ಮಾನವ ಸರಪಳಿಗೆ ಹಿರೇಕಲ್ಮಠ ಸ್ವಾಮೀಜಿ ಚಾಲನೆ

KannadaprabhaNewsNetwork |  
Published : Sep 16, 2024, 01:53 AM IST
ಹೊನ್ನಾಳಿ ಫೋಟೋ 15ಎಚ್.ಎಲ್.ಐ1ಎ. ಭಾಮವಾರ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಮಾನವ ಸರಪಳಿಯಲ್ಲಿ  ಡಾ ಒಡೆಯರ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮಿಜಿ,ಶಾಸಕ ಡಿ.ಜಿ.ಶಾಂತನಗೌಡ ಸೇರಿದಂತೆ ನಾಮತ್ತಿ ಮತ್ತು ಹೊನ್ನಾಳಿ ತಾಲೂಕು ಮಟ್ಟದ ಅಧಿಕಾರಿಗಳು ವಿದ್ಯಾರ್ಥಿಗಳು ಭಾಗವಹಿಸಿದ್ದರು. | Kannada Prabha

ಸಾರಾಂಶ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನ್ಯಾಮತಿ ತಾಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಮಾನವಸರಪಳ್ಳಿ ಕಾರ್ಯಕ್ರಮಕ್ಕೆ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಚಾಲನೆ ನೀಡಿದರು.

ಕನ್ನಡ ಪ್ರಭ ವಾರ್ತೆ ಹೊನ್ನಾಳಿ

ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನ್ಯಾಮತಿ ತಾಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಮಾನವಸರಪಳ್ಳಿ ಕಾರ್ಯಕ್ರಮಕ್ಕೆ ಹಿರೇಕಲ್ಮಠದ ಡಾ. ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಚಾಲನೆ ನೀಡಿದರು.

ಈ ವೇಳೆ ಮಾತನಾಡಿದ ಶ್ರೀಗಳು ದೇಶದ ಪ್ರತಿಯೊಬ್ಬ ಪ್ರಜೆ ಜಾತಿ, ಲಿಂಗ, ಭೇದ ಹಾಗೂ ಅಂತಸ್ತುಗಳನ್ನೂ ಮೀರಿ ಒಂದೇ ಸಂವಿಧಾನದಡಿಯಲ್ಲಿ ಭಾರತಿಯರೆಲ್ಲರೂ ಬದುಕುತ್ತಿರುವುದು ಹೆಮ್ಮೆಯ ವಿಚಾರ ಎಂದರು.

ಭಾನುವಾರ ಬೆಳಗ್ಗೆ ಮಾನವ ಸರಪಳ್ಳಿ ವೇದಿಕೆ ಕಾರ್ಯಕ್ರಮವನ್ನುಶಾಸಕ ಡಿ.ಜಿ.ಶಾಂತನಗೌಡ ಅವರು ದೀಪ ಬೆಳಗಿಸಿ ಉದ್ಘಾಟಿಸಿ ನಂತರ ಮಾನವ ಸರಪಳ್ಳಿ ಕಾರ್ಯಕ್ರಮದ ಸವಿನೆನಪಿಗಾಗಿ ರಸ್ತೆ ಪಕ್ಕದಲ್ಲಿ ಅರಣ್ಯ ಇಲಾಖೆಯ ಸಹಕಾರದಿಂದ ಸಸಿಗಳನ್ನು ನೆಟ್ಟರು.

ನಂತರ ಮಾತನಾಡಿ, 1947 ರಲ್ಲಿ ಸ್ವಾತಂತ್ರ್ಯ ದೊರೆತಾಗ ಜನತೆ ಎಷ್ಟು ಸಂಭ್ರಮಿಸಿದ್ದರೋ, ಇಂದೂ ಸಹ ಅಷ್ಟೆ ಸಂತಸ ವ್ಯಕ್ತಪಡಿಸಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮ ಎಂದು ತಿಳಿಸಿದರು.

