ಎಂಸಿಎನ್ ವಿದ್ಯಾರ್ಥಿಗಳಿಂದ ಎಚ್‌ಐವಿ ಜಾಗೃತಿ ಬೀದಿ ನಾಟಕ

KannadaprabhaNewsNetwork |  
Published : Nov 13, 2026, 02:30 AM IST
12ಬೀದಿನಾಟಕ | Kannada Prabha

ಸಾರಾಂಶ

ಎಚ್‌ಐವಿ/ಏಡ್ಸ್ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು ಕುಂದಾಪುರದಲ್ಲಿ ಫ್ಲ್ಯಾಶ್‌ಮಾಬ್ ಮತ್ತು ಬೀದಿ ನಾಟಕಗಳನ್ನು ನಡೆಸಿದರು. ಉಡುಪಿ ಜಿಲ್ಲಾಡಳಿತ, ಕುಂದಾಪುರ ಸರ್ಕಾರಿ ಆಸ್ಪತ್ರೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ರೋಟರಿ ಕ್ಲಬ್ ಸನ್‌ರೈಸ್ ಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಕುಂದಾಪುರ: ಎಚ್‌ಐವಿ/ಏಡ್ಸ್ ತಡೆಗಟ್ಟುವ ಬಗ್ಗೆ ಜಾಗೃತಿ ಮೂಡಿಸುವ ಉದ್ದೇಶದಿಂದ ಇಲ್ಲಿನ ಮೂಡ್ಲಕಟ್ಟೆ ಕಾಲೇಜ್ ಆಫ್ ನರ್ಸಿಂಗ್‌ನ ವಿದ್ಯಾರ್ಥಿಗಳು ಕುಂದಾಪುರದಲ್ಲಿ ಫ್ಲ್ಯಾಶ್‌ಮಾಬ್ ಮತ್ತು ಬೀದಿ ನಾಟಕಗಳನ್ನು ನಡೆಸಿದರು. ಉಡುಪಿ ಜಿಲ್ಲಾಡಳಿತ, ಕುಂದಾಪುರ ಸರ್ಕಾರಿ ಆಸ್ಪತ್ರೆ, ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ, ರೋಟರಿ ಕ್ಲಬ್ ಸನ್‌ರೈಸ್ ಗಳ ಆಶ್ರಯದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಕುಂದಾಪುರ ಸರ್ಕಾರಿ ಆಸ್ಪತ್ರೆಯ ಹಿರಿಯ ಸ್ತ್ರೀರೋಗ ತಜ್ಞ ಡಾ. ಚಂದ್ರ ಮರಕಾಲ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕುಂದಾಪುರ ಸರ್ಕಾರಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಚಂದ್ರಶೇಖರ್ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಜಯಕರ್ ಶೆಟ್ಟಿ, ರೋಟರಿ ಕ್ಲಬ್‌ನ ಪೂರ್ಣಿಮಾ ರವಿಶಂಕರ್, ನರ್ಸಿಂಗ್‌ನ ಉಪಪ್ರಾಂಶುಪಾಲ ರೂಪಶ್ರೀ ಕೆ. ಎಸ್. ಹಾಗೂ ಕುಂದಾಪುರ ತಾಲೂಕು ಆಸ್ಪತ್ರೆಯ ಆಪ್ತಸಮಾಲೋಚಕಿ ನಳಿನಾಕ್ಷಿ ಉಪಸ್ಥಿತರಿದ್ದರು. ಸರ್ಕಾರಿ ಕಾಲೇಜಿನ ಉಪನ್ಯಾಸಕಿ ಸಂಧ್ಯಾ ಸ್ವಾಗತಿಸಿದರು. ಉದ್ಘಾಟನೆಯ ನಂತರ ಕುಂದಾಪುರದ ಸರ್ಕಾರಿ ಪಪೂ ಕಾಲೇಜು, ಹೊಸ ಬಸ್ ನಿಲ್ದಾಣ, ಪುರಸಭೆ ಹಾಗೂ ಸಂತೆ ಮಾರುಕಟ್ಟೆಗಳಲ್ಲಿ ಫ್ಲ್ಯಾಶ್‌ಮಾಬ್ ಮತ್ತು ಬೀದಿ ನಾಟಕಗಳನ್ನು ಪ್ರದರ್ಶಿಸಲಾಯಿತು ಪ್ರದರ್ಶಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಇಂದು ಗುಲಾಬಿ ಮೆಟ್ರೋ ಮಾರ್ಗ ಉದ್ಘಾಟನೆ
ಚಲ್ಲಘಟ್ಟ ಮೆಟ್ರೋ ಡಿಪೋ ಬಳಿ ಅಂಡರ್‌ಪಾಸ್‌