
ಕನ್ನಡಪ್ರಭ ವಾರ್ತೆ ಕುಶಾಲನಗರ
ಕುಶಾಲನಗರದಲ್ಲಿ ಹಿಂದೂ ಸಂಗಮ ಆಯೋಜನಾ ಸಮಿತಿ ಆಶ್ರಯದಲ್ಲಿ ನಡೆದ ಹಿಂದೂ ಸಂಗಮ ಕಾರ್ಯಕ್ರಮದಲ್ಲಿ ದಿಕ್ಸೂಚಿ ಭಾಷಣ ಮಾಡಿದರು.
ಸಮಾಜದಲ್ಲಿ ಪಂಚ ಪರಿವರ್ತನೆಗಳ ಅಗತ್ಯತೆ ಇದ್ದು, ಸಾಮಾಜಿಕ ಮೌಲ್ಯಗಳ ಸಂರಕ್ಷಣೆ, ಸಾಮಾಜಿಕ ಸಾಮರಸ್ಯ, ಪರಿಸರದ ಸಂರಕ್ಷಣೆ ಸ್ವದೇಶಿ ಭಾವಗಳ ಜಾಗೃತಿ ಹಾಗೂ ನಾಗರಿಕ ಶಿಸ್ತು ಪ್ರತಿಯೊಬ್ಬರು ಅಳವಡಿಸಿಕೊಳ್ಳಬೇಕಾಗಿದೆ. ಶತಮಾನ ಕಂಡ ಆರ್ ಎಸ್ ಎಸ್ ಕನಸು ಕೂಡ ಇದೆ ಆಗಿದೆ ಎಂದು ಹೇಳಿದರು.ಜನಸಾಮಾನ್ಯರು ಹಿಂದುತ್ವದ ಜಾಗೃತಿ ಹಾಗೂ ದೇಶ ಭಕ್ತಿ ಹೊಂದುವಂತಾಗಬೇಕು.
ಕುಶಾಲನಗರದ ಸಾಹಿತಿ ಹಂಚೆಟ್ಟಿರ ಫ್ಯಾನ್ಸಿ ಮುತ್ತಣ್ಣ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡ ಕುಶಾಲನಗರ ಕೃಷಿ ಪತ್ತಿನ ಮತ್ತು ಕೈಗಾರಿಕೋದ್ಯಮಗಳ ಸಹಕಾರ ಸಂಘದ ಅಧ್ಯಕ್ಷ ಟಿ.ಆರ್. ಶರವಣ ಕುಮಾರ್ ಮಾತನಾಡಿ, ಧರ್ಮವನ್ನು ರಾಜಕಾರಣಕ್ಕೆ ಬಳಸಬಾರದು ಎಂದರು. ಕುಶಾಲನಗರ ವಿಶ್ವ ಜ್ಞಾನಿ ಅಂಬೇಡ್ಕರ್ ಟ್ರಸ್ಟ್ ಅಧ್ಯಕ್ಷ ಲೋಕೇಶ್ ಕುಂಡಾರಿ, ಹಿಂದೂ ಸಂಗಮ ಕಾರ್ಯಕ್ರಮ ಸಂಯೋಜಕ ಜಿ.ಎಲ್. ನಾಗರಾಜ್, ಆಯೋಜನಾ ಸಮಿತಿ ಅಧ್ಯಕ್ಷ ದೇವಿ ಪ್ರಸಾದ್ ಇದ್ದರು.
ಕುಶಾಲನಗರ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆದ ಸಭಾ ಕಾರ್ಯಕ್ರಮದಲ್ಲಿ ಸ್ಥಳೀಯ ಮಹಿಳಾ ಸದಸ್ಯರ ತಂಡದಿಂದ ಕಿರು ನಾಟಕದ ಮೂಲಕ ದೇಶಭಕ್ತಿ ಸಂದೇಶ ನೀಡಲಾಯಿತು.
ಹಿಂದೂ ಸಂಗಮ ಆಯೋಜನಾ ಸಮಿತಿ ಸದಸ್ಯರು, ವಿವಿಧ ಸಂಘಟನೆಗಳ ಪ್ರಮುಖರು, ಕಾರ್ಯಕರ್ತರು ಪಾಲ್ಗೊಂಡಿದ್ದರು.