ಕನ್ನಡಪ್ರಭ ವಾರ್ತೆ ಹೊಸದುರ್ಗ
ಪಟ್ಟಣದ ಎಸ್.ನಿಜಲಿಂಗಪ್ಪ ಪಿಯು ಕಾಲೇಜಿನಲ್ಲಿ ಶುಕ್ರವಾರ ಈ ಬಾರಿ ಹೆಚ್ಚು ಅಂಕಗಳಿಸಿ ಕಾಲೇಜಿಗೆ ಕೀರ್ತಿ ತಂದ ವಿದ್ಯಾರ್ಥಿಗಳನ್ನು ಶಿಕ್ಷಣ ಸಂಸ್ಥೆ ವತಿಯಿಂದ ಸನ್ಮಾನಿಸಿ ಮಾತನಾಡಿದರು.
ವಿದ್ಯಾರ್ಥಿಗಳು ಕೇವಲ ಸರ್ಕಾರಿ ಕೆಲಸಕ್ಕೆ ಹೋಗುವುದಕ್ಕೆ ಸೀಮಿತವಾಗದೇ, ಸ್ವತಃ ಉದ್ಯೋಗ ಸೃಷ್ಟಿಸುವ ಸಾಮರ್ಥ್ಯ ಬೆಳೆಸಿಕೊಳ್ಳಬೇಕು. ಇಂತಹ ಸಾಮರ್ಥ್ಯ ಹಾಗೂ ಕೌಶಲ್ಯ ಬೆಳೆಸಲು ನಮ್ಮ ಸಂಸ್ಥೆ ಬದ್ಧವಾಗಿದೆ. ನಮ್ಮ ಶಿಕ್ಷಣ ಸಂಸ್ಥೆಯಲ್ಲಿ ಸಮಯಕ್ಕೆ ಹೆಚ್ಚು ಮಹತ್ವ ಕೊಟ್ಟು, ನುರಿತ ಅನುಭವಿ ಅಧ್ಯಾಪಕರಿಂದ ಗುಣಮಟ್ಟದ ಶಿಕ್ಷಣ ಕೊಡಿಸುತ್ತಿರುವುದರಿಂದ ಉತ್ತಮ ಫಲಿತಾಂಶ ಬರಲಿಕ್ಕೆ ಸಾಧ್ಯವಾಗಿದೆ ಎಂದರು.ಅಕಾಡೆಮಿಕ್ ಡೈರೆಕ್ಟರ್ ಎಂ.ಬಿ.ತಿಪ್ಪೇಸ್ವಾಮಿ ಮಾತನಾಡಿ, ನಮ್ಮ ಸಂಸ್ಥೆಯ ವಿದ್ಯಾರ್ಥಿಗಳು ಪ್ರಯತ್ನ ಪಟ್ಟರೆ ಫಲಿತಾಂಶದಲ್ಲಿ ಇಡೀ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯಬಹುದು. ಆದರೂ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಗಳಿಗೂ ನಮ್ಮ ಸಂಸ್ಥೆಯಲ್ಲಿ ಪ್ರವೇಶ ಕಲ್ಪಿಸಿ, ಇಷ್ಟೊಂದು ಫಲಿತಾಂಶ ಬಂದಿರುವುದು ಶ್ಲಾಘನೀಯ. ಈ ರೀತಿ ಕಲಿಕೆಯಲ್ಲಿ ಹಿಂದುಳಿದಿರುವ ವಿದ್ಯಾರ್ಥಿಯನ್ನು ಅತ್ಯುತ್ತಮ ಶ್ರೇಣಿಯಲ್ಲಿ ಉತ್ತೀರ್ಣನಾಗುವಂತೆ ಮಾಡುವುದು ನಮ್ಮ ಸಂಸ್ಥೆಯ ಧ್ಯೇಯ ಎಂದು ತಿಳಿಸಿದರು.