ರಾಷ್ಟ್ರಧ್ವಜಕ್ಕಾಗುವ ಅಪಮಾನ ತಡೆಯಲು ಹಿಂದೂ ಜನಜಾಗೃತಿ ಸಮಿತಿ ಮನವಿ

KannadaprabhaNewsNetwork |  
Published : Aug 10, 2024, 01:34 AM IST
ಮನವಿ9 | Kannada Prabha

ಸಾರಾಂಶ

ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಮನವಿಯನ್ನು ನೀಡಲಾಯಿತು. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ ಆದ್ದರಿಂದ ಅನೇಕ ದಿನಗಳವರೆಗೆ ಕುರೂಪಗೊಂಡ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ ಎಂದು ಮನವಿಯಲ್ಲಿ ತಿಳಿಸಲಾಯಿತು.

ಕನ್ನಡಪ್ರಭ ವಾರ್ತೆ ಉಡುಪಿ

ಸುಪ್ರೀಂ ಕೋರ್ಟ್ ಆದೇಶದಂತೆ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ನಿಷೇಧಿಸುವಂತೆ ಆಗ್ರಹಿಸಿ ಹಿಂದೂ ಜನಜಾಗೃತಿ ಸಮಿತಿ ವತಿಯಿಂದ ಉಡುಪಿ ಜಿಲ್ಲಾಧಿಕಾರಿಗಳಿಗೆ, ಉಡುಪಿ ನಗರ ಸಭಾ ಆಯುಕ್ತರಿಗೆ, ತಹಸೀಲ್ದಾರರಿಗೆ, ಜಿಲ್ಲಾ ಮತ್ತು ತಾಲೂಕು ಶಿಕ್ಷಣ ಅಧಿಕಾರಿಗಳಿಗೆ ಹಾಗೂ ಅನೇಕ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.ರಾಷ್ಟ್ರಧ್ವಜವು ರಾಷ್ಟ್ರದ ಭಾವೈಕ್ಯದ ಸಂಕೇತವಾಗಿದೆ. ಆ.15 ಮತ್ತು ಜ.26ರಂದು ರಾಷ್ಟ್ರಧ್ವಜವನ್ನು ಹೆಮ್ಮೆಯಿಂದ ಪ್ರದರ್ಶಿಸುತ್ತೇವೆ. ಆದರೆ ಅದೇ ದಿನ ಸಣ್ಣಸಣ್ಣ ಪ್ಲಾಸ್ಟಿಕ್ ರಾಷ್ಟ್ರ ಧ್ವಜಗಳು ಕಸ ಮತ್ತು ಚರಂಡಿಗಳಲ್ಲಿ ಕಾಣಸಿಗುತ್ತವೆ. ಪ್ಲಾಸ್ಟಿಕ್ ಧ್ವಜಗಳು ಬೇಗನೇ ನಾಶವಾಗುವುದಿಲ್ಲ ಆದ್ದರಿಂದ ಅನೇಕ ದಿನಗಳವರೆಗೆ ಕುರೂಪಗೊಂಡ ಈ ರಾಷ್ಟ್ರಧ್ವಜಗಳ ಅವಮಾನವನ್ನು ನೋಡಬೇಕಾಗುತ್ತದೆ. ರಾಜ್ಯ ಸರ್ಕಾರ ಈ ಬಗ್ಗೆ ಸೂಕ್ತ ನಿರ್ದೇಶನ ನೀಡಬೇಕೆಂದು ಜಿಲ್ಲಾಧಿಕಾರಿ ಹಾಗೂ ತಹಸೀಲ್ದಾರರ ಮೂಲಕ ಮನವಿಯನ್ನು ನೀಡಲಾಯಿತು. ವಿದ್ಯಾರ್ಥಿಗಳಿಂದ ರಾಷ್ಟ್ರಧ್ವಜದ ಅಪಮಾನ ಅಥವಾ ಅನಾದರವಾಗುವ ಕೃತ್ಯಗಳು ಆಗದಂತೆ ಶಿಕ್ಷಣ ಅಧಿಕಾರಿಗಳಿಗೆ ಹಾಗೂ ಶಾಲಾ ಕಾಲೇಜುಗಳಿಗೆ ಮನವಿಯನ್ನು ನೀಡಲಾಯಿತು.

ಪ್ಲಾಸ್ಟಿಕ್‌ನಿಂದ ಮಾಡಲಾದ ರಾಷ್ಟ್ರಧ್ವಜದ ಅಪಮಾನ ನಿಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಅದರಂತೆ ಕೇಂದ್ರ ಮತ್ತು ರಾಜ್ಯ ಗೃಹ ಇಲಾಖೆಗಳು ಮತ್ತು ಶಿಕ್ಷಣ ಇಲಾಖೆಗಳು ಸುತ್ತೋಲೆ ಹೊರಡಿಸಿದ್ದವು. ಇದರೊಂದಿಗೆ ಕೇಂದ್ರ ಸರ್ಕಾರ ಪ್ಲಾಸ್ಟಿಕ್ ನಿಷೇಧಿಸಲು ನಿರ್ಧರಿಸಿದೆ. ಅದರ ಪ್ರಕಾರ ಪ್ಲಾಸ್ಟಿಕ್ ರಾಷ್ಟ್ರ ಧ್ವಜ ಮಾರಾಟ ಸಂವಿಧಾನ ಬಾಹಿರವಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿ ಹೇಳಿದೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಮುತ್ತೂಟ್ ಫಿನ್‌ಕಾರ್ಪ್‌ನ ವಡಗಾಂವ ಶಾಖೆಯಲ್ಲಿ ಮಹಿಳಾ ದಿನಾಚರಣೆ
‘ಥ್ಯಾಂಕ್ಸ್‌ ಅಪ್ಪ’ ಕಾದಂಬರಿ ಪ್ರತಿ ಮನೆಯಲ್ಲೂ ಇರಲಿ: ನ್ಯಾ.ಸಂತೋಷ್‌