ಮೂಡಿಗೆರೆಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರ ತಕ್ಷಣ ಹಿಂಪಡೆಯಬೇಕೆಂದು ಹಾಗೂ ಅಕ್ರಮ ಗೋ ಸಾಗಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆ ಮುಖಂಡರು ಸೋಮವಾರ ತಹಸೀಲ್ದಾರ್ ಎಸ್.ಅಶ್ವಿನಿಗೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಮೂಡಿಗೆರೆ
ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಹಿಜಾಬ್‌ಗೆ ಅವಕಾಶ ನೀಡುವ ಹಾಗೂ ಕೇಸರಿ ಶಾಲು ನಿರ್ಬಂಧಿಸುವ ನಿರ್ಧಾರ ತಕ್ಷಣ ಹಿಂಪಡೆಯಬೇಕೆಂದು ಹಾಗೂ ಅಕ್ರಮ ಗೋ ಸಾಗಾಟಕ್ಕೆ ಕಡಿವಾಣ ಹಾಕಬೇಕೆಂದು ಒತ್ತಾಯಿಸಿ ಹಿಂದೂ ಜನಜಾಗೃತಿ ವೇದಿಕೆ ಮುಖಂಡರು ಸೋಮವಾರ ತಹಸೀಲ್ದಾರ್ ಎಸ್.ಅಶ್ವಿನಿಗೆ ಮನವಿ ಸಲ್ಲಿಸಿದರು.ರಾಜ್ಯ ಸರ್ಕಾರ ಶಾಲೆ ಹಾಗೂ ಕಾಲೇಜುಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಿ, ಕೇಸರಿ ಶಾಲು ಧರಿಸುವುದಕ್ಕೆ ನಿರ್ಬಂಧ ವಿಧಿಸಿರುವುದು ರಾಜ್ಯದ ಶಿಕ್ಷಣ ಕ್ಷೇತ್ರದಲ್ಲಿ ಗಂಭೀರ ಚರ್ಚೆಗೆ ಕಾರಣವಾಗಿದೆ. ಈ ನಿರ್ಧಾರ ಸಮಾನತೆ, ಧರ್ಮ ನಿರಪೇಕ್ಷತೆ ಹಾಗೂ ಏಕರೂಪದ ಸಮವಸ್ತ್ರ ನೀತಿಗೆ ವಿರುದ್ಧ. 2022ರಲ್ಲಿ ಉಡುಪಿಯಲ್ಲಿ ಆರಂಭವಾದ ಹಿಜಾಬ್ ವಿವಾದವು ರಾಜ್ಯದಾದ್ಯಂತ ಉದ್ವಿಗ್ನ ಪರಿಸ್ಥಿತಿಯನ್ನು ನಿರ್ಮಿಸಿತ್ತು ಈ ಪ್ರಕರಣದ ಕುರಿತು ನ್ಯಾಯಾಲಯ ಶಾಲೆ-ಕಾಲೇಜುಗಳಲ್ಲಿ ನಿಗದಿತ ಸಮವಸ್ತ್ರವನ್ನು ಪಾಲಿಸಬೇಕೆಂದು ಸೂಚಿಸಿತ್ತು. ಹಿಜಾಬ್ ಪ್ರಕರಣ ಸುಪ್ರಿಂ ಕೋರ್ಟ್ನಲ್ಲಿ ಬಾಕಿಯಿದೆ. ಆದರೂ ಸರಕಾರ ಹಿಜಾಬ್‌ಗೆ ಅವಕಾಶ ನೀಡಿ, ಕಾನೂನು ಉಲ್ಲಂಘಿಸಿದೆ.
ಹಿಜಾಬ್‌ಗೆ ಅವಕಾಶ ನೀಡಿದರೆ ಇತರೆ ಸಮುದಾಯದ ವಿದ್ಯಾರ್ಥಿಗಳು ಸಹ ತಮ್ಮ ಧಾರ್ಮಿಕ ಚಿಹ್ನೆ ಪ್ರದರ್ಶಿಸುವ ಸಾಧ್ಯತೆ ಇರುತ್ತದೆ. ಇದರಿಂದ ಶಿಕ್ಷಣದ ಮಹತ್ವ ಕಳೆದುಕೊಳ್ಳುತ್ತದೆ. ಹಾಗಾಗಿ ಹಿಜಾಬ್‌ಗೆ ಅವಕಾಶ ನೀಡಬಾರದು. ಅಲ್ಲದೇ ಗೋ ಕಳ್ಳತನ, ಗೋಮಾಂಸ ಮಾರಾಟ ಹೆಚ್ಚುತ್ತಿದೆ. ಇದಕ್ಕೂ ಕೂಡ ಅಡಿವಾಣ ಹಾಕಬೇಕೆಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.