ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ ಸಂಪನ್ನ

KannadaprabhaNewsNetwork |  
Published : Sep 23, 2026, 03:45 AM IST
ಭದ್ರಾವತಿ ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 54ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಕಾರ್ಯ ಮಂಗಳವಾರ ನಡೆದಿದ್ದು, ಈ ಸಂಬಂಧ ಆಯೋಜಿಸಲಾಗಿದ್ದ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಗಮನ ಸೆಳೆದ ವೀರಗಾಸೆ ನೃತ್ಯ.  | Kannada Prabha

ಸಾರಾಂಶ

Hindu Mahasabha Ganapati Visarjan Sampanna

ಭದ್ರಾವತಿ: ಹೊಸಮನೆ ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ಪ್ರತಿಷ್ಠಾಪಿಸಲಾಗಿರುವ 54ನೇ ವರ್ಷದ ವಿನಾಯಕ ಮೂರ್ತಿ ವಿಸರ್ಜನೆ ಕಾರ್ಯ ಮಂಗಳವಾರ ನಡೆದಿದ್ದು, ಈ ಸಂಬಂಧ ಆಯೋಜಿಸಿದ್ದ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆಯಲ್ಲಿ ಈ ಸಹ ಸಹಸ್ರಾರು ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡಿದ್ದರು.

9 ದಿನಗಳ ಪ್ರತಿಷ್ಠಾಪನೆ ನಂತರ ವಿಸರ್ಜನಾ ಕಾರ್ಯ ನಡೆದಿದ್ದು, ಸಂಸದ ಬಿ.ವೈ ರಾಘವೇಂದ್ರ, ಕರ್ನಾಟಕ ಸಹಕಾರ ಮಹಾಮಂಡಳ ಉಪಾಧ್ಯಕ್ಷ ಬಿ.ಕೆ ಶಿವಕುಮಾರ್, ಹಿಂದೂ ಮಹಾಸಭಾ-ಹಿಂದೂ ರಾಷ್ಟ್ರ ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಸೇರಿದಂತೆ ಇನ್ನಿತರ ಗಣ್ಯರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಮಧ್ಯಾಹ್ನ ಸುಮಾರು 12ರ ವೇಳೆಗೆ ಉತ್ಸವ ಮೆರವಣಿಗೆಗೆ ಚಾಲನೆ ನೀಡಿದರು. ಸಂಜೆ 6ರ ವೇಳೆಗೆ ಬಹುತೇಕ ಯಶಸ್ವಿಯಾಗಿ ಮೆರವಣಿಗೆ ಸಾಗಿತು.

ಈ ಬಾರಿ ಸಹ ವಿವಿಧ ಸಂಘಟನೆಗಳು, ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ಮಹಿಳಾ ಸಂಘಟನೆಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಮಹಿಳೆಯರು, ವಿದ್ಯಾರ್ಥಿಗಳು, ರೈತರು, ಕಾರ್ಮಿಕರು ಸೇರಿದಂತೆ ಸಹಸ್ರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು.

ಗೊಂಬೆ ನೃತ್ಯ, ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ವಿವಿಧ ಕಲಾತಂಡಗಳು ಮೆರವಣಿಗೆಗೆ ಮತ್ತಷ್ಟು ಮೆರಗು ನೀಡಿದವು. ಅಲ್ಲದೆ ಮೆರವಣಿಗೆಯುದ್ದಕ್ಕೂ ಸೇವಾಕರ್ತರಿಂದ ಮಜ್ಜಿಗೆ, ಪಾನಕ, ಅನ್ನಸಂತರ್ಪಣೆ ಸೇವಾಕಾರ್ಯಗಳು ನಡೆದವು. ಕ್ಷೇತ್ರದ ವಿವಿಧೆಡೆಗಳಿಂದ ಸಹಸ್ರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದು ಕಂಡು ಬಂದಿತು.

ಅಲ್ಲಲ್ಲಿ ವಿವಿಧ ಹಿಂದೂಪರ ಸಂಘಟನೆಗಳಿಂದ ಹಾಗು ಅಂಗಡಿ-ಮುಂಗಟ್ಟುಗಳ ವ್ಯಾಪಾರಸ್ಥರು ಬಗೆ ಬಗೆಯ ಹಾರಗಳನ್ನು ಸಮರ್ಪಿಸಿ ಭಕ್ತಿ ಮೆರೆದರು.

ಪೊಲೀಸ್ ಇಲಾಖೆ ಈ ಬಾರಿ ಸಹ ಮುನ್ನಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತೆ ಕೈಗೊಂಡಿತ್ತು. ಆಯಾ ಕಟ್ಟಿನ ಸೂಕ್ಷ್ಮ ಸ್ಥಳಗಳಲ್ಲಿ ಹೆಚ್ಚಿನ ಸಿಬ್ಬಂದಿಗಳನ್ನು ನಿಯೋಜಿಸಿತ್ತು. ಮೆರವಣಿಗೆ ಮೇಲೆ ನಿಗಾವಹಿಸಲು ಸಿಸಿ ಕ್ಯಾಮೆರಾಗಳ ಅಳವಡಿಕೆ, ಡ್ರೋನ್‌ಗಳನ್ನು ಬಳಸಿಕೊಂಡಿತ್ತು.