ಭಾರತದ ಸಂವಿಧಾನ ಜಗತ್ತಿಗೆ ಮಾದರಿಯಾಗಿದ್ದು, ಇಂತಹ ಆದರ್ಶ ಸಂವಿಧಾನವನ್ನು ನಮಗೆ ನಾವೇ ಅರ್ಪಿಸಿಕೊಂಡಿದ್ದೇವೆ. ನಮ್ಮ ಸಂವಿಧಾವನ್ನು ಇಡೀ ಜಗತ್ತೇ ಕೊಂಡಾಡುತ್ತಿದೆ ಎಂದು ಸಂವಿಧಾನದ ಬಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಮಾನವ ಸರಪಳ್ಳಿಯಲ್ಲಿ ಕಾರ್ಯಕ್ರಮದಲ್ಲಿ ಅವಳಿ ತಾಲೂಕುಗಳ 188 ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಸುಮಾರು 14 ಸಾವಿರಕ್ಕೂ ಹೆಚ್ಚು ಶಾಲಾ ಮಕ್ಕಳು ಅಧಿಕಾರಿಗಳು ಗ್ರಾಪಂ ಆಡಳಿತ ವರ್ಗ, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸಿದ್ದರು.

ವಿಧ್ಯಾರ್ಥಿಗಳು ಉತ್ಸುಕತೆಯಿಂದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಈ ವೇಳೆ ಹೊನ್ನಾಳಿ ಎಸಿ ವಿ.ಅಭಿಷೇಕ್, ಜಿಲ್ಲಾ ಅಡಿಷನಲ್ ಎಸ್‌ಪಿ ಮಂಜುನಾಥ್, ಡಿಎಚ್‍ಒ ಷಣ್ಮುಖಪ್ಪ, ಡಿವೈಎಸ್‌ಪಿ ರುದ್ರಪ್ಪ, ನ್ಯಾಮತಿ ತಹಸೀಲ್ದಾರ್ ಗೋವಿಂದಪ್ಪ, ಹೊನ್ನಾಳಿ ತಹಸೀಲ್ದಾರ್ ಪಟ್ಟರಾಜಗೌಡ, ನ್ಯಾಮತಿ ಹಾಗೂ ಹೊನ್ನಾಳಿ ಇಒ ರಾಘವೇಂದ್ರ, ಪ್ರಕಾಶ್, ಪಿಎಸ್‌ಐ ಸುನಿಲ್‍ಕುಮಾರ್, ನ್ಯಾಮತಿ ಇನ್ಸೆಪೆಕ್ಟರ್ ರವಿಕುಮಾರ್ ಸಮಾಜ ಕಲ್ಯಾಣಾಧಿಕಾರಿ ಉಮಾ, ಪುರಸಭೆ ಅಧ್ಯಕ್ಷ ಮೈಲಪ್ಪ, ಪುರಸಭಾ ಮುಖ್ಯಾಧಿಕಾರಿ ಲೀಲಾವತಿ, ಡಿ.ಜಿ.ವಿಶ್ವನಾಥ್ ಸೇರಿ ಇತರರು ಇದ್ದರು.

----

ಫೋಟೋ ಎಚ್.ಎಲ್.ಐ151: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಭಾನುವಾರ ನ್ಯಾಮತಿ ತಾಲೂಕಿನ ಟಿ.ಗೋಪಗೊಂಡನಹಳ್ಳಿಯಿಂದ ಮಾನವಸರಪಳ್ಳಿ ಕಾರ್ಯಕ್ರಮದಲ್ಲಿ ಶಾಸಕ ಡಿ.ಜಿ.ಶಾಂತನಗೌಡ, ಹಿರೇಕಲ್ಮಠದ ಒಡೆಯರ್ ಚನ್ನಮಲ್ಲಿಕಾರ್ಜುನ ಶಿವಾಚಾರ್ಯ ಶ್ರೀಗಳು ಭಾಗವಹಿ ಮಾತನಾಡಿದರು.

PREV

Recommended Stories

ವೈದ್ಯರ ಕೊರತೆಗೆ ನಲುಗಿದ ಸಾರ್ವಜನಿಕ ಆಸ್ಪತ್ರೆ
ಸತ್ಯಕಾಮರ ಸುಮ್ಮನೆಯಲ್ಲಿ ಕಸಾಪ ವಾರ್ಷಿಕ ಸಭೆ: ಡಾ.ಮಹೇಶ ಜೋಷಿ