ಕನ್ನಡಪ್ರಭ ವಾರ್ತೆ, ತುಮಕೂರುನಗರದ ಭದ್ರಮ್ಮ ವೃತ್ತದ ಬಳಿಯ ಸೋಮೇಕಟ್ಟೆ ಮಠದ ಆವರಣದಲ್ಲಿ ಪ್ರತಿಷ್ಠಾಪಿಸಿರುವ ವಿಶ್ವ ಹಿಂದೂ ಪರಿಷತ್, ಬಜರಂಗದಳದ 8 ವರ್ಷದ ತುಮಕೂರು ಹಿಂದೂ ಮಹಾ ಗಣಪತಿ ವಿಸರ್ಜನಾ ಮಹೋತ್ಸವ ನಾಳೆ ಶುಕ್ರವಾರ ನಡೆಯಲಿದೆ ಎಂದು ಹಿಂದೂ ಮಹಾ ಗಣಪತಿ ಸ್ವಾಗತ ಸಮಿತಿ ಗೌರವಾಧ್ಯಕ್ಷ ವೈ.ಎಚ್.ಹುಚ್ಚಯ್ಯ ತಿಳಿಸಿದರು.
ಅಂದು ಬೆಳಿಗ್ಗೆ 11 ಗಂಟೆಗೆ ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ ಉತ್ಸವಕ್ಕೆ ಚಾಲನೆ ನೀಡುವರು. ಹಿರೇಮಠದ ಡಾ.ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಸಿದ್ಧರಬೆಟ್ಟ ಮಠದ ವೀರಭದ್ರ ಶಿವಾಚಾರ್ಯ ಸ್ವಾಮೀಜಿ, ಬೆಳ್ಳಾವಿ ಕಾರದ ಮಠದಕಾರದ ವೀರಬಸವ ಸ್ವಾಮೀಜಿ, ರಾಮಕೃಷ್ಣ ವಿವೇಕಾನಂದ ಆಶ್ರಮದ ವೀರೇಶಾನಂದ ಸರಸ್ವತಿ ಸ್ವಾಮೀಜಿ, ರೇವಣ್ಣಸಿದ್ಧೇಶ್ವರ ಮಠದ ಬಿಂದುಶೇಖರ ಸ್ವಾಮೀಜಿ, ಸರಪಳಿ ಮಠದಜ್ಞಾನಾನಂದಪುರಿ ಸ್ವಾಮೀಜಿ, ರಾಮೇನಹಳ್ಳಿ ಮಠದ ಶಿವಪಂಚಾಕ್ಷರಿ ಸ್ವಾಮೀಜಿ, ಹೆಬ್ಬೂರುಕಾಮಾಕ್ಷಿ ಶಾರದಾ ಪೀಠದ ಸತ್ಯನಾರಾಯಣ ಪುರೋಹಿತರು ಮೊದಲಾದವರು ಹಾಜರಿರುವರುಎಂದು ಹೇಳಿದರು.ಹಿಂದೂಗಳ ಧಾರ್ಮಿಕ ಪರಂಪರೆಯಲ್ಲಿ ಗಣಪತಿ ಪೂಜೆ, ಮಹೋತ್ಸವ ವಿಶ್ವದಾದ್ಯಂತ ಪ್ರಸಿದ್ಧವಾಗಿದೆ. ಗಣೇಶಚತುರ್ಥಿ ಸಂದರ್ಭದಲ್ಲಿ ಮನೆಗಳಲ್ಲಿ, ಸಾರ್ವಜನಿಕವಾಗಿ ಗಣಪತಿ ಪ್ರತಿಷ್ಠಾಪನೆ ಮಾಡಿ ಪೂಜಿಸಿ ಭಕ್ತಿ, ಸಂಭ್ರಮ ಪಡುವ ಕಾರ್ಯಕ್ರಮಗಳು ಎಲ್ಲೆಡೆ ಕಾಣುತ್ತೇವೆ. ಈ ಗಣಪತಿ ಪ್ರತಿಷ್ಠಾಪನೆ ಮಾಡಿ ಪ್ರತಿದಿನ ವಿವಿಧ ವಿಶೇಷ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಹಬ್ಬದಂತೆಆಚರಿಸಲಾಗುತ್ತಿದೆಎಂದು ವೈ.ಹೆಚ್.ಎಚ್ಚಯ್ಯ ಹೇಳಿದರು.ಉತ್ಸವ ಸಮಿತಿ ಅಧ್ಯಕ್ಷ ಕೋರಿ ಮಂಜುನಾಥ್ ಮಾತನಾಡಿ, ವಿಶ್ವ ಹಿಂದೂ ಪರಿಷತ್, ಬಜರಂಗದಳ ನೇತೃತ್ವದ ಹಿಂದೂ ಮಹಾ ಗಣಪತಿ ಪ್ರತಿಷ್ಠಾಪಿಸಿ ಪ್ರತಿದಿನ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ಸಾಂಗೋಪಾಂಗವಾಗಿ ನಡೆದಿವೆ. ಅಷ್ಟೂ ದಿನಗಳಲ್ಲಿ ಲಕ್ಷಾಂತರ ಭಕ್ತರು ಗಣಪತಿ ದರ್ಶನ ಮಾಡಿ ಪೂಜಾ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡು ಸಂಭ್ರಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದ್ದಾರೆ ಎಂದು ತಿಳಿಸಿದರು.ಇದೇ ಶುಕ್ರವಾರ ಹಿಂದೂ ಮಹಾ ಗಣಪತಿಯ ವೈಭವದ ವಿಸರ್ಜನಾ ಮಹೋತ್ಸವ ನಡೆಯಲಿದ್ದು ನಂದಿಧ್ವಜ, ವೀರಗಾಸೆ, ಡಂಕವಾದ್ಯ, ತಮಟೆ ವಾದ್ಯ, ನಾಸಿಕ್ ಡೋಲು ಮತ್ತಿತರ ಜನಪದ ಕಲಾ ತಂಡಗಳ ಪ್ರದರ್ಶನವಿರುತ್ತದೆ. ಸಂಜೆಕೋಟೆಆಂಜನೇಯಸ್ವಾಮಿ ವೃತ್ತದಲ್ಲಿ ಸಂಜೆ ಆಕರ್ಷಕ ಸಿಡಿಮದ್ದಿನ ವಿನೋದಾವಳಿ ವ್ಯವಸ್ಥೆ ಮಾಡಲಾಗಿದೆ. ನಂತರ ಕೆ.ಎನ್.ಎಸ್. ಕಲ್ಯಾಣಿಯಲ್ಲಿ ಗಣಪತಿ ಮೂರ್ತಿಯನ್ನು ವಿಸರ್ಜನೆ ಮಾಡಲಾಗುವುದು ಎಂದು ತಿಳಿಸಿದರು.ಸಮಿತಿಯ ಪದಾಧಿಕಾರಿಗಳಾದ ಮಹೇಂದ್ರ ವೈಷ್ಣವ್, ಕೆ.ಜೆ.ರುದ್ರಪ್ಪ, ವಿಹೆಚ್‌ಪಿ ಜಿಲ್ಲಾಧ್ಯಕ್ಷ ಪ್ರದೀಪ್, ಜಿ.ಕೆ.ಶ್ರೀನಿವಾಸ್, ಸ್ವಚ್ಛ ಮಂಜುನಾಥ್ ಭಾಗವಹಿಸಿದ್ದರು.