ಗದಗ: ಡಿ.ಕೆ. ಶಿವಕುಮಾರ ಮುಂದಿನ ಮುಖ್ಯಮಂತ್ರಿ ಆಗುತ್ತಾರೆ, ಅವರ ಸಚಿವ ಸಂಪುಟದಲ್ಲಿ ತಮ್ಮ ಮಂತ್ರಿ ಸ್ಥಾನ ಖಚಿತ ಪಡಿಸಿಕೊಳ್ಳುವುದಕ್ಕಾಗಿ ಎಚ್.ಕೆ. ಪಾಟೀಲ ಅವರು ಈಗ ಪತ್ರ ರಾಜಕಾರಣ ಪ್ರಾರಂಭ ಮಾಡುತ್ತಿದ್ದಾರೆ ಎಂದು ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಆರೋಪಿಸಿದರು.
ರಾಜ್ಯದ ಸಂಪತ್ತು ರಾಜ್ಯಕ್ಕೆ ಬರಬೇಕು ಎಂದು ತಿಳಿಸಿದ್ದಾರೆ. ಹಾಗಾದರೆ ಈ ಹಿಂದೆ ಇವರ ಸರ್ಕಾರ ಅಧಿಕಾರಕ್ಕೆ ಬಂದ ತಕ್ಷಣವೇ ಇದು ಎಚ್.ಕೆ. ಪಾಟೀಲ ಅವರಿಗೆ ಗೊತ್ತಿರಲಿಲ್ಲವೇ? ಆದರೆ ಮುಖ್ಯಮಂತ್ರಿ ಬದಲಾವಣೆ ಸಂದರ್ಭದಲ್ಲೇ ಈ ಪತ್ರ ಬರೆದಿರುವುದರ ಹಿಂದೆ ರಾಜಕೀಯ ಉದ್ದೇಶ ಅಡಗಿರುವುದು ಮಾತ್ರ ಸ್ಪಷ್ಟವಾಗಿ ಗೋಚರವಾಗುತ್ತಿದೆ ಎಂದು ಹೇಳಿದರು.
ಕಾನೂನು ಸಚಿವರ ತವರು ಜಿಲ್ಲೆಯ ಅನೇಕ ಭ್ರಷ್ಟ ಅಧಿಕಾರಿಗಳು ಲೋಕಾಯುಕ್ತರ ಬಲೆಗೆ ಬಿದ್ದಿದ್ದಾರೆ. ದಾಳಿ ನಂತರವೂ ಅದೇ ಜಾಗದಲ್ಲಿ ಮುಂದುವರಿದಿದ್ದಾರೆ. ಗದಗ ಮತಕ್ಷೇತ್ರದ ಜನರ ಹಣ ಸುಲಿಗೆ ಮಾಡಿದ ಅಧಿಕಾರಿಗಳನ್ನು ಮೊದಲು ವರ್ಗಾವಣೆ ಮಾಡಿ ಎಂದು ಹೇಳಿದರು.ಸುದ್ದಿಗೋಷ್ಠಿಯಲ್ಲಿ ಎಂ.ಎಸ್. ಪರ್ತಗೌಡ್ರ, ಬಸವರಾಜ ಅಪ್ಪಣ್ಣವರ, ರಮೇಶ ಹುಣಸಿಮರದ, ಸಂತೋಷ ಪಾಟೀಲ, ಅಭಿಷೇಕ ಕಂಬಳಿ, ಪ್ರಫುಲ್ ಪುಣೇಕರ್, ಹರೀಶ ಹಡಗಲಿಮಠ ಹಾಜರಿದ್ದರು.