ಕಾರ್ಕಳ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮ ಪಂಚಾಯತ್ 2023-24ನೇ ಸಾಲಿನ ಅಂಕಿ-ಅಂಶಗಳ ಆಧಾರದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಸುರಕ್ಷಿತ ಪಂಚಾಯತ್’ ವಿಷಯಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ಪಂಚಾಯತ್ ಪುರಸ್ಕಾರದ ಅರ್ಹತಾ ಸುತ್ತಿಗೆ ಆಯ್ಕೆಯಾಗಿದ್ದು, ಇದರ ಅಂಗವಾಗಿ ಪಂಚಾಯತ್‌ನ ದಾಖಲೆ ಹಾಗೂ ಸ್ಥಳ ಪರಿಶೀಲನೆ ನಡೆಯಿತು.ಭಾರತ ಸರ್ಕಾರದ ಪಂಚಾಯತ್ ರಾಜ್ ಸಚಿವಾಲಯದ ಸಹಾಯಕ ವಿಭಾಗೀಯ ಅಧಿಕಾರಿ ಆಶಾದೇವಿ ಹಾಗೂ ಎನ್‌ಐಆರ್‌ಡಿಪಿಆರ್ ಹಿರಿಯ ಸಮಾಲೋಚಕಿ ವಿದ್ಯುಲತಾ ಪರಿಶೀಲನೆ ನಡೆಸಿದರು.
ಪರಿಶೀಲನಾ ತಂಡವು ಸಾಮಾಜಿಕ ನ್ಯಾಯ ಮತ್ತು ಸುರಕ್ಷಿತ ಪಂಚಾಯತ್‌ಗೆ ಸಂಬಂಧಿಸಿದ ಯೋಜನೆಗಳ ವೈಯಕ್ತಿಕ ಫಲಾನುಭವಿಗಳನ್ನು ಭೇಟಿ ಮಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಯೋಜನೆಗಳಿಗೆ ಫಲಾನುಭವಿಗಳ ಆಯ್ಕೆ ಪ್ರಕ್ರಿಯೆ, ಯೋಜನೆಗಳ ಅನುಷ್ಠಾನ ಮತ್ತು ಅನುದಾನಗಳ ಸದ್ಬಳಕೆಯ ಕುರಿತು ಮಾಹಿತಿ ಸಂಗ್ರಹಿಸಿತು.
ಪಂಚಾಯಿತಿ ಮಟ್ಟದಲ್ಲಿ ನಿರ್ವಹಿಸಲಾದ ದಾಖಲೆಗಳನ್ನು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಪರಿಶೀಲನಾ ತಂಡದ ಮುಂದೆ ಮಂಡಿಸಿದರು. ಪರಿಶೀಲನಾ ಕಾರ್ಯಕ್ಕೆ ಗ್ರಾಮ ಪಂಚಾಯತ್‌ನ ಸಿಬ್ಬಂದಿ ವರ್ಗದವರು ಸಹಕರಿಸಿದರು.