ಕನ್ನಡಪ್ರಭ ವಾರ್ತೆ ಹೊನ್ನಾಳಿ
ಪಟ್ಟಣದ ಹಿರೇಕಲ್ಮಠ ಸಮುದಾಯ ಭವನದಲ್ಲಿ ದಸರಾ ಮತ್ತು ಶರನ್ನವರಾತ್ರಿ ಕಾರ್ಯಕ್ರಮದ ಧರ್ಮಸಭೆಯಲ್ಲಿ ಅವರು ಮಾತನಾಡಿದರು. ಈಗಿನ ಒಡೆಯರ್ ಡಾ.ಚನ್ನಮಲ್ಲಿಕಾರ್ಜುನ ಶ್ರೀಗಳವರು ಲಿಂ.ಶ್ರೀಗಳ ಆಣತಿಯಂತೆ ದೊಡ್ಡ ಯೋಜನೆಗಳನ್ನು ಹಾಕಿಕೊಂಡು ಕಾರ್ಯಪ್ರವೃತ್ತರಾಗಿದ್ದಾರೆ. ಮಾದರಿಯಾಗಿ ಕೃಷಿ ಮೇಳ ಅದ್ಧೂರಿಯಾಗಿ ಯಶಸ್ವಿಗೊಳಿಸಿ, ಭಕ್ತರ ಬದುಕನ್ನು ಕಟ್ಟುವ ಕೆಲಸವನ್ನು ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಸ್ವಾತಂತ್ರ್ಯ ಬಂದು 75 ವರ್ಷಗಳಾದರೂ ರೈತ ದೇಶದ ಬೆನ್ನೆಲುಬು ಎಂಬ ಮಾತಿನಂತೆ ಅವರ ಬದುಕು ಹಸನಾಗಿಲ್ಲ. ಭತ್ತ, ಮೆಕ್ಕೆಜೋಳ, ಅಡಕೆ ಮುಂತಾದ ಬೆಳೆಗಳಿಗೆ ಸರಿಯಾದ ಬೆಲೆ ಸಿಗುತ್ತಿಲ್ಲ. ರೈತರಿಗೆ ನ್ಯಾಯವಾದ ಬೆಲೆ ಸಿಗದೇ ಮಧ್ಯವರ್ತಿಗಳಿಗೆ ಸಿಂಹಪಾಲು ಲಾಭ ದೊರಕುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ರೈತರ ಬೆಳೆಗಳಿಗೆ ಎಂ.ಆರ್.ಪಿ. ದರ ದೊರಕಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ ಎಂದು ತಿಳಿಸಿದರು.ಕೇಂದ್ರ ಸರ್ಕಾರ ರೈತರ 18 ಕೋಟಿ ಬ್ಯಾಂಕ್ ಖಾತೆಗಳಿಗೆ ನೇರವಾಗಿ ಆನ್‍ಲೈನ್ ಮೂಲಕ ತಲಾ ₹2000 ವನ್ನು ಹಾಕಿದ್ದು, ರೈತರ ಗೊಬ್ಬರದ ಖರೀದಿಗೆ ₹2 ಲಕ್ಷ ಕೋಟಿ ಸಬ್ಸಿಡಿ ಹಣ ಕಾರ್ಖಾನೆಗಳಿಗೆ ಸಂದಾಯ ಮಾಡಿದ್ದಾರೆ. ಆ ಮೂಲಕ ನಮ್ಮದು ರೈತಪರ ಸರ್ಕಾರ ಎಂದು ಮತ್ತೊಮ್ಮೆ ಸಾಬೀತು ಮಾಡಿದ್ದಾರೆ ಎಂದು ನಮೋದಿ ಆಡಳಿತ ವೈಖರಿ ಬಣ್ಣಿಸಿದರು.
ಶಿಕ್ಷಕಿ ಶಾಂತಾ ಸುರೇಶ್ "ಮಹಿಳೆಯರ ಸ್ವಾವಲಂಬನೆ " ವಿಷಯದ ಕುರಿತು ಉಪನ್ಯಾಸ ನೀಡಿದರು. ಬಿ.ಇಡಿ. ಕಾಲೇಜಿನ ನಿವೃತ್ತ ಪ್ರಾಂಶುಪಾಲ ಜಯಪ್ಪ ಮಾತನಾಡಿದರು. ಹಾವೇರಿಯ ಕರ್ಜಗಿ ಮಠದ ಶಿವಯೋಗಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಹಿರೇಕಲ್ಮಠದ ಡಾ.ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ದಿವ್ಯಸಾನಿಧ್ಯ ವಹಿಸಿದ್ದರು.
ಸಮಾರಂಭದಲ್ಲಿ ಸುರಹೊನ್ನೆಯ ಶ್ರೀ ಒಡೆಯರ್ ಚಂದ್ರಶೇಖರ ಶಿವಾಚಾರ್ಯ ಆಂಗ್ಲಮಾಧ್ಯಮ ಪ್ರೌಢಶಾಲೆ ಮಕ್ಕಳಿಂದ ನಡೆದ ಸಾಂಸ್ಕತಿಕ ಕಾರ್ಯಕ್ರಮಗಳು ಜನಮನಸೂರೆಗೊಂಡವು.
ಹೊನ್ನಾಳಿ ಪಟ್ಟಣದ ಹಿರೇಕಲ್ಮಠ ಸಮುದಾಯ ಭವನದಲ್ಲಿ ದಸರಾ ಮತ್ತು ಶರನ್ನವರಾತ್ರಿ ಕಾರ್ಯಕ್ರಮ ಧರ್ಮಸಭೆಯಲ್ಲಿ ಶಿವಮೊಗ್ಗ ಕ್ಷೇತ್ರ ಸಂಸದ ಬಿ.ಎವೈ. ರಾಘವೇಂದ್ರ ಮಾತನಾಡಿದರು.