ಎಚ್ಐವಿ ಏಡ್ಸ್ ಅರಿವು ಮಾಸಾಚರಣೆ- 2024: ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಸಮಾರೋಪ

KannadaprabhaNewsNetwork | Published : Sep 12, 2024 1:47 AM

ಸಾರಾಂಶ

ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ- ಎಚ್ಐವಿ ಏಡ್ಸ್ ಅರಿವು ಮಾಸಾಚರಣೆ- 2024ರ ಅಂಗವಾಗಿ ಮಡಿಕೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಸಂಪನ್ನಗೊಂಡಿತು.

ಕನ್ನಡಪ್ರಭ ವಾರ್ತೆ ಮಡಿಕೇರಿ

ಜಿಲ್ಲೆಯಲ್ಲಿ ಏಡ್ಸ್ ನಿಯಂತ್ರಣಕ್ಕೆ ಹಲವು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲಾಗಿದೆ. ವಿದ್ಯಾರ್ಥಿಗಳಲ್ಲಿ ಎಚ್ಐವಿ ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯ ತಡೆಗಟ್ಟುವುದು ಉಚಿತ ರಾಷ್ಟ್ರೀಯ ಸಹಾಯವಾಣಿ ಬಗ್ಗೆ ಮಾಹಿತಿ ನೀಡುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಸತೀಶ್ ಕುಮಾರ್ ಹೇಳಿದ್ದಾರೆ.

ರಾಜ್ಯ ಏಡ್ಸ್ ಪ್ರಿವೆನ್ಷನ್‌ ಸೊಸೈಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ ಆಶ್ರಯದಲ್ಲಿ ಜಿಲ್ಲಾ ಮಟ್ಟದ ಯುವಜನೋತ್ಸವ- ಎಚ್ಐವಿ ಏಡ್ಸ್ ಅರಿವು ಮಾಸಾಚರಣೆ- 2024ರ ಅಂಗವಾಗಿ ಮಡಿಕೇರಿಯಲ್ಲಿ ಮಂಗಳವಾರ ಆರೋಗ್ಯ ಇಲಾಖೆಯ ಸಭಾಂಗಣದಲ್ಲಿ ಆಯೋಜಿಸಿದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.ಆರ್‌ಸಿಎಚ್‌ ಅಧಿಕಾರಿ ಡಾ.ಮಧುಸೂದನ್, ಏಡ್ಸ್ ನಿಯಂತ್ರಣ ಘಟಕದ ಜಿಲ್ಲಾ ಮೇಲ್ವಿಚಾರಕಿ ಸುನಿತಾ ಮುತ್ತಣ್ಣ, ಕ್ವಿಜ್ ಮಾಸ್ಟರ್ ಸಿ.ಎಸ್.ಸುರೇಶ್, ಆಪ್ತ ಸಮಾಲೋಚಕರಾದ ಅಶ್ವಿತ, ಕಮಲ, ಉಷಾ ಮತ್ತಿತರರಿದ್ದರು.ಸ್ಪರ್ಧೆಯಲ್ಲಿ ಮಡಿಕೇರಿಯ ಕೇಂದ್ರೀಯ ವಿದ್ಯಾಲಯದ ಕೆ. ಸರ್ವದ್ ಶೆಣೈ ಮತ್ತು ನಹುಷ ಭೂಷಣ್ ನೌಶ ಭೂಷಣ್ ತಂಡ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಜಿಲ್ಲಾ ಮಟ್ಟದ ಸ್ಪರ್ಧೆಯಲ್ಲಿ ಈ ತಂಡ ಪ್ರಥಮ ಸ್ಥಾನ ಗಳಿಸಿ ಟ್ರೋಫಿ ಹಾಗೂ ರು.6000 ನಗದು ಪುರಸ್ಕಾರ ಪಡೆದುಕೊಂಡಿತು.ಕೂಡಿಗೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಸಿಂಜನ್ ಕೆ.ಜಿ ಹಾಗೂ ಆದಿತ್ಯ ಬಿ.ಎಸ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಕುಶಾಲನಗರದ ಫಾತಿಮ ಪ್ರೌಢಶಾಲೆಯ ವಿದ್ಯಾರ್ಥಿಗಳಾದ ಜೆಸಿಕಾ ಮನೋಜ್ ಮತ್ತು ಜೋಮಾ ಪಿ. ಜೋಸೆಫ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಮಾದಾಪುರದ ಶ್ರೀಮತಿ ಡಿ. ಚೆನ್ನಮ್ಮ ಪಿಯು ಕಾಲೇಜಿನ ವಿದ್ಯಾರ್ಥಿಗಳ ಸಚಿನ್ ಹಾಗೂ ಅಬ್ದುಲ್ ಮನಾಫ್ ತಂಡ ಸಮಾಧಾನಕರ ಬಹುಮಾನ ಪಡೆದರು.ಸ್ಪರ್ಧೆಯಲ್ಲಿ 25 ವಿವಿಧ ಪ್ರೌಢಶಾಲೆಗಳ 50 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 6,000 ರೂ.ನಗದು ಹಾಗೂ ಟ್ರೋಫಿ ವಿತರಿಸಲಾಯಿತು. ದ್ವಿತೀಯ ಸ್ಥಾನ ಪಡೆದ ವಿದ್ಯಾರ್ಥಿಗಳಿಗೆ 5,000 ರು. ನಗದು ಹಾಗೂ ಟ್ರೋಫಿ ವಿತರಿಸಲಾಯಿತು ತೃತೀಯ ಸ್ಥಾನ ಪಡೆದ ವಿದ್ಯಾರ್ಥಿಗಳ ತಂಡ 4000 ರು.ನಗದು ಹಾಗೂ ಟ್ರೋಫಿ ಪಡೆದುಕೊಂಡಿತು.

Share this article