ಎಚ್‌ಐವಿ ಸೋಂಕಿತರು ಎಆರ್‌ಟಿ ಮಾತ್ರ ಸೇವಿಸಿ ಆರೋಗ್ಯಕರ ಜೀವನ ನಡೆಸಿ

KannadaprabhaNewsNetwork |  
Published : Dec 09, 2025, 01:30 AM IST
ಫೋಟೊ ಶೀರ್ಷಿಕೆ: 8ಆರ್‌ಎನ್‌ಆರ್9ರಾಣಿಬೆನ್ನೂರು ನಗರದ ನ್ಯಾಯಾಲಯದ ಆವರಣದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ವಿಶ್ವ ಏಡ್ಸ್ ದಿನಾಚರಣೆಯ ಜನ ಜಾಗೃತಿ ಜಾಥಾಗೆ ನ್ಯಾಯಾಧೀಶೆ ಹೇಮಲತಾ ಹುಲ್ಲೂರ ಚಾಲನೆ ನೀಡಿದರು. | Kannada Prabha

ಸಾರಾಂಶ

ಎಚ್‌ಐವಿ ಸೋಂಕಿತರು ಎಆರ್‌ಟಿ ಮಾತ್ರೆಗಳನ್ನು ತೆಗೆದುಕೊಳ್ಳುವುದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಹುಲ್ಲೂರ ಹೇಳಿದರು.

ರಾಣಿಬೆನ್ನೂರು: ಎಚ್‌ಐವಿ ಸೋಂಕಿತರು ಎಆರ್‌ಟಿ ಮಾತ್ರೆಗಳನ್ನು ತೆಗೆದುಕೊಳ್ಳುವುದರಿಂದ ಆರೋಗ್ಯಕರ ಜೀವನ ನಡೆಸಬಹುದು ಎಂದು ಪ್ರಧಾನ ಹಿರಿಯ ದಿವಾಣಿ ನ್ಯಾಯಾಧೀಶೆ ಹಾಗೂ ತಾಲೂಕು ಕಾನೂನು ಸೇವಾ ಸಮಿತಿಯ ಅಧ್ಯಕ್ಷೆ ಹೇಮಲತಾ ಹುಲ್ಲೂರ ಹೇಳಿದರು. ನಗರದ ನ್ಯಾಯಾಲಯದ ಆವರಣದಲ್ಲಿ ಸೋಮವಾರ ಕರ್ನಾಟಕ ರಾಜ್ಯ ಏಡ್ಸ್ ಪ್ರಿವೆನ್ಷನ್ ಸೊಸೈಟಿ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ತಾಲೂಕು ಕಾನೂನು ಸೇವಾ ಸಮಿತಿ, ಸಾರ್ವಜನಿಕ ಆಸ್ಪತ್ರೆ ಮತ್ತು ಮಹಿಳಾ ಮತ್ತು ಮಕ್ಕಳ ಆಸ್ಪತ್ರೆ ಸೇರಿದಂತೆ ವಿವಿಧ ಪ್ಯಾರಾಮೆಡಿಕಲ್ ಕಾಲೇಜ್‌ಗಳು ಹಾಗೂ ಸಂಘ ಸಂಸ್ಥೆಗಳ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ತಾಲೂಕ ಮಟ್ಟದ ವಿಶ್ವ ಏಡ್ಸ್ ದಿನಾಚರಣೆಯ ಜಾಥಾಗೆ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿ ಅವರು ಮಾತನಾಡಿದರು.ನ್ಯಾಯಾಧೀಶ ಆದಿತ್ಯ ಕುಮಾರ್ ಎಚ್.ಆರ್., ಟಿಎಚ್‌ಒ ಡಾ.ರಾಜೇಶ್ವರಿ ಕದರಮಂಡಲಗಿ, ಆಡಳಿತ ವೈದ್ಯಧಿಕಾರಿ ಡಾ.ರಾಜು ಶಿರೂರ, ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ನೀಲಕಂಠಸ್ವಾಮಿ ನ್ಯಾಮತಿ, ಎಸ್‌.ಎಂ. ಸಂತೋಷ್ ಕುಮಾರ್, ಆಪ್ತಸಮಾಲೋಚಕ ಆರ್.ಎಸ್. ರಾಮನಗೌಡ್ರ, ನಾಗರಾಜ ಕುಡುಪಲಿ, ಹರೀಶ್ ಸಣ್ಣಬೊಮ್ಮಾಜಿ, ದೇವಿಕಾ ಶಿಕ್ಷಣ ಸಂಸ್ಥೆಯ ಸಿಇಓ ದೇವಿಕಾ ರಾಣಿ, ವಕೀಲರ ಸಂಘದ ಪದಾಧಿಕಾರಿಗಳು, ತಾಲೂಕು ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗ ಮತ್ತು ಆಶಾಕಾರ್ಯಕರ್ತೆಯರು ಉಪಸ್ಥಿತರಿದ್ದರು.ನಂತರ ಜಾಗೃತಿ ಜಾಥಾ ನಗರದ ಪ್ರಮುಖ ಬೀದಿಗಳಲ್ಲಿ ಎಚ್‌ಐವಿ ಜನ ಜಾಗೃತಿ ಸಂಬಂಧಿಸಿದ ಘೋಷಣೆಗಳನ್ನು ಕೂಗುತ್ತಾ ಸಾಗಿದರು.ಯಕ್ಲಾಸಪುರದ ಜನನಿ ಕಲಾತಂಡ ಸದಸ್ಯರು ಜಾನಪದ ಹಾಗೂ ಬೀದಿ ನಾಟಕದ ಮೂಲಕ ಎಚ್‌ಐವಿ ಏಡ್ಸ್ ಜಾಗೃತಿ ಮೂಡಿಸಿದರು.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಜೈಲಲ್ಲೂ ದರ್ಶನ್‌ಗೆ ‘ಅಭಿಮಾನಿಗಳು’ ಕಾಟ!
ನಾಳೆ ಹಲವು ಸಾಧಕರಿಗೆ ಗಾಂಧಿ ಪುರಸ್ಕಾರ ಪ್ರದಾನ