ಹಿರೇಕೆರೂರು: ಇಲ್ಲಿನ ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೆ ಏರಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಅವರು ಬೆಂಗಳೂರಿನಲ್ಲಿ ಇತ್ತೀಚೆಗೆ ಪೌರಾಡಳಿತ ಸಚಿವ ರಹೀಂ ಖಾನ್ ಅವರಿಗೆ ಮನವಿ ಸಲ್ಲಿಸಿದರು.ಹಿರೇಕೆರೂರು ಪಟ್ಟಣ ಪಂಚಾಯಿತಿ 20 ವಾರ್ಡ್‌ಗಳನ್ನು ಹೊಂದಿದ ಅತಿ ದೊಡ್ಡ ಪಟ್ಟಣ ಪಂಚಾಯಿತಿ ಆಗಿದೆ. 2023ರ ಅಂದಾಜಿನಂತೆ 21,101 ಜನಸಂಖ್ಯೆ ಇದೆ. ಹಿರೇಕೆರೂರು ಪಟ್ಟಣ ಪಂಚಾಯಿತಿ ಒಂದು ಚದರ ಕಿಮೀ ಪ್ರದೇಶಕ್ಕೆ 1484 ಜನಸಾಂದ್ರತೆ ಹೊಂದಿದೆ. ಪಪಂ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆ ಶೇ. 35ರಷ್ಟು, ಕೃಷಿಯೇತರ ಚಟುವಟಿಕೆ ಶೇ. 65ರಷ್ಟು, ಉದ್ಯೋಗದ ಪ್ರಮಾಣ ಶೇ. 65ರಷ್ಟು ಹೊಂದಿದೆ.
ಆರ್ಥಿಕ, ಸಾಮಾಜಿಕ ಮತ್ತು ಭೌಗೋಳಿಕವಾಗಿ ಅಭಿವೃದ್ಧಿ ಹೊಂದಿದೆ. ಈ ಅಂಶಗಳನ್ನು ಪರಿಗಣಿಸಿ ಹಿರೇಕೆರೂರು ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸುವ ಸಂಬಂಧ ಈಗಾಗಲೇ ಪ್ರಸ್ತಾವನೆಯನ್ನು ಜಿಲ್ಲಾಧಿಕಾರಿಗಳಿಂದ ಪೌರಾಡಳಿತ ಇಲಾಖೆಯ ನಿದೇಶಕರಿಗೆ ಸಲ್ಲಿಕೆಯಾಗಿದ್ದು, ಪ್ರಸ್ತಾವನೆಗೆ ಅನುಮೋದನೆ ನೀಡಿ ಹಿರೇಕೆರೂರು ಪಟ್ಟಣ ಪಂಚಾಯಿತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಿ ಆದೇಶಿಸಬೇಕು ಎಂದು ಶಾಸಕ ಯು.ಬಿ. ಬಣಕಾರ ಅವರು ಮನವಿ ಮಾಡಿದರು.ಈ ಸಂದರ್ಭದಲ್ಲಿ ಪಪಂ ಅಧ್ಯಕ್ಷೆ ಸುಧಾ ಚಿಂದಿ, ಸದಸ್ಯರಾದ ಕಂಠಾಧರ ಅಂಗಡಿ, ಅಲ್ತಾಫ್‌ಖಾನ್ ಪಠಾಣ್, ರಜಿಯಾ ಅಸದಿ, ಕವಿತಾ ಹರ‍್ನಳ್ಳಿ, ರಮೇಶ ಕೋಡಿಹಳ್ಳಿ, ಸನಾವುಲ್ಲಾ ಮಕಾನ್ದಾರ್, ಮುಖಂಡರಾದ ವಸಂತ ದ್ಯಾವಕ್ಕಳವರ, ವಿನಯ ಪಾಟೀಲ ಇದ್ದರು.ಇಂದು ರಾಷ್ಟ್ರೀಯ ಲೋಕ್ ಅದಾಲತ್ಹಾವೇರಿ: ರಾಷ್ಟ್ರೀಯ ಲೋಕ್ ಅದಾಲತನಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು ಎಂದು ಪ್ರಧಾನ ಜಿಲ್ಲಾ ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷ ಬಿರಾದಾರ ದೇವಿಂದ್ರಪ್ಪಾ ಎನ್. ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಸೆ. 13ರಂದು ರಾಷ್ಟ್ರೀಯ ಲೋಕ ಅದಾಲತ್‌ನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ತಮ್ಮ ವ್ಯಾಜ್ಯಪೂರ್ವ ಹಾಗೂ ನ್ಯಾಯಾಲಯದಲ್ಲಿ ಬಾಕಿ ಇರುವ ರಾಜಿ ಆಗಬಹುದಾದ ಪ್ರಕರಣಗಳಾದ ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟರ್ ಅಪಘಾತ ನ್ಯಾಯಾಧೀಕರಣದ ಪ್ರಕರಣಗಳು, ಇತರೆ ಸಿವಿಲ್ ಪ್ರಕರಣಗಳನ್ನು ಲೋಕ ಅದಾಲತ್‌ನಲ್ಲಿ ರಾಜಿ ಸಂಧಾನದ ಮೂಲಕ ತಕ್ಷಣ ಪರಿಹಾರ ಒದಗಿಸಲಾಗುವುದು. ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.