ಕನ್ನಡಪ್ರಭ ವಾರ್ತೆ ಮಡಿಕೇರಿ
ಈ ಸ್ಪರ್ಧೆಯ ಮುಖ್ಯ ಉದ್ದೇಶ ಎಚ್‍ಐವಿ/ಏಡ್ಸ್ ಬಗ್ಗೆ ಅರಿವು, ಸೇವಾ ಸೌಲಭ್ಯಗಳ ಮಾಹಿತಿ, ಕಳಂಕ ಮತ್ತು ತಾರತಮ್ಯವನ್ನು ತಡೆಗಟ್ಟುವುದು, ಉಚಿತ ರಾಷ್ಟ್ರೀಯ ಸಹಾಯವಾಣಿ 1097, ಎಚ್.ಐ.ವಿ/ಎಡ್ಸ್ (ತಡೆಗಟ್ಟುವಿಕೆ ಹಾಗೂ ನಿಯಂತ್ರಣ) ಕಾಯಿದೆ 2017 ಮತ್ತಿತರ ಕುರಿತು ಅರಿವು ಮೂಡಿಸಲಾಯಿತು.
ಅದರಂತೆ ಕೊಡಗು ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಎಚ್.ಐ.ವಿ/ಏಡ್ಸ್ ಅರಿವು ಆಂದೋಲನ 2025-26ರ ಕಾರ್ಯಕ್ರಮದ ಅಂಗವಾಗಿ ಗುರುವಾರ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್‍ಷನ್ ಸೊಸೈಟಿ ಬೆಂಗಳೂರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕೊಡಗು ಜಿಲ್ಲೆ, ಜಿಲ್ಲಾ ಏಡ್ಸ್ ನಿಯಂತ್ರಣ ಘಟಕ, ಕೊಡಗು ಜಿಲ್ಲೆ ಇವರ ವತಿಯಿಂದ ಬೈಕ್ ರ್ಯಾಲಿ ನಡೆಯಿತು.ಈ ಕಾರ್ಯಕ್ರಮಕ್ಕೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಸತೀಶ್ ಕುಮಾರ್, ಜಿಲ್ಲಾ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ವಿ.ಟಿ.ವಿಸ್ಮಯಿ ಚಕ್ರವರ್ತಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ದೀಪಕ್, ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಸನತ್ ಕುಮಾರ್, ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಆನಂದ್ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ|| ಶ್ರೀನಿವಾಸ್ ಅವರು ಹಸಿರು ನಿಶಾನೆ ಮುಖಾಂತರ ಉದ್ಘಾಟಿಸಿದರು.
ಬೈಕ್ ರ್ಯಾಲಿಯು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಿಂದ ಹೊರಟು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕಚೇರಿ ತಲುಪಿತು.