ರಾಜಬೀದಿ ಉತ್ಸವ ಮೆರವಣಿಗೆ ಮೊದಲು ಹೊಸಮನೆ ಮುಖ್ಯ ರಸ್ತೆ ಮೂಲಕ ಶಿವಾಜಿ ವೃತ್ತ ತಲುಪಿ, ಪುನಃ ಹಿಂದಿರುಗಿ ರಂಗಪ್ಪ ವೃತ್ತ, ಮಾಧವಚಾರ್ ವೃತ್ತ, ಹಾಲಪ್ಪ ವೃತ್ತ, ಅಂಬೇಡ್ಕರ್ ವೃತ್ತ ಮೂಲಕ ಹುತ್ತಾಕಾಲೋನಿ ಶ್ರೀ ತಿರುಮಲ ದೇವಸ್ಥಾನದವರೆಗೆ ತಲುಪಿ ಪುನಃ ಹಿಂದಿರುಗಿ ನಗರಸಭೆ ಮುಂಭಾಗದ ಮೂಲಕ ಮಹಾತ್ಮಗಾಂಧಿ ವೃತ್ತ ತಲುಪಿ ಪುನಃ ಹಿಂದಿರುಗಿ ನಗರಸಭೆ ಮುಂಭಾಗ ಭದ್ರಾ ನದಿಯಲ್ಲಿ ವಿಸರ್ಜನೆಗೊಳ್ಳಲಿದೆ. ಮೆರವಣಿಗೆ ಸಂಜೆ 5.30ರ ವೇಳೆಗೆ ಹಾಲಪ್ಪ ವೃತ್ತ ತಲುಪಿತ್ತು. ಬಾಕ್ಸ್:

ಫ್ಲೆಕ್ಸ್ ಹರಿದು ಕಿಡಿಗೇಡಿ ಕೃತ್ಯ

ನಗರದ ಕೆಲವೆಡೆ ಹಿಂದೂ ಮಹಾಸಭಾ ಗಣಪತಿಯ ವಿಸರ್ಜನಾ ಮೆರವಣಿಗೆಗೆ ಶುಭಾಶಯ ಕೋರಿ ಅಳವಡಿಸಲಾಗಿದ್ದ ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವ ಘಟನೆ ನಡೆದಿದೆ.

ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಶಾರದ ಅಪ್ಪಾಜಿ ಹಾಗೂ ಬಿಜೆಪಿ ಮುಖಂಡ ಮಂಗೋಟೆ ರುದ್ರೇಶ್ ಅವರ ಫ್ಲೆಕ್ಸ್‌ಗಳನ್ನು ಮಾತ್ರ ಕಿಡಿಗೇಡಿಗಳು ಹರಿದು ಹಾಕಿದ್ದು, ಈ ಹಿನ್ನೆಲೆ ಬಿಜೆಪಿ ಮತ್ತು ಜೆಡಿಎಸ್ ನಾಯಕರು ಕೃತ್ಯವನ್ನು ತೀವ್ರವಾಗಿ ಖಂಡಿಸಿದ್ದಾರೆ. ಕೆಎಸ್‌ಆರ್‌ಟಿಸಿ ಮುಖ್ಯ ಬಸ್ ನಿಲ್ದಾಣ, ಮಹಾತ್ಮಗಾಂಧಿ ರಸ್ತೆ, ಚನ್ನಗಿರಿ ರಸ್ತೆಗಳಲ್ಲಿ ಅಳವಡಿಸಲಾಗಿದ್ದ ಫ್ಲೆಕ್ಸ್ ಗಳನ್ನು ಹರಿದು ಹಾಕಲಾಗಿದೆ ಎನ್ನಲಾಗಿದೆ. ಈ ನಡುವೆ ಪೊಲೀಸ್ ಮಧ್ಯ ಪ್ರವೇಶಿಸಿ ಎರಡು ಪಕ್ಷಗಳ ಮುಖಂಡರಲ್ಲಿ ಶಾಂತಿ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಡಿ22-ಬಿಡಿವಿಟಿ

ಭದ್ರಾವತಿಯಲ್ಲಿ ಆಯೋಜಿಸಿದ್ದ ವಿಸರ್ಜನಾ ಪೂರ್ವ ರಾಜಬೀದಿ ಉತ್ಸವ ಮೆರವಣಿಗೆಗೆ ಸಂಸದ ಬಿ.ವೈ ರಾಘವೇಂದ್ರ, ಕರ್ನಾಟಕ ಸಹಕಾರ ಮಹಾಮಂಡಳ ಉಪಾಧ್ಯಕ್ಷ ಬಿ.ಕೆ ಶಿವಕುಮಾರ್, ಹಿಂದೂ ಮಹಾಸಭಾ-ಹಿಂದೂ ರಾಷ್ಟç ಸೇನಾ ಶ್ರೀ ವಿನಾಯಕ ಸೇವಾ ಸಮಿತಿ ಅಧ್ಯಕ್ಷ ವಿ. ಕದಿರೇಶ್ ಸೇರಿದಂತೆ ಇನ್ನಿತರ ಗಣ್ಯರು ವಿಶೇಷ ಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು. ಡಿ22-ಬಿಡಿವಿಟಿ(ಬಿ)

ಫ್ಲೆಕ್ಸ್‌ಗಳನ್ನು ಕಿಡಿಗೇಡಿಗಳು ಹರಿದು ಹಾಕಿರುವುದು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಎಡದಂಡೆ ಕಾಲುವೆಗೆ ನೀರು ಹರಿಸಲು ಆಗ್ರಹ
ತಾಲೂಕಲ್ಲಿ ಉದ್ಯೋಗ ಸೃಷ್ಟಿಸಿ ತೋರಿಸಲಿ