26, 27ರಂದು ಬೆಳಗಾವಿಯಲ್ಲಿ ಐತಿಹಾಸಿಕ ಕಾರ್ಯಕ್ರಮ: ಸಚಿವ ಜಾರಕಿಹೊಳಿ

KannadaprabhaNewsNetwork |  
Published : Dec 22, 2024, 01:31 AM IST
ಸಚಿವ ಸತೀಶ ಜಾರಕಿಹೊಳಿ  | Kannada Prabha

ಸಾರಾಂಶ

ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕನ್ನಡಪ್ರಭ ವಾರ್ತೆ ಬೆಳಗಾವಿ

ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಅಧಿವೇಶನಕ್ಕೆ 100 ವರ್ಷಗಳು ಪೂರ್ಣಗೊಂಡ ಹಿನ್ನೆಲೆಯಲ್ಲಿ ಡಿ. 26, 27ರಂದು ಬೆಳಗಾವಿಯಲ್ಲಿ ಶತಮಾನೋತ್ಸವ ಕಾರ್ಯಕ್ರಮ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ 150 ಜನ ಸಂಸದರು ಪಾಲ್ಗೊಳ್ಳಲಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಹೇಳಿದರು.

ಕಾಂಗ್ರೆಸ್‌ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸ್ವಾತಂತ್ರ್ಯಪೂರ್ವ 1924ರಲ್ಲಿ ಮಹಾತ್ಮ ಗಾಂಧಿಯವರು ಕಾಂಗ್ರೆಸ್ ಪಕ್ಷದ ಅಧ್ಯಕ್ಷತೆ ವಹಿಸಿ, ದೇಶದ ಸ್ವಾತಂತ್ರ್ಯ ಹೋರಾಟದ ನೇತೃತ್ವ ವಹಿಸಿದ್ದು ಅವಿಸ್ಮರಣೀಯ ಕ್ಷಣ. ಈ ಘಟನೆ ಮೆಲುಕು ಹಾಕಲು ಡಿ.26ರಂದು ಗಾಂಧಿ ಬಾವಿ ಬಳಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕಾರಿ ಸಭೆ ಕರೆಯಲಾಗಿದೆ. ಡಿ.27ರಂದು ಸಾರ್ವಜನಿಕ ಸಭೆ ಆಯೋಜಿಸಲಾಗಿದೆ ಎಂದು ವಿವರಿಸಿದರು.

ಸಭೆಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ಪಾಲ್ಗೊಳ್ಳಲಿದ್ದಾರೆ. ಇದೊಂದು ಐತಿಹಾಸಿಕ ಕಾರ್ಯಕ್ರಮವಾಗಿದ್ದು, ಎಲ್ಲ ಕಾಂಗ್ರೆಸ್ಸಿಗರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಕಾರ್ಯಕ್ರಮ ಯಶಸ್ವಿಗಾಗಿ ಕಾನೂನು ಸಚಿವ ಎಚ್.ಕೆ. ಪಾಟೀಲ, ಕೇಂದ್ರದ ಮಾಜಿ ಸಚಿವ ವೀರಪ್ಪ ಮೊಯ್ಲಿ, ಹಿರಿಯ ಮುಖಂಡರು ಸೇರಿದಂತೆ 60 ಜನರನ್ನು ಒಳಗೊಂಡ ಸಮಿತಿ ರಚಿಸಲಾಗಿದೆ. ಈ ಸಮಾರಂಭದಲ್ಲಿ ಕಾಂಗ್ರೆಸ್‌ ಪಕ್ಷದ ಮುಖಂಡರು, 150 ಸಂಸದರು ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿಗಳು ಭಾಗವಹಿಸಲಿದ್ದಾರೆ. ವಿಧಾನಸೌಧ ಆವರಣದಲ್ಲಿ ಮಹಾತ್ಮ ಗಾಂಧೀಜಿ ಪ್ರತಿಮೆ ಉದ್ಘಾಟನೆ ನಡೆಯಲಿದ್ದು, ನಂತರ ಸಾಂಸ್ಕೃತಿಕ ಕಾರ್ಯಕ್ರಮ ಜರುಗಲಿವೆ. ಎಲ್ಲ ಕಾರ್ಯಕ್ರಮಗಳಿಗೆ ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ಅಗತ್ಯ ಕ್ರಮ ಕೈಗೊಂಡಿದ್ದಾರೆ ಎಂದರು.

ಮಹಾತ್ಮ ಗಾಂಧೀಜಿಯವರ ಶತಮಾನೋತ್ಸವ ಕಾರ್ಯಕ್ರಮ ಹಿನ್ನೆಲೆಯಲ್ಲಿ ಈಗಾಗಲೇ ಬೆಳಗಾವಿ ನಗರದಲ್ಲಿ ಲೈಟಿಂಗ್‌ ಅಳವಡಿಸಿದ್ದು, ಸಾರ್ವಜನಿಕರು ಲೈಟಿಂಗ್‌ ವೀಕ್ಷಿಸುತ್ತಿದ್ದಾರೆ. ಇನ್ನು ಶತಮಾನೋತ್ಸವ ಕಾರ್ಯಕ್ರಮದಲ್ಲಿ ಪಕ್ಷ ಕೆಲವು ನಿರ್ಣಯ ತೆಗೆದುಕೊಳ್ಳುತ್ತದೆ ಎಂದು ಇದೇ ವೇಳೆ ತಿಳಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಸಹಕಾರದಿಂದ ಸಮೃದ್ಧಿ - ಸಹಕಾರ ಭಾರತಿಯಿಂದ ಸಹಕಾರ ಕ್ಷೇತ್ರದ ಬಲವರ್ಧನೆ
ದ್ವೇಷಭಾಷಣ ಬಿಲ್‌ಗೆ ಸಹಿ ಬೇಡ : ಗೌರ್ನರ್‌ಗೆ ಬಿಜೆಪಿ