ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ಇಲ್ಲಿನ ಚೌಡ್ಲು ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ನಡೆದ ಹಿಂದೂ ಸಂಗಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಇಂದಿನ ಮಕ್ಕಳಿಗೆ ದೇಶಪ್ರೇಮದ ಪಾಠವನ್ನು ಪ್ರಾರಂಭಿಕ ಹಂತದಲ್ಲಿಯೇ ಕಲಿಸಿಕೊಡುವ ಮಹತ್ಕಾರ್ಯ ಪೋಷಕರಿಂದ ಆಗಬೇಕಿದೆ ಎಂದರು.ಯಸಳೂರು ತೆಂಕಲಗೂಡು ಬೃಹನ್ಮಠದ ಪೀಠಾಧ್ಯಕ್ಷ ಶ್ರೀ ಚೆನ್ನ ಸಿದ್ದೇಶ್ವರ ಶಿವಾಚಾರ್ಯ ಸ್ವಾಮೀಜಿ ಮಾತನಾಡಿ, ಹಿಂದೂ ರಾಷ್ಟ್ರದ ಏಕತೆಯ ಮನೋಭಾವನೆಯನ್ನು ಮಕ್ಕಳಲ್ಲಿ ಬಿತ್ತುವ ಕಾರ್ಯ ಆಗಬೇಕಿದೆ. ಭಾರತದ ಸ್ವಾತಂತ್ರ್ಯ ಮತ್ತು ಸನಾತನ ಧರ್ಮದ ವಿಚಾರಗಳನ್ನು ಮಕ್ಕಳಿಗೆ ತಿಳಿಸುವ ಕಾರ್ಯ ನಿರಂತರವಾಗಿ ನಡೆಯಬೇಕು ಎಂದರು.ಮಂಡಲ ಅಧ್ಯಕ್ಷ ಚಿಂತು, ಸಂಗಮ ಸಮಿತಿ ಪ್ರಮುಖರಾದ ಸನತ್, ಉದ್ಯಮಿ ಎಸ್.ಎಲ್.ಸೀತಾರಾಮ್, ಹಿರಿಯ ಸ್ವಯಂ ಸೇವಕರಾದ ಕಿಬ್ಬೆಟ್ಟ ಶೇಷಪ್ಪ ಮತ್ತಿತರರು ಇದ್ದರು.ಇಲ್ಲಿನ ಚೌಡ್ಲು ಹಿಂದೂ ಸಂಗಮ ಆಯೋಜನ ಸಮಿತಿ ವತಿಯಿಂದ ನಡೆದ ಹಿಂದೂ ಸಂಗಮದ ಶೋಭಾಯಾತ್ರೆ ಮೆರವಣಿಗೆ ಹಿಂದುತ್ವ ಬಲವರ್ಧನೆಯನ್ನು ಸಾಕ್ಷೀಕರಿಸಿತು.ಗ್ರಾಮದ ಮುಖ್ಯ ಬೀದಿಗಳಲ್ಲಿ ಸಂಚರಿಸಿ ಆಲೆಕಟ್ಟೆ ರಸ್ತೆಯ ಮೂಲಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಪ್ರಾಂಗಣದ ಆವರಣದಲ್ಲಿ ಸಮಾವೇಶಗೊಂಡಿತು. ಮೆರವಣಿಗೆಯಲ್ಲಿ ಭಜನಾ ನೃತ್ಯ, ಚೆಂಡೆ ಮದ್ದಳೆ, ಛದ್ಮವೇಷಗಳು, ಶ್ರೀ ರಾಮನ ಘೋಷಣೆಗಳು, ಬಾಬಾ ಸಾಹೇಬ್ ಅಂಬೇಡ್ಕರ್ ರಥ ಯಾತ್ರೆ, ದೇಶ ಪ್ರೇಮ ಪ್ರತಿಬಿಂಬಿಸುವ ವಿವಿಧ ಕಲಾ ಕೃತಿಗಳು ಗಮನ ಸೆಳೆದವು.೦೫ಎಸ್‌ಪಿಟಿ೦೩:ಸೋಮವಾರಪೇಟೆ ಸಮೀಪ ಚೌಡ್ಲು ಹಿಂದೂ ಸಂಗಮ ವತಿಯಿಂದ ಆಲೆಕಟ್ಟೆ ರಸ್ತೆಯಲ್ಲಿರುವ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣದ ಆವರಣದಲ್ಲಿ ಹಿಂದೂ ಸಂಗಮ ಸಮಾವೇಶವನ್ನು ಗಣ್ಯರು ಉದ್ಘಾಟಿಸಿದರು.