ನಾಳೆ ರಟ್ಟಿಹಳ್ಳಿಯಲ್ಲಿ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಕಾರ್ಯಕ್ರಮ

KannadaprabhaNewsNetwork |  
Published : Sep 30, 2026, 02:15 AM IST
ರಟ್ಟೀಹಳ್ಳಿ ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್ ನಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ಸ್ಥಳದಲ್ಲಿ ಪೂರ್ವಭಾವಿ ಸಭೆ ನಡೆಸಿದ ಹಿಂದೂ ಸಮಾಜದ ಮುಖಂಡರು. | Kannada Prabha

ಸಾರಾಂಶ

ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ಅ.1 ರಂದು ಸಂಜೆ 5-30ರಿಂದ ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ಭಾಗವಹಿಸಲಿದ್ದಾರೆಂದು ಹಿಂದೂ ಮುಖಂಡ ಸುನೀಲ ಸರಶೆಟ್ಟರ್ ಹೇಳಿದರು.

ರಟ್ಟಿಹಳ್ಳಿ: ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಕಾರ್ಯಕ್ರಮದ ಅಂಗವಾಗಿ ಅ.1 ರಂದು ಸಂಜೆ 5-30ರಿಂದ ಬೃಹತ್ ಶೋಭಾಯಾತ್ರೆಯನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ಶಿವಮೊಗ್ಗ ಸಂಸದ ಬಿ.ವೈ.ರಾಘವೇಂದ್ರ, ಮಾಜಿ ಸಚಿವ ಬಿ.ಸಿ.ಪಾಟೀಲ್ ಅವರು ಭಾಗವಹಿಸಲಿದ್ದಾರೆಂದು ಹಿಂದೂ ಮುಖಂಡ ಸುನೀಲ ಸರಶೆಟ್ಟರ್ ಹೇಳಿದರು.ಪಟ್ಟಣದ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಲ್ಲಿ ಪ್ರತಿಷ್ಠಾಪಿಸಿರುವ ಹಿಂದೂ ಮಹಾಸಭಾ ಗಣಪತಿ ಸ್ಥಳದಲ್ಲಿ ಪೂರ್ವಭಾವಿ ಸಭೆ ನಡೆಸಿದ ಮುಖಂಡರು ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಗಣಪತಿ ವಿಸರ್ಜನಾ ಕಾರ್ಯಕ್ರಮದ ಅಂಗವಾಗಿ ಮಧ್ಯಾಹ್ನ 1ರಿಂದ ಅನ್ನ ಸಂತರ್ಪಣೆ ಕಾರ್ಯಕ್ರಮ ಹಾಗೂ ರಕ್ತದಾನ ಶಿಬಿರ ನಡೆಯಲಿದೆ.ಸಂಜೆ 5-30ರಿಂದ ಬೃಹತ್ ಮೆರವಣಿಗೆ: ಗಣೇಶನ ವಿಸರ್ಜನೆ ಕಾರ್ಯಕ್ರಮದ ಮೆರವಣಿಗೆ ಸಂಜೆ 5-30ಕ್ಕೆ ಪ್ರಾರಂಭವಾಗಲಿದೆ. ಮೆರವಣಿಗೆಯಲ್ಲಿ ವಿವಿಧ ಕಲಾ ತಂಡಗಳು, ನಾಸಿಕ್ ಡೋಲ್, ವಿವಿಧ ವಾದ್ಯ ಮೇಳಗಳು, ಮತ್ತು ವಿಶೇಷವಾಗಿ ಡಿ.ಜೆ. ವ್ಯವಸ್ಥೆಯೊಂದಿಗೆ ಬೃಹತ್ ಶೋಭಾಯಾತ್ರೆ ನಡೆಯಲಿದೆ. ಈ ಶೋಭಾಯಾತ್ರೆಯು ರಟ್ಟಿಹಳ್ಳಿಯ ಪ್ರಮುಖ ರಾಜಬೀದಿಗಳಲ್ಲಿ ಸಂಚರಿಸಿ ಕುಮದ್ವತಿ ನದಿಯಲ್ಲಿ ಗಣೇಶ ವಿಸರ್ಜನೆಯೊಂದಿಗೆ ಸಂಪನ್ನಗೊಳ್ಳಲಿದೆ. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ಲೋಕಸಭಾ ಸಂಸದರಾದ ಬಿ.ವೈ. ರಾಘವೇಂದ್ರ, ಮಾಜಿ ಕೃಷಿ ಸಚಿವ ಬಿ.ಸಿ. ಪಾಟೀಲ್, ಪಟ್ಟಣ ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ್ ಆಡಿನವರ ಸೇರಿದಂತೆ ಅನೇಕ ಮುಖಂಡರು ಆಗಮಿಸಲಿದ್ದಾರೆ. ಆದ್ದರಿಂದ ಸಮಸ್ತ ಹಿಂದೂ ಬಾಂಧವರು, ಗಣೇಶ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಮನವಿ ಮಾಡಿದರು.ಪತ್ರಿಕಾಗೋಷ್ಠಿಯಲ್ಲಿ ಹಿಂದೂ ಮಹಾಗಣಪತಿ ಮಂಡಳಿಯ ಅಧ್ಯಕ್ಷ ಮಂಜುನಾಥ್ ಅಗರಗಟ್ಟಿ, ಶ್ರೀರಾಮ್ ಸೇನೆ ತಾಲೂಕು ಅಧ್ಯಕ್ಷ ರಾಮು ದೇವರಮನೆ, ಪ.ಪಂ.ಸ್ಥಾಯಿ ಸಮಿತಿ ಅಧ್ಯಕ್ಷ ಬಸವರಾಜ ಆಡಿನವರ, ಸುನೀಲ ಸರಶೆಟ್ಟರ್, ಹಾಲನಗೌಡ ಪ್ಯಾಟಿಗೌಡ್ರ, ಶಶಿ ಪಾಟೀಲ, ಅರುಣ ಬೈರೋಜಿ, ಭರತ್ ಬೈರೋಜಿ, ವಿಕಾಶ ಹಲಗೇರಿ, ರಾಜಗುರು ಪೂಜಾರ, ಷಣ್ಮುಖ ಮಳಗೊಂಡರ, ಮಂಜು ಮಳಗೊಂಡರ ಸೇರಿದಂತೆ ಹಲವು ಮುಖಂಡರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಧಾರ್ಮಿಕತೆ ಜತೆಗೆ ಶಿಕ್ಷಣಕ್ಕೂ ಆದ್ಯತೆ ನೀಡಿ: ಸಚಿವ ಕೆ.ಎಸ್. ಬಸವಂತಪ್ಪ
ಮಾಜಿ ಸಂಸದ ಮಂಜುನಾಥ ಕುನ್ನೂರಗೆ ಕನ್ನಡದ ಕಟ್ಟಾಳು ಬಿರುದು ಪ್ರದಾನ