ಕನ್ನಡಪ್ರಭ ವಾರ್ತೆ ಗದಗ
ಜಿಲ್ಲಾಡಳಿತ, ಜಿಪಂ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಏಡ್ಸ್ ತಡೆಗಟ್ಟುವಿಕೆ ಮತ್ತು ನಿಯಂತ್ರಣ ಘಟಕ, ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಬಸವೇಶ್ವರ ಹಿರಿಯ ಪ್ರಾಥಮಿಕ ಮತ್ತು ಪ್ರೌಢಶಾಲೆಯ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
18 ವರ್ಷ ಮೇಲ್ಪಟ್ಟ, 45 ಕೆಜಿಗಿಂತ ಅಧಿಕ ತೂಕ ಹಾಗೂ 12.5 ಗ್ರಾಂ, ಡಿಎಲ್‌ಗಿಂತ ಹೆಚ್ಚು ಹಿಮೋಗ್ಲೋಬಿನ್ ಹೊಂದಿರುವ ಆರೋಗ್ಯವಂತರು ಯಾರು ಬೇಕಾದರೂ ರಕ್ತದಾನ ಮಾಡಬಹುದು. ರಕ್ತದಾನ ಮಾಡುವುದರಿಂದ ಹೊಸ ರಕ್ತ ಉತ್ಪಾದನೆಗೆ ಪ್ರೇರಣೆ ಸಿಗುವುದಲ್ಲದೆ, ಕ್ಯಾನ್ಸರ್ ಹಾಗೂ ಹೃದ್ರೋಗದ ಅಪಾಯವನ್ನು ತಡೆಯಬಹುದು. ಹೀಗಾಗಿ ಪ್ರತಿಯೊಬ್ಬರೂ ಜೀವಿತಾವಧಿಯಲ್ಲಿ ಕನಿಷ್ಠ ಒಂದು ಬಾರಿಯಾದರೂ ರಕ್ತದಾನ ಮಾಡಬೇಕು ಎಂದರು.ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿಕ್ಷಕರ ಸಂಘದ ಕಾರ್ಯದರ್ಶಿ ಎಂ.ಎಸ್. ಧಾರವಾಡ ಮಾತನಾಡಿ, ವಿದ್ಯಾರ್ಥಿ ಜೀವನ ಅತ್ಯಂತ ಅಮೂಲ್ಯವಾಗಿದ್ದು, ಸಿಗುವ ಉತ್ತಮ ಅವಕಾಶಗಳನ್ನು ಬಳಸಿಕೊಂಡು ಆರೋಗ್ಯವಂತರಾಗಿ ಗುರಿ ಸಾಧಿಸಬೇಕು ಎಂದರು. ಡಿಡಿಪಿಐ ಕಚೇರಿಯ ವಿಷಯ ಪರಿವೀಕ್ಷಕ ಯರಗುಡಿ ಮಾತನಾಡಿ, ವಿದ್ಯಾರ್ಥಿಗಳು ಮೊಬೈಲ್ ಗೀಳಿನಿಂದ ಹೊರಬಂದು ಸಂಸ್ಕಾರಯುತ ಶಿಕ್ಷಣದೊಂದಿಗೆ ಸನ್ನಡತೆ ಮೈಗೂಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಸ್ಪರ್ಧೆಯಲ್ಲಿ ಹೊಳೆಮಣ್ಣೂರ ಸರ್ಕಾರಿ ಪ್ರೌಢಶಾಲೆಯ ಸೋನಿಯಾ ನದಾಫ್ ಹಾಗೂ ಹೇಮಾವತಿ ಪ್ರಥಮ ಸ್ಥಾನ ಗಳಿಸಿದರೆ, ಶಿರುಂಜ ಸರ್ಕಾರಿ ಪ್ರೌಢಶಾಲೆಯ ಸಮರ್ಥ ಶಿಂದೆ ಮತ್ತು ಮಲ್ಲಣ್ಣ ಮಲ್ಲಣ್ಣವರ ದ್ವಿತೀಯ ಸ್ಥಾನ ಪಡೆದರು. ಇಟಗಿ ಸರ್ಕಾರಿ ಪ್ರೌಢಶಾಲೆಯ ಸುನೀತಾ ಚನ್ನಪ್ಪಗೌಡರ ಹಾಗೂ ಕಾವ್ಯಾ ಮಾಸಗಿ ತೃತೀಯ ಸ್ಥಾನ ಪಡೆದುಕೊಂಡರು. ವಿಜೇತರಿಗೆ ಪ್ರಶಸ್ತಿ ಪತ್ರದೊಂದಿಗೆ ನಗದು ಬಹುಮಾನ ನೀಡಲಾಯಿತು.