೯ರಂದು ಹಿಂದೂ ಸಮಾಜೋತ್ಸವ

KannadaprabhaNewsNetwork |  
Published : Feb 08, 2026, 01:30 AM IST
ಫೆಬ್ರುವರಿ ೯ರಂದು ಸೋಮವಾರ ಹಿಂದೂ ಸಮಾಜೋತ್ಸವ : ಲೋಕೇಶ್ವರ | Kannada Prabha

ಸಾರಾಂಶ

ಹಿಂದುಗಳಲ್ಲಿ ಜಾಗೃತಿ ಮೂಡಿಸಲು ಎಂಟು ಭಾಗಗಳಲ್ಲಿ ಹಿಂದೂ ಸಮಾಜೋತ್ಸವವನ್ನು ಮಾಡಲಾಗುತ್ತಿದ್ದು, ಫೆಬ್ರುವರಿ ೯ರಂದು ಸೋಮವಾರ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ಶ್ರೀ ವಿವೇಕಾನಂದ ವಸತಿ ವತಿಯಿಂದ ನಗರದಲ್ಲಿ ಹಿಂದೂ ಸಮಾಜೋತ್ಸವ ಏರ್ಪಡಿಸಲಾಗಿದೆ ಎಂದು ಮುಖಂಡರಾದ ಲೋಕೇಶ್ವರ ಹೇಳಿದರು.

ಕನ್ನಡಪ್ರಭ ವಾರ್ತೆ ತಿಪಟೂರು

ಹಿಂದುಗಳಲ್ಲಿ ಜಾಗೃತಿ ಮೂಡಿಸಲು ಎಂಟು ಭಾಗಗಳಲ್ಲಿ ಹಿಂದೂ ಸಮಾಜೋತ್ಸವವನ್ನು ಮಾಡಲಾಗುತ್ತಿದ್ದು, ಫೆಬ್ರುವರಿ ೯ರಂದು ಸೋಮವಾರ ಹಿಂದೂ ಸಮಾಜೋತ್ಸವ ಸಮಿತಿ ಹಾಗೂ ಶ್ರೀ ವಿವೇಕಾನಂದ ವಸತಿ ವತಿಯಿಂದ ನಗರದಲ್ಲಿ ಹಿಂದೂ ಸಮಾಜೋತ್ಸವ ಏರ್ಪಡಿಸಲಾಗಿದೆ ಎಂದು ಮುಖಂಡರಾದ ಲೋಕೇಶ್ವರ ಹೇಳಿದರು.

ನಗರದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಫೆಬ್ರವರಿ ೯ರಂದು ಸೋಮವಾರ ಸಂಜೆ ೪.೩೦ಕ್ಕೆ ನಗರದ ಗ್ರಾಮ ದೇವತೆ ಶ್ರೀ ಕೆಂಪಮ್ಮ ದೇವಿ ದೇವಸ್ಥಾನದಿಂದ ಶೋಭ ಯಾತ್ರೆ ಆರಂಭವಾಗಲಿದೆ. ಶ್ರೀ ಕೆಂಪಮ್ಮ ದೇವಿ ದೇವಾಲಯದ ಆವರಣದಲ್ಲಿ ವೇದಿಕೆ ಕಾರ್ಯಕ್ರಮ ಸಂಜೆ ೬ ಗಂಟೆಗೆ ಪ್ರಾರಂಭವಾಗಲಿದೆ. ಸಂಜೆ ವೇದಿಕೆ ಕಾರ್ಯಕ್ರಮದಲ್ಲಿ ಕೆರೆಗೋಡಿ-ರಂಗಾಪುರ, ಸಿಡ್ಲೆಹಳ್ಳಿ ಶ್ರೀ ಗುರುಕುಲಾನಂದಾಶ್ರಮದ ಶ್ರೀಗಳು ಸಾನಿಧ್ಯ ವಹಿಸಲಿದ್ದಾರೆ. ವಿದ್ಯಾರ್ಥಿ ಪರಿಷತ್ ಮುಖಂಡರಾದ ಮಾಚೇನಹಳ್ಳಿ ಪೃಥ್ವಿ ಕುಮಾರ್, ಲಕ್ಷ್ಮೀ ಸತ್ಯನಾರಾಯಣರವರು ಸಮಾಜೋತ್ಸವದಲ್ಲಿ ಭಾಷಣ ಮಾಡಲಿದ್ದಾರೆ. ಕಾರ್ಯಕ್ರಮದ ನಿರೂಪಣೆ ಓಹಿಲಾ ಗಂಗಾಧರ್, ಸಿರಿಗಂಧ ಗುರು ಮಾಡಲಿದ್ದು, ಸಾಂಸ್ಕೃತಿಕ ಚಟುವಟಿಕೆ, ದೇಶಭಕ್ತಿ ಗೀತೆ ಕಾರ್ಯಕ್ರಮದಲ್ಲಿ ಇರಲಿದೆ. ವಿಶ್ವ ಹಿಂದೂ ಪರಿಷತ್, ಬಜರಂಗದಳ, ಧರ್ಮಸ್ಥಳ ಸ್ವಸಹಾಯ ಸಂಘ ಸೇರಿದಂತೆ ೨೪ ಸಂಘಗಳು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು ಕಾರ್ಯಕ್ರಮದ ನಂತರ ಸರ್ವರಿಗೂ ಪ್ರಸಾದ ವ್ಯವಸ್ಥೆ ಇರುತ್ತದೆ, ಸಮಾಜೋತ್ಸವದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಹಿಂದೂ ಬಾಂಧವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಲೋಕೇಶ್ವರ ಕೋರಿದ್ದಾರೆ. ಪತ್ರಿಕಾಗೋಷ್ಠಿಯಲ್ಲಿ ನಗರಸಭಾ ಮಾಜಿ ಉಪಾಧ್ಯಕ್ಷ ಸೊಪ್ಪು ಗಣೇಶ್, ಸದಸ್ಯರಾದ ತರಕಾರಿ ಗಂಗಾಧರ್, ಭಾರತಿ ಮಂಜುನಾಥ್, ಸಮಾಜೋತ್ಸವ ಸಮಿತಿ ಮುಖಂಡರಾದ ಸಿರಿಗಂಧ ಗುರು, ನಟರಾಜ್ , ಬಾಬು ಪಟೇಲ್, ಸುದರ್ಶನ್ ಬಾಬು ಮತ್ತಿತರರು ಇದ್ದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಿಎಂ ಗಾದಿ ಸಂಚಲನ : ನಾನು ಸಿಎಂ ಆಗಲಿ ಎಂಬುದು ಜನರ ಬಯಕೆ ಎಂದರು ಡಿಕೆಶಿ
ರೈಲ್ವೆ ಯೋಜನೆಗೆ ಭೂಮಿ ನೀಡಲು ರಾಜ್ಯ ಹಿಂದೇಟು