ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.
ಕನ್ನಡಪ್ರಭ ವಾರ್ತೆ ಸೋಮವಾರಪೇಟೆ
ವಿಪರೀತ ಬಿಸಿಲಿನಿಂದ ಕಂಗೆಟ್ಟಿರುವ ತಾಲೂಕಿನ ಗ್ರಾಮೀಣ ಜನರು ಮಳೆಗಾಗಿ ದೇವರ ಮೊರೆ ಹೋಗುತ್ತಿದ್ದಾರೆ.ಹಿರಿಕರ ಗ್ರಾಮದ ಕೃಷಿಕರು, ಸೋಮವಾರ ಗ್ರಾಮದ ಶ್ರೀ ಮಲ್ಲೇಶ್ವರ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಮಾಲಂಬಿ ಬೆಟ್ಟಕ್ಕೆ ಕಾಲ್ನಡಿಗೆಯಲ್ಲಿ ತೆರಳಿ ಬೆಟ್ಟದ ಮಳೆಮಲ್ಲೇಶ್ವರ ಹಾಗೂ ಬಸವಣ್ಣ ದೇವರಿಗೆ ಸಾಮೂಹಿಕ ಪೂಜೆ ಸಲ್ಲಿಸಿ, ಮಳೆಗಾಗಿ ಪ್ರಾರ್ಥಿಸಿದರು.ಅರೇಬಿಕಾ ಕಾಫಿ ತೋಟಗಳಿಗೆ ಅಲ್ಪಸ್ವಲ್ಪ ಮಳೆ ಬಿದ್ದ ಪರಿಣಾಮ ಶೇ. ೫೦ರಷ್ಟು ಕಾಫಿ ಬ್ಲಾಸಂ ಆಗಿದೆ. ಈ ಸಂದರ್ಭ ಮಳೆ ಬಿದ್ದರೆ ಮಾತ್ರ ಫಸಲು ಉಳಿಯುತ್ತದೆ. ಈಗ ಮಳೆ ಬೀಳದ ಹಿನ್ನೆಲೆಯಲ್ಲಿ ಕೃಷಿಕರು ಆತಂಕಗೊಂಡಿದ್ದಾರೆ. ಈ ಕಾರಣದಿಂದ ಮಳೆಗಾಗಿ ದೇವರ ಮೊರೆ ಹೋಗಿದ್ದೇವೆ ಎಂದು ಹಿರಿಕರ ದೇವಾಲಯ ಸಮಿತಿ ಅಧ್ಯಕ್ಷ ಕೆ.ಕೆ. ಶಿವಪ್ರಕಾಶ್ ಹೇಳಿದರು.
ಕಾರ್‍ಯದರ್ಶಿ ಕೀರ್ತಿ ಮುತ್ತಣ್ಣ, ಖಜಾಂಚಿ ಸಿ.ಎಲ್. ವೆಂಕಟೇಶ್, ಸಲಹೆಗಾರ ಎಚ್.ಪಿ. ಸುರೇಶ್ ಸೇರಿದಂತೆ ಗ್ರಾಮದ ಹಿರಿಯರು ಪೂಜೆಯಲ್ಲಿ ಪಾಲ್ಗೊಂಡಿದ್ದರು.
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.