ಕನ್ನಡಪ್ರಭ ವಾರ್ತೆ ಶಿವಮೊಗ್ಗ
ಬುಧವಾರ ಸಂಜೆ ಪ್ರತಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ತಮ್ಮ ಆಡಳಿತಾವಧಿಯಲ್ಲಿ ಉತ್ತಮ ಕೆಲಸ ಮಾಡಿ ಕೆಎಸ್‌ಸಿಎ ದೇಶಕ್ಕೆ ಮಾದರಿಯಾಗಿದೆ. ಇಲ್ಲಿಯವರೆಗಿನ ತಾವು ನಿರ್ವಹಿಸಿದ ಉತ್ತಮ ಆಡಳಿತಕ್ಕೆ ಯಾರಿಂದಲೂ ಪ್ರಮಾಣಪತ್ರ ಬೇಕಾಗಿಲ್ಲ ಎಂದು ಕುಟುಕಿದರು.
2010 ಮತ್ತು 2013ರಲ್ಲಿ ಏನೂ ಅಭಿವೃದ್ಧಿ ಕೆಲಸಗಳಾಗಿಲ್ಲ ಎಂಬ ತಮ್ಮ ವಿರೋಧಿಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ಅವರು, ತಮ್ಮ ಆಡಳಿತಾವಧಿಯಲ್ಲಿ ಕೆಪಿಎಲ್, ಮಹಾರಾಜ ಕಪ್, ರಣಜಿಟ್ರೋಫಿ, ವಿಜಯಹಜಾರೆ ಕಪ್, ಮಹಿಳಾ ಕ್ರಿಕೆಟ್ ಪಂದ್ಯಾವಳಿ ಮೊದಲಾದವುಗಳನ್ನು ಗೆದ್ದು ತಮ್ಮ ಅವಧಿಯ ಆಡಳಿತದ ವೈಖರಿಯನ್ನು ಪ್ರದರ್ಶಿಸಿದ್ದೇವೆ ಎಂದು ತಿರುಗೇಟು ನೀಡಿದರು.19 ವರ್ಷದೊಳಗಿನ ಮಹಿಳಾ ಕ್ರಿಕೆಟ್ ತಂಡ ಪ್ರಪ್ರಥಮವಾಗಿ ವಿಜಯ ಸಾಧಿಸಿದ್ದು ತಮ್ಮ ಆಡಳಿತಾವಧಿಯಲ್ಲೇ ಎಂದ ಅವರು, ಇತ್ತೀಚೆಗೆ ನಡೆದ ಮಹಾರಾಜ ಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ದಾಖಲೆ ವೀಕ್ಷಕರು ಪಂದ್ಯ ವೀಕ್ಷಿಸಿದ್ದು, ತಮ್ಮ ತತ್ಪರತೆಗೆ ಸಾಕ್ಷಿಯಾಗಿದೆ. ಕಳೆದ ವರ್ಷ 12 ವರ್ಷದೊಳಗಿನ ಪಂದ್ಯಾವಳಿಯನ್ನು ನಡೆಸಿದ್ದು, ಎಲ್ಲರಿಂದ ಮೆಚ್ಚುಗೆ ಪಡೆದಿದ್ದೇವೆ. ಬಿಸಿಸಿಐ ಕೂಡ ತಮ್ಮ ಆಡಳಿತವನ್ನು ಮೆಚ್ಚಿಕೊಂಡಿದೆ ಎಂದರು.
ತಾವು ಹಿಂದಿನ ಸೀಟಿನಲ್ಲಿ ಕೂತು ವಾಹನ ಚಾಲನೆ ಮಾಡುತ್ತೀದ್ದೀರಿ ಎಂಬ ಪ್ರಶ್ನೆಗೆ, ಈ ಬಾರಿ ಕ್ರಿಕೆಟ್, ಗಾಲ್ಫ್ ಮೊದಲಾದ ಕ್ರೀಡೆಗಳಲ್ಲಿ ಮತ್ತು ಆಡಳಿತದಲ್ಲಿ ಅನುಭವ ಹೊಂದಿರುವ ಕೆ.ಎನ್. ಶಾಂತಕುಮಾರ್ ಅವರನ್ನು ರಾಜ್ಯಾಧ್ಯಕ್ಷ ಕಣಕ್ಕೆ ಇಳಿಸಲಾಗಿದೆ. ಎಲ್ಲಾ ಆಡಳಿತ ಮಂಡಳಿ ಸದಸ್ಯರು ಮತ್ತು ಸಂಸ್ಥೆಗಳ ಸದಸ್ಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ಶಾಂತಕುಮಾರ್ ಗೆಲ್ಲುವುದರಲ್ಲಿ ಯಾವುದೇ ಸಂಶಯವಿಲ್ಲ ಎಂದು ತಿಳಿಸಿದರು.
ಅಧ್ಯಕ್ಷೀಯ ಸ್ಥಾನದ ಅಭ್ಯರ್ಥಿ ಕೆ.ಎನ್. ಶಾಂತಕುಮಾರ್ ಮಾತನಾಡಿ, ೯ ದಶಕಗಳ ಕೆ.ಎಸ್.ಸಿ.ಎ.ಗೆ ದೀರ್ಘ ಹಾಗೂ ವೈಭವದ ಇತಿಹಾಸವಿದೆ. ತಮಗೆ ಕ್ರಿಕೆಟ್ ಕ್ಷೇತ್ರದಲ್ಲಿ ಅನುಭವವಿದೆ. ಕ್ರೀಡಾಪಟುವಾಗಿ, ಆಡಳಿತ ನಡೆಸಿದ ಅನುಭವವಿದೆ. ಒಳ್ಳೆಯ ಕೆಲಸ ಮಾಡುವ ವಿಶ್ವಾಸವಿದೆ. ಆದ್ದರಿಂದ ಮಂಡಳಿಯ ಸದಸ್ಯರು ತಮಗೆ ಮತನೀಡಿ ಬಹುಮತದಿಂದ ಗೆಲ್ಲಿಸಬೇಕು ಎಂದು ಕೋರಿದರು.