ಹಿಂದೂ ಸಮ್ಮೇಳನ ಒಗ್ಗಟ್ಟು ಮೂಡಿಸುವ ವೇದಿಕೆ: ಶಿವಾನಂದ ಬಡಿಗೇರ

KannadaprabhaNewsNetwork |  
Published : Feb 24, 2026, 03:45 AM IST
ಭಟ್ಕಳದ ಮುಟ್ಟಳ್ಳಿ ಮಂಡದಲ ಹಿಂದೂ ಸಮ್ಮೇಳನ ಮೂಡಭಟ್ಕಳದ ಲಕ್ಷ್ಮೀನರಸಿಂಹ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ನಡೆಯಿತು. | Kannada Prabha

ಸಾರಾಂಶ

ಇಲ್ಲಿನ ಮುಟ್ಟಳ್ಳಿ ಮಂಡಲದ ಹಿಂದೂ ಸಮ್ಮೇಳನ ಸಮಿತಿಯಿಂದ ಮೂಡಭಟ್ಕಳದ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಹಿಂದೂ ಸಮ್ಮೇಳನ ನಡೆಯಿತು.

ಮುಟ್ಟಳ್ಳಿ ಮಂಡಲದ ಹಿಂದೂ ಸಮ್ಮೇಳನ ಅದ್ಧೂರಿ ಸಂಪನ್ನ

ಕನ್ನಡಪ್ರಭ ವಾರ್ತೆ ಭಟ್ಕಳ

ಇಲ್ಲಿನ ಮುಟ್ಟಳ್ಳಿ ಮಂಡಲದ ಹಿಂದೂ ಸಮ್ಮೇಳನ ಸಮಿತಿಯಿಂದ ಮೂಡಭಟ್ಕಳದ ಶ್ರೀ ಲಕ್ಷ್ಮೀ ನರಸಿಂಹ ದೇವಸ್ಥಾನದಲ್ಲಿ ಹಿಂದೂ ಸಮ್ಮೇಳನ ನಡೆಯಿತು.

ಮುಖ್ಯ ವಕ್ತಾರರಾಗಿ ಭಾಗವಹಿಸಿದ್ದ ಹಿಂದೂ ಜಾಗರಣಾ ವೇದಿಕೆಯ ಶಿವಾನಂದ ಬಡಿಗೇರ ಮಾತನಾಡಿ, ಹಿಂದೂ ಸಮ್ಮೇಳನ ಯಾವುದೇ ಜಾತಿ–ಮತ ವಿರೋಧಿಯಲ್ಲ. ಇದೊಂದು ಹಿಂದು ಧರ್ಮದ ಒಗ್ಗಟ್ಟು ಮೂಡಿಸುವ ವೇದಿಕೆಯಾಗಿದೆ. ಯುವಪೀಳಿಗೆ ಸಂಸ್ಕೃತಿಯಿಂದ ದೂರವಾಗದಂತೆ ಪಾಲಕರು ಎಚ್ಚರಿಕೆಯಿಂದಿರಬೇಕು. ಇತಿಹಾಸದ ಮಹನೀಯರ ಕಥೆಗಳನ್ನು ಮಕ್ಕಳಿಗೆ ತಿಳಿಸಬೇಕು ಎಂದರು.

