ಸಾಮಾಜಿಕ ಜಾಲತಾಣದಲ್ಲಿ ಎಚ್ಕೆ ಭಾವನಾತ್ಮಕ ಪೋಸ್ಟ್

KannadaprabhaNewsNetwork |  
Published : Jun 04, 2026, 02:00 AM IST
ಮಾಜಿ ಸಚಿವ ಎಚ್.ಕೆ. ಪಾಟೀಲ ಸಾಮಾಜಿಕ ಜಾಲತಾಣಗಳಲ್ಲಿ ಹಾಕಿರುವ ಪೋಸ್ಟ್. | Kannada Prabha

ಸಾರಾಂಶ

ಬುಧವಾರ ಬೆಳಗ್ಗೆ ದೆಹಲಿಯಿಂದ ಆಗಮಿಸಿದ ಎಚ್.ಕೆ. ಪಾಟೀಲ ಅವರು, ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆಯಲ್ಲಿಯೇ ನನಗೆ ಸಚಿವ ಸ್ಥಾನ ಕೊಡುವ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಬೇಸರದಿಂದಲೇ ಹೇಳಿದ್ದರು.

ಗದಗ: "ಮಹಾಜನತೆ, ನನ್ನ ಮೇಲಿಟ್ಟಿರುವ ಪ್ರೀತಿ, ವಿಶ್ವಾಸ ಮತ್ತು ಅಭಿಮಾನಕ್ಕೆ ನಾನು ಚಿರಋಣಿ. ಸಿದ್ಧಾಂತ ನಿಷ್ಠರಿಗೆ ಹಾದಿ ಯಾವಾಗಲೂ ಕಠಿಣವೇ. ಹೈಕಮಾಂಡ್ ನಿರ್ಧಾರಕ್ಕೆ ಒಪ್ಪೋಣ " ಎಂದು ಮಾಜಿ ಸಚಿವ ಎಚ್‌.ಕೆ.ಪಾಟೀಲ್‌ ಪೋಸ್ಟ್ ಮಾಡಿದ್ದು, ಅದು ಸಾಕಷ್ಟು ಚರ್ಚೆಗೆ ಕಾರಣವಾಗಿದೆ.

ಬುಧವಾರ ಬೆಳಗ್ಗೆ ದೆಹಲಿಯಿಂದ ಆಗಮಿಸಿದ ಎಚ್.ಕೆ. ಪಾಟೀಲ ಅವರು, ಮಾಧ್ಯಮಗಳೊಂದಿಗೆ ಮಾತನಾಡುವ ವೇಳೆಯಲ್ಲಿಯೇ ನನಗೆ ಸಚಿವ ಸ್ಥಾನ ಕೊಡುವ ನಿರ್ಧಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದು ಬೇಸರದಿಂದಲೇ ಹೇಳಿದ್ದರು. ಮಧ್ಯಾಹ್ನ 12.30ರ ವೇಳೆಗೆ ಹೈಕಮಾಂಡ್‌ನಿಂದ ಬಂದ ಪಟ್ಟಿಯಲ್ಲಿ ಇವರ ಹೆಸರು ಇಲ್ಲದೇ ಇರುವುದು ಅಧಿಕೃತಗೊಳ್ಳುತ್ತಿದ್ದಂತೆ ಎಲ್ಲರೂ ಕಸಿವಿಸಿಕೊಂಡರು. ನಂತರ ಅವರು ತಮ್ಮ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಅತ್ಯಂತ ಭಾವನಾತ್ಮಕವಾದ ಈ ಪೋಸ್ಟ್‌ ಮಾಡಿದ್ದಾರೆ.ಗ್ರಾಮೀಣ ಪತ್ರಕರ್ತರಿಗೆ ಬಸ್ ಪಾಸ್‌ಗೆ ಅರ್ಜಿ

ಗದಗ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ದಿನಪತ್ರಿಕೆಗಳು, ಮಾಧ್ಯಮ ಸಂಸ್ಥೆಗಳಲ್ಲಿ ತಾಲೂಕು ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಪತ್ರಕರ್ತರಿಗೆ ತಿದ್ದುಪಡಿ ಮಾಡಲಾದ ಹೊಸ ಮಾರ್ಗಸೂಚಿಯನ್ವಯ ಉಚಿತ ಬಸ್ ಪಾಸ್ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಪತ್ರಕರ್ತರು ಕಾರ್ಯ ನಿರ್ವಹಿಸುತ್ತಿರುವ ಸಂಸ್ಥೆಗಳಲ್ಲಿ ಪೂರ್ಣಾವಧಿ, ಅರೆಕಾಲಿಕ ವರದಿಗಾರರಾಗಿ ನೇಮಕವಾಗಿದ್ದಲ್ಲಿ ಆಯಾ ಮಾಧ್ಯಮ ಸಂಸ್ಥೆಯ ಸಂಪಾದಕರು, ಸ್ಥಾನಿಕ ಸಂಪಾದಕರು, ಮುಖ್ಯಸ್ಥರ ಶಿಫಾರಸು ಪತ್ರ ಮತ್ತು ಸೇವಾ ಪ್ರಮಾಣಪತ್ರವನ್ನು ಲಗತ್ತಿಸಿ ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.ತಾಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ಸೇವಾ ಸಿಂಧು ಪೋರ್ಟಲ್ ಮೂಲಕ ಜೂ. 20ರೊಳಗೆ ಅರ್ಜಿಗಳನ್ನು ಸಲ್ಲಿಸಬೇಕು ಎಂದು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತ ಹೇಮಂತ್ ನಿಂಬಾಳ್ಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

PREV
Get the latest news from across Karnataka (ಕರ್ನಾಟಕ ನ್ಯೂಸ್)— breaking headlines, politics, local developments, crime reports, district updates, civic issues and more. Stay informed with Kannada Prabha’s real‑time Karnataka news coverage.

Recommended Stories

ಅಖಂಡ ಧಾರವಾಡ ಜಿಲ್ಲೆಗೆ ಸಿಗದ ಸಚಿವಗಿರಿ!
ಇಂಧನ ಅಭಾವದ ವದಂತಿಗೆ ಕಿವಿಗೊಡದಿರಿ: ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