ಹಿಂದೂ ಮಲಯಾಳಿ ಸಮಾಜ ವಾರ್ಷಿಕ ಮಹಾಸಭೆ ನಾಳೆ: ಸಾಧಕರಿಗೆ ಸನ್ಮಾನ

KannadaprabhaNewsNetwork |  
Published : Jul 06, 2024, 12:45 AM IST
ಸುದ್ದಿಗೋಷ್ಠಿ | Kannada Prabha

ಸಾರಾಂಶ

ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕ‌ರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಹಾಗೂ ನೂತನ ಸಂಸದರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.

ಕನ್ನಡಪ್ರಭ ವಾರ್ತೆ ಮಡಿಕೇರಿ

ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿ ವತಿಯಿಂದ ಭಾನುವಾರ ನಗರದ ಅಂಬೇಡ್ಕ‌ರ್ ಭವನದಲ್ಲಿ ವಾರ್ಷಿಕ ಮಹಾಸಭೆ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ.

ನಗರದ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಸಮಿತಿಯ ಅಧ್ಯಕ್ಷ ವಿ.ಎಂ.ವಿಜಯ, ಹಿಂದೂ ಮಲಯಾಳಿ ಸಮಾಜದಿಂದ 2022-23 ಮತ್ತು 2023-24 ನೇ ಸಾಲಿಗೆ ಸಂಬಂಧಿಸಿದಂತೆ ಜಿಲ್ಲಾ ವ್ಯಾಪ್ತಿಯ ಹಿಂದೂ ಮಲಯಾಳಿ ಸಮಾಜದ 9 ಘಟಕಗಳಿಂದ ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿಯಲ್ಲಿ ಅತ್ಯಧಿಕ ಅಂಕ ಗಳಿಸಿದ ತಲಾ ನಾಲ್ವರು ವಿದ್ಯಾರ್ಥಿಗಳಂತೆ ಒಟ್ಟು 36 ವಿದ್ಯಾರ್ಥಿಗಳನ್ನು ಪ್ರೋತ್ಸಾಹ ಧನ ನೀಡಿ ಪುರಸ್ಕರಿಸಲಾಗುತ್ತದೆಂದು ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದವರು ಮತ್ತು ಉನ್ನತ ವ್ಯಾಸಂಗ ಮಾಡಿದ ಸುಮಾರು 40 ಮಂದಿಯನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ.

ನೂತನ ಸಂಸದರಿಗೆ ಸನ್ಮಾನ:

ಸನ್ಮಾನ ಕಾರ್ಯಕ್ರಮವನ್ನು ಬೆಳಗ್ಗೆ 10.30ಕ್ಕೆ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಲಿದ್ದಾರೆ. ಇದೇ ಸಂದರ್ಭ ಮೈಸೂರು-ಕೊಡಗು ಕ್ಷೇತ್ರದ ನೂತನ ಸಂಸದ ಯದುವೀ‌ರ್ ಕೃಷ್ಣದತ್ತ ಚಾಮರಾಜ ಒಡೆಯ‌ರ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತದೆ ಎಂದರು.

ವಿರಾಜಪೇಟೆ ಕ್ಷೇತ್ರದ ಶಾಸಕ ಎ.ಎಸ್. ಪೊನ್ನಣ್ಣ, ಎಂಎಲ್‌ಸಿ ಎಂ.ಪಿ.ಸುಜಾ ಕುಶಾಲಪ್ಪ, ಮಾಜಿ ಶಾಸಕರಾದ ಕೆ.ಜಿ.ಬೋಪಯ್ಯ, ಎಂ,ಪಿ.ಅಪ್ಪಚ್ಚು ರಂಜನ್‌ ಸೇರಿದಂತೆ ಹಲವು ಗಣ್ಯರು ಪಾಲ್ಗೊಳ್ಳಲಿದ್ದಾರೆ. ಅಂದು ಮಧ್ಯಾಹ್ನ 3 ಗಂಟೆಗೆ ಹಿಂದೂ ಮಲಯಾಳಿ ಸಮಾಜದ ಕೊಡಗು ಜಿಲ್ಲಾ ಸಮಿತಿಯ ಮಹಾಸಭೆ ನಡೆಯಲಿದೆ. ಇದರಲ್ಲಿ ಸಮಿತಿಯ ನೂತನ ಆಡಳಿತ ಮಂಡಳಿಯ ರಚನೆಯಾಗಲಿದೆ ಎಂದರು.

ಹಿಂದೂ ಮಲಯಾಳಿ ಸಮಾಜದ ಸ್ಥಾಪಕಾಧ್ಯಕ್ಷ ಕೆ.ಎಸ್.ರಮೇಶ್‌, ಕೊಡಗು ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಟಿ.ಕೆ.ಸುಧೀ‌ರ್, ಖಜಾಂಚಿ ಕೆ.ಬಾಬು, ಮುಖ್ಯ ಸಲಹೆಗಾರ ಟಿ.ಆರ್.ವಾಸುದೇವ ಸುದ್ದಿಗೋಷ್ಠಿಯಲ್ಲಿದ್ದರು.

PREV

Recommended Stories

ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