ದೇಶದಲ್ಲಿ ಎಲ್ಲಾ ಧರ್ಮದವರು ಸೌಹಾರ್ದದಿಂದ ಬದುಕಬೇಕು. ರಾಮಾಯಣ-ಮಹಾಭಾರತದ ಮಹತ್ವವನ್ನು ವಿಶ್ವವೇ ಅರಿಯುತ್ತಿರುವುದು ಹೆಮ್ಮೆಯ ಸಂಗತಿ ಎಂದ ಅವರು, ರಾಷ್ಟ್ರ ನಿರ್ಮಾಣದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘದ ಪಾತ್ರ ಮಹತ್ವದ್ದಾಗಿದೆ. ಪಂಚ ಪರಿವರ್ತನೆ ಉದ್ದೇಶದೊಂದಿಗೆ ಧರ್ಮ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಕುಟುಂಬ ವ್ಯವಸ್ಥೆ ಕುಸಿಯುತ್ತಿರುವ ಈ ಸಂದರ್ಭದಲ್ಲಿ ಕುಟುಂಬ ಪ್ರಬೋಧನೆ ಅಗತ್ಯ. ಸ್ವದೇಶಿ ಜೀವನ ಶೈಲಿ ಅಳವಡಿಸಿಕೊಂಡು ಭಾರತೀಯ ಉತ್ಪನ್ನಗಳ ಬಳಕೆ ಹೆಚ್ಚಿಸಬೇಕು ಎಂದು ಹೇಳಿದರು.ಸಮ್ಮೇಳನ ಸಮಿತಿ ಅಧ್ಯಕ್ಷ ವೆಂಕಟೇಶ ನಾಯ್ಕ ಪ್ರಾಸ್ತಾವಿಕವಾಗಿ ಮಾತನಾಡಿ, 1970ರಲ್ಲಿ ಇದೇ ಸ್ಥಳದಲ್ಲಿ ಶಾಖೆ ಆರಂಭಗೊಂಡಿದ್ದು, ಧಾರ್ಮಿಕ ಹಾಗೂ ಸಾಮಾಜಿಕ ಚಟುವಟಿಕೆಗಳು ನಿರಂತರವಾಗಿ ನಡೆಯುತ್ತಿವೆ. ನೂರು ವರ್ಷಗಳ ಪರಂಪರೆಯ ರಾಷ್ಟ್ರೀಯ ಸ್ವಯಂಸೇವಕ ಸಂಘದ ಸೇವೆಯನ್ನು ಸ್ಮರಿಸಿದರು.

ಕಾರ್ಯಕ್ರಮದ ಪೂರ್ವದಲ್ಲಿ ಭಟ್ಕಳ ರೈಲ್ವೆ ನಿಲ್ದಾಣ ಸಮೀಪದ ಶ್ರೀ ನಾಗಮಾಸ್ತಿ ದೇವಸ್ಥಾನದಿಂದ ಭವ್ಯ ಶೋಭಾಯಾತ್ರೆ ಹೊರಟು, ಮುಟ್ಟಳ್ಳಿ ಗ್ರಾಪಂ ಮಾರ್ಗವಾಗಿ ಮೂಡಭಟ್ಕಳ ಬೈಪಾಸ್ ಮೂಲಕ ಸಭಾ ಸ್ಥಳಕ್ಕೆ ತಲುಪಿತು. ಮೆರವಣಿಗೆಯಲ್ಲಿ ಸಾವಿರಾರು ಜನರು ಪಾಲ್ಗೊಂಡರು.

ಡಿವೈಎಸ್ಪಿ ಗಿರೀಶ್, ಸಿಪಿಐ ದಿವಾಕರ ಪಿ.ಎಂ., ಗ್ರಾಮೀಣ ಠಾಣೆ ಸಿಪಿಐ ವೆಂಕಟೇಶ್ ಎಸ್. ಮುರ್ನಾಲ್, ಪಿಎಸ್ಐ ನವೀನ್ ನಾಯ್ಕ ಹಾಗೂ ತಿಮ್ಮಪ್ಪ ಎಸ್. ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.

ಕಾರ್ಯಕ್ರಮದಲ್ಲಿ ಕೃಷ್ಣ ನಾಯ್ಕ ಸ್ವಾಗತಿಸಿದರು. ಪತ್ರಕರ್ತ ಈಶ್ವರ ನಾಯ್ಕ ನಿರೂಪಿಸಿದರು. ವಿನೋದ ಶೆಟ್ಟಿ ವಂದಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಗೊಂದಲಗಳಿಗೆ ಶೀಘ್ರ ತೆರೆ: ಸತೀಶ್ ಜಾರಕಿಹೊಳಿ
ಪೌಷ್ಟಿಕ ಆಹಾರ ಸೇವಿಸಿ ಸದೃಢರಾಗಿ: ಡಾ. ಪ್ರಕಾಶ ಸಂಕನೂರ