ಕನ್ನಡಪ್ರಭ ವಾರ್ತೆ ತಾಳಿಕೋಟೆ
ತಾಳಿಕೋಟೆಯಲ್ಲಿ ಭಗತ್ ಸಿಂಗ್ ಯುವಕ ಮಂಡಳಿಯ ಗಣೇಶೋತ್ಸವ ದಶಮಾನೋತ್ಸವ ನಿಮಿತ್ತ ಸೋಮವಾರ ಆಯೋಜಿಸಿದ್ದ ಹಿಂದೂ ಏಕತಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ಅವರು, ಇಂದಿನ ಯುವಕರು ಅಂತಹ ದೇಶಭಕ್ತರ ಜೀವನದಿಂದ ಪ್ರೇರಣೆ ಪಡೆದುಕೊಳ್ಳಬೇಕು. ಅವರ ತ್ಯಾಗವನ್ನು ಕೇವಲ ಭಾಷಣಗಳಲ್ಲಿ ಸ್ಮರಿಸುವುದಲ್ಲದೆ, ದೇಶದ ಹಿತಕ್ಕಾಗಿ ಕೆಲಸ ಮಾಡುವ ಮೂಲಕ ಗೌರವಿಸಬೇಕು ಎಂದು ಕರೆ ನೀಡಿದರು.
ಮನೆಗೆ ಸೀಮಿತವಾಗಿದ್ದ ಗಣೇಶೋತ್ಸವವನ್ನು ಬಾಲ ಗಂಗಾಧರ ತಿಲಕರು ಹಿಂದೂ ಸಮಾಜವನ್ನು ಒಗ್ಗೂಡಿಸುವುದಕ್ಕಾಗಿ ಸಾರ್ವಜನಿಕವಾಗಿ ಆಚರಿಸಲು ನಿರ್ಧರಿಸಿದರು. ಜಾತಿ, ಬಡವ-ಶ್ರೀಮಂತ ಎಂಬ ಭೇದವಿಲ್ಲದೆ ಎಲ್ಲರೂ ಒಂದಾಗಿ ಗಣೇಶೋತ್ಸವ ಆಚರಿಸುವ ಮೂಲಕ ಸಮಾಜವನ್ನು ಸಂಘಟಿಸುವ ಕೆಲಸ ನಡೆಯಬೇಕು ಎಂದು ಹೇಳಿದರು.ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಪೊಲೀಸ್ ವ್ಯವಸ್ಥೆ ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಅಧಿಕಾರಿಗಳ ವರ್ಗಾವಣೆ ಸೇರಿದಂತೆ ಆಡಳಿತಾತ್ಮಕ ವಿಚಾರಗಳಿಗಿಂತ ಜನರ ಸುರಕ್ಷತೆ ಮತ್ತು ಕಾನೂನು ಸುವ್ಯವಸ್ಥೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಪ್ರಜೆಗಳ ಸುರಕ್ಷತೆ ಖಾತ್ರಿಪಡಿಸುವುದು ಸರ್ಕಾರದ ಪ್ರಮುಖ ಜವಾಬ್ದಾರಿಯಾಗಿದೆ ಎಂದರು.
ಇದಕ್ಕೂ ಮೊದಲು ಪಟ್ಟಣಕ್ಕೆ ಆಗಮಿಸಿದ ಯತ್ನಾಳ ಅವರನ್ನು ಬೈಕ್ ರ್ಯಾಲಿ ಮೂಲಕ ಬರಮಾಡಿಕೊಳ್ಳಲಾಯಿತು. ಈ ವೇಳೆ ಆರೇಳು ಜೆಸಿಬಿಗಳು ಪಾಲ್ಗೊಂಡಿದ್ದು ಗಮನ ಸೆಳೆಯಿತು.
ಈಚೆಗೆ ಮುದ್ದೇಬಿಹಾಳದಲ್ಲಿ ಸ್ವಯಂ ಘೋಷಿತ ರೈತ ನಾಯಕರೊಬ್ಬರು ನಾನು ರೈತರಿಗಾಗಿ ಪ್ರಾಣವನ್ನೇ ಕೊಡುತ್ತೇನೆ, ರಕ್ತವನ್ನೇ ಕೊಡುತ್ತೇನೆಂದು ಹೇಳುತ್ತಿದ್ದಾನೆ. ಇವನೇನು ಹನುಮಂತನಾ? ಎದೆ ಬಗೆದು ತೋರಿಸಲಿಕ್ಕೆ ಎಂದು ಹೆಸರು ಹೇಳದ ನಡಹಳ್ಳಿ ವಿರುದ್ಧ ವ್ಯಂಗ್ಯವಾಡಿದರು. ಇಂತವರ ರಾಜಕೀಯ ಅಂತ್ಯ ಬಂದಾಗಿದೆ. ಅದಕ್ಕಾಗಿ ಆರ್.ಎಸ್.ಪಾಟೀಲ (ಕೂಚಬಾಳ), ಪ್ರಭು ದೇಸಾಯಿ ಎರಡು ಹುಲಿಗಳನ್ನು ಕ್ಷೇತ್ರದಲ್ಲಿ ಬಿಟ್ಟಿದ್ದೇನೆ. ಜನರಿಗಾಗಿ ನಿಜವಾಗಿ ಕೆಲಸ ಮಾಡುವ ಮೂಲಕ ತಮ್ಮ ಬದ್ಧತೆ ತೋರಿಸುವ ಕಾರ್ಯ ಮುಂದೆ ಆಗಲಿದೆ.