿಸಿ ವಿವಿಧ ಮಠಗಳ ಸ್ವಾಮೀಜಿಗಳು, ಸಂಘ ಸಂಸ್ಥೆಗಳ ಮುಖಂಡರು ಮಂಗಳವಾರ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಹೋರಾಟ ಬೆಂಬಲಿಸಿ ಪ್ರತಿಭಟನೆಯಲ್ಲಿ ಭಾಗವಹಿಸುವುದಾಗಿ ಹೇಳಿದರು.ಬೆಟ್ಟದಹಳ್ಳಿ ಗವಿ ಮಠದ ಚಂದ್ರಶೇಖರ ಸ್ವಾಮೀಜಿ ಮಾತನಾಡಿ ಬಾಂಗ್ಲಾದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ಹಿಂಸಾತ್ಮಕ ಕೃತ್ಯಗಳನ್ನು ಖಂಡಿಸುತ್ತೇವೆ ಎಂದರು. ಜಗತ್ತಿನಲ್ಲಿ ಶಾಂತಿ ಸ್ಥಾಪನೆಗೆ ಧರ್ಮಗುರುಗಳು ಸಂದೇಶ ನೀಡಬೇಕು, ಬಾಂಗ್ಲಾದಲ್ಲಿ ಹಿಂಸೆಯ ಕೃತ್ಯದಲ್ಲಿ ಭಾಗವಹಿಸಿದವರ ವಿರುದ್ಧ ಕಠಿಣ ಕ್ರಮ ತೆಗೆದುಕೊಂಡು ಶಾಂತಿ ಕಾಪಾಡಬೇಕು. ಬಾಂಗ್ಲಾ ಸರ್ಕಾರ ಹಿಂದೂಗಳನ್ನು, ಅವರ ಆಸ್ತಿಪಾಸ್ತಿ, ಸ್ವಾತಂತ್ರ್ಯವನ್ನು ರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿದರು.
ಹಿಂದೂ ಹಿತರಕ್ಷಣಾ ವೇದಿಕೆ ನೇತೃತ್ವದಲ್ಲಿ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿಜಿಎಸ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ನಂತರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಪತ್ರ ನೀಡಲಾಗುವುದು. ಹಲವು ಮಠಗಳ ಸ್ವಾಮೀಜಿಗಳು ವಿವಿಧ ಸಮಾಜದ ಮುಖಂಡರು, ಸಂಘಸಂಸ್ಥೆಗಳು ಈ ಹೋರಾಟಕ್ಕೆ ಬೆಂಬಲ ಸೂಚಿಸಿ ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಪ್ರದೀಪ್‌ಕುಮಾರ್ ಹೇಳಿದರು.ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಮಾಜಿ ಸಚಿವ ಸೊಗಡು ಶಿವಣ್ಣ, ನಗರ ವೀರಶೈವ ಸಮಾಜ ಸೇವಾ ಸಮಿತಿ ಅಧ್ಯಕ್ಷ ಟಿ.ಬಿ.ಶೇಖರ್, ಕನ್ನಡ ಸೇನೆ ಜಿಲ್ಲಾಧ್ಯಕ್ಷ ಧನಿಯಾಕುಮಾರ್, ಮುಖಂಡರಾದ ಪಂಚಾಕ್ಷರಯ್ಯ, ನೇತಾಜಿ ಮೋಹನ್‌ಕುಮಾರ್, ಪಚ್ಚೇಶ್ ಅಣೇಕಾರ್, ಕೆ.ಪಿ.ಮಹೇಶ್, ರಾಮಚಂದ್ರರಾವ್, ಶೀತಕಲ್ ಕೃಷ್ಣಯ್ಯ, ಶಬ್ಬೀರ್ ಅಹ್ಮದ್ ಮೊದಲಾದವರು ಭಾಗವಹಿಸಿದ್ದರು.