ಕನ್ನಡಪ್ರಭ ವಾರ್ತೆ ಮಳವಳ್ಳಿ
ಜಿಲ್ಲಾ ಸಚಿವರು, ಶಾಸಕರು ಮೊದಲು ಜಾಗ ಯಾವುದು ಎನ್ನುವುದನ್ನು ಸ್ಪಷ್ಟಪಡಿಸಿ ಕಾಯ್ದಿರಿಸಿರುವ ಬಗ್ಗೆ ಖಾತರಿ ಪಡಿಸಿದಾಗ ಮಾತ್ರ ಕೈಗಾರಿಕೆ ಸ್ಥಾಪನೆಗೆ ಸಂಬಂಧಪಟ್ಟ ಇಲಾಖೆ ಮುಂದಾಗುವುದು. ಸುಮ್ಮನೆ ನಮ್ಮನ್ನು ಟೀಕಿಸುವುದನ್ನು ಬಿಟ್ಟು ಕೇಂದ್ರ ಸಚಿವರೊಂದಿಗೆ ಅಭಿವೃದ್ಧಿ ಕುರಿತು ಚರ್ಚೆ ನಡೆಸಲಿ ಎಂದರು.
ಮೇಕೆದಾಟು ಯೋಜನೆ ವಿಚಾರದಲ್ಲಿ ಸಹಕಾರ ನೀಡುವುದಾಗಿ ಕುಮಾರಸ್ವಾಮಿ ಅವರು ಹೇಳಿದ್ದಾರೆ. ಕೋರ್ಟ್ ನಲ್ಲಿ ಅರ್ಜಿ ವಜಾ ಆದ ಮೇಲೆ ಕೇಂದ್ರ ಸಚಿವರೊಂದಿಗೆ ಚರ್ಚಿಸಬೇಕು. ಆದರೆ, ಈ ಬಗ್ಗೆ ಏಕೆ ಚರ್ಚೆ ಮಾಡುತ್ತಿಲ್ಲ ಎಂದು ಸಚಿವರನ್ನು ಕುಟುಕಿದರು.ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಎಚ್.ಡಿ.ಕುಮಾರಸ್ವಾಮಿ ಹೇಳಿಕೆ ಸಮರ್ಥಿಸಿಕೊಂಡು ಅವರು, ಈ ಹಿಂದೆ ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಅನೇಕ ಮಂದಿಗೆ ಎಚ್.ಡಿ.ಕುಮಾರಸ್ವಾಮಿ ಅವರು ವೈಯಕ್ತಿಕ ಪರಿಹಾರ ನೀಡಿದ್ದಾರೆ. ಈ ಬಗ್ಗೆ ಸದನದಲ್ಲಿ ನಮ್ಮ ಪಕ್ಷದ ಶಾಸಕರು ಚರ್ಚಿಸಲು ಸಿದ್ಧರಿದ್ದಾರೆ. ಆದರೆ, ರಾಜ್ಯ ಸರ್ಕಾರದ ಅವಕಾಶ ನೀಡದೇ ಬೇರೆ ವಿಚಾರಕ್ಕೆ ಪ್ರತಿಭಟನೆ ನಡೆಸುತ್ತಾ ಕಾಲಹರಣ ಮಾಡುತ್ತಿದೆ ಎಂದು ಕಿಡಿಕಾರಿದರು.
ಮಾಜಿ ಶಾಸಕ ಕೆ.ಅನ್ನದಾನಿ ಮಾತನಾಡಿ, ತಾಲೂಕಿನ ಅಭಿವೃದ್ಧಿ ಹಾಗೂ ಯುವಕ-ಯುವತಿಯರಿಗೆ ಎಚ್.ಡಿ. ಕುಮಾರಸ್ವಾಮಿ ಅವರು ಉದ್ಯೋಗ ಸೃಷ್ಟಿಸಲು ಕೈಗಾರಿಕೆ ತರಲು ಮುಂದಾಗಿದ್ದಾರೆ. ಇಲ್ಲಿನ ಶಾಸಕರು ಮೊದಲು ಜಾಗವನ್ನು ಕೈಗಾರಿಕಾ ಸಂಬಂಧಪಟ್ಟ ಇಲಾಖೆಗೆ ಹಸ್ತಾಂತರಿಸಲಿ. ಅದನ್ನು ಬಿಟ್ಟು ಸುಮ್ಮನೆ ಟೀಕೆ ಮಾಡುವುದು ಸರಿಯಲ್ಲ. ಕೇಂದ್ರ ಸಚಿವರಿಗೆ ಅವರದ್ದೇ ಆದ ಜವಾಬ್ದಾರಿ ಇದೆ ಎನ್ನುವುದು ಅರಿತುಕೊಳ್ಳಲಿ ಎಂದು ಸಲಹೆ ನೀಡಿದರು.ಸುದ್ದಿಗೋಷ್ಠಿಯಲ್ಲಿ ಮುಖಂಡರಾದ ಮಲ್ಲೇಶ್, ಗಿರೀಶ್, ರಮೇಶ್, ರಾಜು, ಚಂದ್ರಶೇಖರ್, ರಾಮಣ್ಣ, ಧನ್ಯಕುಮಾರ್, ಟಿ.ನಂದಕುಮಾರ್, ಸಿದ್ದರಾಜು ಭಾಗವಹಿಸಿದ್ದರು.